ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ(Jammu-Kashmir) ಸೋಪೋರ್ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆ(JK Encounter) ನಡೆದಿದ್ದು,ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೋಪೋರ್ ಜಿಲ್ಲೆಯ ಜಲೂರಾ ಗುಜ್ಜರ್ಪತಿಯಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ ಬೆನ್ನಲ್ಲೇ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದವು. ಈ ವೇಳೆ ಉಗ್ರರು ಮತ್ತು ಯೋಧದ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಆಗ ಉಗ್ರರ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಇನ್ನು ಸ್ಥಳದಲ್ಲಿ ಬಿಗಿ ಕಣ್ಗಾವಲು ಇಡಲಾಗಿದ್ದು, ಆ ಪ್ರದೇಶದಲ್ಲಿ ಶಂಕಿತ ಭಯೋತ್ಪಾದಕರಿಗಾಗಿ ಹುಡುಕಾಟವನ್ನು ತೀವ್ರಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಜಮ್ಮು ಹೊರವಲಯದಲ್ಲಿ ಎನ್‌ಕೌಂಟರ್: ಮೂವರು ಉಗ್ರರ ಹತ್ಯೆ