ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Mysterious Illness : ಜಮ್ಮು ಕಾಶ್ಮೀರದಲ್ಲಿ ನಿಗೂಢ ಕಾಯಿಲೆಗೆ 17 ಬಲಿ ; ಕಂಟೈನ್‌ಮೆಂಟ್ ಝೋನ್‌ ಘೋಷಣೆ

ರಜೌರಿ ಜಿಲ್ಲೆಯ ಬಾಧಲ್ ಗ್ರಾಮದಲ್ಲಿ ಕಂಟೈನ್‌ಮೆಂಟ್ ವಲಯ ಮತ್ತು ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಗ್ರಾಮಕ್ಕೆ ಹೋಗುವ ಎಲ್ಲಾ ಮಾರ್ಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಪಡಿತರದಿಂದ ಕುಡಿಯುವ ನೀರಿನವರೆಗೆ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಂಟೈನ್‌ಮೆಂಟ್ ಝೋನ್‌ ಘೋಷಣೆ ; ನಿಗೂಢ ಕಾಯಿಲೆಗೆ ಇನ್ನೂ ಪತ್ತೆಯಾಗದ ಕಾರಣ

Jammu & Kashmir

Profile Vishakha Bhat Jan 25, 2025 3:00 PM

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu & Kashmir) ನಿಗೂಢ ಕಾಯಿಲೆಯೊಂದು (Mysterious Illness) ಕಾಣಿಸಿಕೊಂಡು ಇದು ವರೆಗೂ 17 ಜೀವಗಳನ್ನು ಬಲಿ ಪಡೆದಿದೆ. ಸಾವಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಶನಿವಾರ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದಲ್ಲಿ ಕಂಟೈನ್‌ಮೆಂಟ್ ವಲಯ ಮತ್ತು ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಗ್ರಾಮಕ್ಕೆ ಹೋಗುವ ಎಲ್ಲಾ ಮಾರ್ಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಪಡಿತರದಿಂದ ಹಿಡಿದು ಕುಡಿಯುವ ನೀರಿನವರೆಗೆ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ.

ನಿಗೂಢ ಕಾಯಿಲೆ ಹರಡುವುದನ್ನು ತಡೆಗಟ್ಟಲು ಸಾರ್ವಜನಿಕ ಮತ್ತು ಖಾಸಗಿ ಕಾರ್ಯಕ್ರಮಗಳ ಮೇಲೆ ನಿರ್ಬಂಧವನ್ನು ಹೇರಲಾಗಿದೆ. ಅನಾರೋಗ್ಯದ ಕಾರಣ ಪತ್ತೆ ಮಾಡಲು ಗ್ರಾಮಗಳಿಗೆ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದೆ.ತಜ್ಞರ ಕೇಂದ್ರ ತಂಡವು ಸಾವಿನ ಕಾರಣವನ್ನು ತನಿಖೆ ನಡೆಸುತ್ತಿದೆ ಮತ್ತು 200 ಕ್ಕೂ ಹೆಚ್ಚು ಮಾದರಿಗಳನ್ನು ವಿವಿಧ ಸಂಸ್ಥೆಗಳಿಗೆ ಪರೀಕ್ಷೆಗೆ ಕಳುಹಿಸಲಾಗಿದೆ. ಪರಿಸ್ಥಿತಿ ಹದಗೆಡದಂತೆ ವೈದ್ಯರ ತಂಡ ಹಾಗೂ ನರ್ಸ್‌ಗಳು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಪೀಡಿತರ ಸಂಪರ್ಕಕ್ಕೆ ಬಂದ ಜನರನ್ನು ಕ್ವಾರಂಟೈನ್‌ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಶಾಸಕ ಬೂದಾಲ್ ಜಾವೈದ್ ಇಕ್ಬಾಲ್ ಆಡಳಿತ ತಂಡವು ಸರಿಯಾದ ಕಾಳಜಿ ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ. ಹೆಚ್ಚುವರಿಯಾಗಿ, ಸುಧಾರಿತ ಆರೈಕೆ ಆಂಬ್ಯುಲೆನ್ಸ್‌ಗಳು ಆಸ್ಪತ್ರೆಯಲ್ಲಿ ಸಿದ್ಧವಾಗಿವೆ ಹೆಚ್ಚಿನ ಚಿಕಿತ್ಸೆ ನೀಡಲಾಗುವುದು. ಯಾರೂ ಭಯ ಪಡಬೇಕಾಗಿಲ್ಲ ಎಂದು ಹೇಳಿದ್ದಾರೆ.



ಈ ಸುದ್ದಿಯನ್ನೂ ಓದಿ : Jammu & Kashmir: ನಿಗೂಢ ಕಾಯಿಲೆಗೆ 8 ಮಕ್ಕಳು ಬಲಿ; ಜಮ್ಮು-ಕಾಶ್ಮೀರದಲ್ಲಿ ಕಟ್ಟೆಚ್ಚರ

ಕಳೆದ ತಿಂಗಳಿನಿಂದ ಬಧಾಲ್ (Badhal) ಗ್ರಾಮದಲ್ಲಿ ಹಲವು ಜನ ಮೃತಪಟ್ಟಿದ್ದರು. ಅದರಲ್ಲಿ ಹೆಚ್ಚಿನವರು 18 ವರ್ಷಕ್ಕೂ ಕಡಿಮೆ ವಯಸ್ಸಿನವರಾಗಿದ್ದರು.