Jasprit Bumrah: ಎನ್‌ಸಿಎಗೆ ಆಗಮಿಸಿದ ಬುಮ್ರಾ; ಮುಂದಿನ ವಾರ ಫಿಟ್ನೆಸ್ ವರದಿ ಪ್ರಕಟ
ಒಂದೊಮ್ಮೆ ಜಸ್‌ಪ್ರೀತ್ ಬುಮ್ರಾ ಅಲಭ್ಯರಾದರೆ ಹರ್ಷಿತ್ ರಾಣಾ ಅವರು ಬುಮ್ರಾ ಸ್ಥಾನವನ್ನು ತುಂಬುವ ನಿರೀಕ್ಷೆ ಇದೆ. ಇದೇ ಕಾರಣಕ್ಕೆ ಅವರನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲು ಕಾರಣ.
Bumrah -
Abhilash BC
Feb 4, 2025 11:33 AM
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಬೆನ್ನು ನೋವಿನ ಗಾಯಕ್ಕೆ ತುತ್ತಾಗಿದ್ದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್‌ಪ್ರೀತ್ ಬುಮ್ರಾ ತನ್ನ ಫಿಟ್ನೆಸ್ ಪರಿಶೀಲನೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ(ಎನ್‌ಸಿಎ) ಆಗಮಿಸಿದ್ದಾರೆ.
31 ವರ್ಷದ ಬುಮ್ರಾ ಫಿಟ್ನೆಸ್ ಪರಿಶೀಲನೆಯ ಬಳಿಕ ಎನ್‌ಸಿಎ ವೈದ್ಯಕೀಯ ತಂಡ ಅಜಿತ್ ಅಗರ್ಕರ್ ಸಾರಥ್ಯದ ಆಯ್ಕೆ ಸಮಿತಿಗೆ ತನ್ನ ವರದಿಯನ್ನು ಸಲ್ಲಿಸುತ್ತದೆ. ಆ ಬಳಿಕ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡ ಅಧಿಕೃತ ಮಾಹಿತಿ ನೀಡಲಿದೆ.
ಒಂದೊಮ್ಮೆ ಜಸ್‌ಪ್ರೀತ್ ಬುಮ್ರಾ ಅಲಭ್ಯರಾದರೆ ಹರ್ಷಿತ್ ರಾಣಾ ಅವರು ಬುಮ್ರಾ ಸ್ಥಾನವನ್ನು ತುಂಬುವ ನಿರೀಕ್ಷೆ ಇದೆ. ಇದೇ ಕಾರಣಕ್ಕೆ ಅವರನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲು ಕಾರಣ.
ಇದನ್ನೂ ಓದಿ Champions Trophy: ಚಾಂಪಿಯನ್ಸ್ ಟ್ರೋಫಿ ಉದ್ಘಾಟನ ಸಮಾರಂಭ ರದ್ದು
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬುಮ್ರಾ ಚೇತರಿಕೆಗೆ ಕನಿಷ್ಠ 3 ವಾರಗಳ ಅಗತ್ಯವಿದೆ ಎಂದು ತಿಳಿಸಿದೆ. ಹೀಗಾಗಿ ಬಿಸಿಸಿಐ ಹರ್ಷಿತ್ ರಾಣಾ ಅಥವಾ ಮೊಹಮ್ಮದ್ ಸಿರಾಜ್ ಅವರನ್ನು ಬುಮ್ರಾಗೆ 'ಬ್ಯಾಕ್ಅಪ್' ಬೌಲರ್ ಆಗಿ ಸಿದ್ಧಪಡಿಸಲು ಆಯ್ಕೆ ಸಮಿತಿಗೆ ಸೂಚನೆ ನೀಡಿದೆ ಎಂದು ವರದಿ ಮಾಡಿದೆ.
ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯದ ಟಿಕೆಟ್‌ಗಳು ಒಂದೇ ಗಂಟೆಯೊಳಗೆ ಮಾರಾಟವಾಗಿದೆ. ಹೈಬ್ರೀಡ್ ಮಾದರಿಯಲ್ಲಿ ನಡೆಯುವ ಈ ಟೂರ್ನಿಯಲ್ಲಿ ಭಾರತ(India vs Pakistan) ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
19 ದಿನಗಳ ಕಾಲ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಫೆಬ್ರವರಿ 19ರಂದು ಹಾಲಿ ಚಾಂಪಿಯನ್ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ.