#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

ವರುಣ್‌ ಚಕ್ರವರ್ತಿ ಇನ್‌, ಜಸ್‌ಪ್ರೀತ್‌ ಬುಮ್ರಾ ಔಟ್‌: ಚಾಂಪಿಯನ್ಸ್‌ ಟ್ರೋಫಿಗೆ ಭಾರತದ ಪರಿಷ್ಕೃತ ತಂಡ!

India's Champions Trophy Updated Squad: ಮುಂಬರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಪರಿಷ್ಕೃತಗೊಳಿಸಿದೆ. ಗಾಯದಿಂದ ಇನ್ನೂ ಗುಣಮುಖರಾಗದ ಜಸ್‌ಪ್ರೀತ್‌ ಬುಮ್ರಾ ಅವರನ್ನು ಕೈ ಬಿಟ್ಟು ಅವರ ಸ್ಥಾನಕ್ಕೆ ಹರ್ಷಿತ್‌ ರಾಣಾಗೆ ಅವಕಾಶ ನೀಡಿದ್ದರೆ, ಯಶಸ್ವಿ ಜೈಸ್ವಾಲ್‌ ಸ್ಥಾನಕ್ಕೆ ವರುಣ್‌ ಚಕ್ರವರ್ತಿಗೆ ತಂಡದಲ್ಲಿ ಚಾನ್ಸ್‌ ನೀಡಲಾಗಿದೆ.

2025ರ ಚಾಂಪಿಯನ್ಸ್‌ ಟ್ರೋಫಿಗೆ ಭಾರತದ ಪರಿಷ್ಕೃತ ತಂಡ ಪ್ರಕಟ!

Varun Chakravarthy , Jasprit Bumrah

Profile Ramesh Kote Feb 12, 2025 3:45 PM

ನವದೆಹಲಿ: ಗಾಯದಿಂದ ಇನ್ನೂ ಸಂಪೂರ್ಣ ಗುಣಮುಖರಾಗದ ಹಿರಿಯ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರನ್ನು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಭಾರತ ತಂಡದಿಂದ ಕೈ ಬಿಡಲಾಗಿದೆ. ಇವರ ಬದಲು ಯುವ ವೇಗಿ ಹರ್ಷಿತ್‌ ರಾಣಾಗೆ ಅವಕಾಶ ನೀಡಲಾಗಿದೆ. ಇನ್ನು ಆರಂಭಿಕ ಬ್ಯಾಟ್ಸ್‌ಮನ್‌ ಯಶಸ್ವಿ ಜೈಸ್ವಾಲ್‌ ಅವರ ಸ್ಥಾನಕ್ಕೆ ವರುಣ್‌ ಚಕ್ರವರ್ತಿಯನ್ನು ಸೇರಿಸಿಕೊಳ್ಳಲಾಗಿದೆ.

ಫೆಬ್ರವರಿ 19 ರಂದು ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಮಂಗಳವಾರ ತಡರಾತ್ರಿ ಭಾರತ ತಂಡದ ಆಟಗಾರರನ್ನು ಪರಿಷ್ಕೃತಗೊಳಿಸಲಾಗಿದೆ. ಗಾಯ ಹಾಗೂ ತಂಡದ ಸಂಯೋಜನೆಯ ಉದ್ದೇಶದಿಂದ ಬಿಸಿಸಿಐ, ಈ ಹಿಂದೆ ಪ್ರಕಟಿಸಿದ್ದ ತಂಡದಲ್ಲಿ ಕೆಲ ಬದಲಾವಣೆಗಳನ್ನು ಮಾಡಿದೆ.

IND vs ENG 3rd ODI: ಟಾಸ್‌ ಸೋತ ಭಾರತ ಮೊದಲು ಬ್ಯಾಟಿಂಗ್‌!

ಜಸ್‌ಪ್ರೀತ್‌ ಬುಮ್ರಾ ಔಟ್‌

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಭಾರತ ತಂಡದಲ್ಲಿ ಜಸ್‌ಪ್ರೀತ್‌ ಬುಮ್ರಾ ಈ ಹಿಂದೆ ಅವಕಾಶ ಪಡೆದುಕೊಂಡಿದ್ದರು. ಆದರೆ, ಅವರು ಕೆಳ ಬೆನ್ನಿನ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಕಾರಣದಿಂದ ಅವರನ್ನು ಕೈ ಬಿಡಲಾಗಿದ್ದು, ಅವರ ಸ್ಥಾನಕ್ಕೆ ಕೋಲ್ಕತಾ ನೈಟ್‌ ರೈಡರ್ಸ್‌ ವೇಗಿ ಹರ್ಷಿತ್‌ ರಾಣಾಗೆ ಅವಕಾಶದ ಬಾಗಿಲು ತೆರೆದಿದೆ. ಆ ಮೂಲಕ ಮೊಹಮ್ಮದ್‌ ಸಿರಾಜ್‌ ಅವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ಇಂಗ್ಲೆಂಡ್‌ ವಿರುದ್ಧ ಮೊದಲನೇ ಪಂದ್ಯದಲ್ಲಿ ಹರ್ಷಿತ್‌ ರಾಣಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಈ ಪಂದ್ಯದಲ್ಲಿ ಅವರು ಮೂರು ವಿಕೆಟ್‌ಗಳನ್ನು ಕಬಳಿಸಿದ್ದರು.



ಯಶಸ್ವಿ ಜೈಸ್ವಾಲ್‌ ಸ್ಥಾನಕ್ಕೆ ವರುಣ್‌ ಚಕ್ರವರ್ತಿ

ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶನ ತೋರಿದ್ದ ವರುಣ್‌ ಚಕ್ರವರ್ತಿಯನ್ನು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಭಾರತ ತಂಡದಲ್ಲಿ ಯಶಸ್ವಿ ಜೈಸ್ವಾಲ್‌ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಜೈಸ್ವಾಲ್‌ ಅವರನ್ನು ಮೀಸಲು ಆಟಗಾರನಾಗಿ ಉಳಿಸಿಕೊಳ್ಳಲಾಗಿದೆ. ಕಟಕ್‌ನಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ವರುಣ್‌ ಚಕ್ರವರ್ತಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ತಮ್ಮ ಪದಾರ್ಪಣೆ ಪಂದ್ಯದಲ್ಲಿ ವರುಣ್‌ 53 ರನ್‌ ನೀಡಿ ಒಂದು ವಿಕೆಟ್‌ ಪಡೆದಿದ್ದರು.

ಭರ್ಜರಿ ಫಾರ್ಮ್‌ನಲ್ಲಿ ವರುಣ್‌ ಚಕ್ರವರ್ತಿ

ನಾಗ್ಪರ ಪಂದ್ಯದಲ್ಲಿಯೇ ಯಶಸ್ವಿ ಜೈಸ್ವಾಲ್‌ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆದರೆ, ವಿರಾಟ್‌ ಕೊಹ್ಲಿ ಎರಡನೇ ಪಂದ್ಯಕ್ಕೆ ಮರಳಿದ ಬಳಿಕ ಎಡಗೈ ಬ್ಯಾಟ್ಸ್‌ಮನ್‌ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದರು. ಜೈಸ್ವಾಲ್‌ ಸ್ಥಾನಕ್ಕೆ ಬಂದಿರುವ ವರುಣ್‌ ಚಕ್ರವರ್ತಿ ಪ್ರಸ್ತುತ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಅವರು ಇಂಗ್ಲೆಂಡ್‌ ವಿರುದ್ಧ 5 ಪಂದ್ಯಗಳ ಟಿ20ಐ ಸರಣಿಯಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದರು ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. 2024ರ ಅಕ್ಟೋಬರ್‌ನಿಂದಲೂ ವರುಣ್‌ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಅವರು ಅಂದಿನಿಂದ ಇಲ್ಲಿಯವರೆಗೂ 12 ಇನಿಂಗ್ಸ್‌ಗಳಿಂದ 31 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಯಶಸ್ವಿ ಜೈಸ್ವಾಲ್‌ ಅಗತ್ಯವಿಲ್ಲ ಎಂದ ಆಕಾಶ ಚೋಪ್ರಾ!

2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಭಾರತ ಪರಿಷ್ಕೃತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಮೀಸಲು ಆಟಗಾರರು: ಯಶಸ್ವಿ ಜೈಸ್ವಾಲ್‌, ಮೊಹಮ್ಮದ್‌ ಸಿರಾಜ್‌ ಹಾಗೂ ಶಿವಂ ದುಬೆ