ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Job Guide: ಆಯಿಲ್‌ & ನ್ಯಾಚುರಲ್‌ ಕಾರ್ಪೋರೇಷನ್‌ನಲ್ಲಿದೆ 108 ಹುದ್ದೆ; ಆನ್‌ಲೈನ್‌ ಮೂಲಕ ಹೀಗೆ ಅರ್ಜಿ ಸಲ್ಲಿಸಿ

Job Guide: ಸರ್ಕಾರದ ಆಯಿಲ್‌ ಆ್ಯಂಡ್‌ ನ್ಯಾಚುರಲ್‌ ಕಾರ್ಪೋರೇಷನ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜಿಯಾಲಾಜಿಸ್ಟ್‌, ಅಸಿಸ್ಟಂಟ್‌ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಸೇರಿ ಒಟ್ಟು 108 ಹುದ್ದೆಗಳಿವೆ. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹಯೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ಇನ ದಿನ ಜ. 24.

Job Guide: ಆಯಿಲ್‌ & ನ್ಯಾಚುರಲ್‌ ಕಾರ್ಪೋರೇಷನ್‌ನಲ್ಲಿದೆ 108 ಹುದ್ದೆ; ಆನ್‌ಲೈನ್‌ ಮೂಲಕ ಹೀಗೆ ಅರ್ಜಿ ಸಲ್ಲಿಸಿ

-

Ramesh B Ramesh B Jan 12, 2025 4:03 PM
ಬೆಂಗಳೂರು: ಉತ್ತಮ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಸರ್ಕಾರದ ಆಯಿಲ್‌ ಆ್ಯಂಡ್‌ ನ್ಯಾಚುರಲ್‌ ಕಾರ್ಪೋರೇಷನ್‌ (Oil and Natural Gas Corporation) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (ONGC Recruitment 2025). ಜಿಯಾಲಾಜಿಸ್ಟ್‌, ಅಸಿಸ್ಟಂಟ್‌ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಸೇರಿ ಒಟ್ಟು 108 ಹುದ್ದೆಗಳಿವೆ. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹಯೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ಇನ ದಿನ ಜ. 24 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಜಿಯಾಲಾಜಿಸ್ಟ್‌ - 5 ಹುದ್ದೆಜಿಯಾಫಿಸಿಸಿಸ್ಟ್‌ - 5 ಹುದ್ದೆಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ (ಪ್ರೊಡಕ್ಷನ್)-ಮೆಕ್ಯಾನಿಕಲ್ - 11 ಹುದ್ದೆಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ (ಪ್ರೊಡಕ್ಷನ್)-ಪೆಟ್ರೋಲಿಯಂ - 19 ಹುದ್ದೆಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ (ಪ್ರೊಡಕ್ಷನ್)-ಕೆಮಿಕಲ್ - 23 ಹುದ್ದೆಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ (ಡ್ರಿಲ್ಲಿಂಗ್)-ಮೆಕ್ಯಾನಿಕಲ್ - 23 ಹುದ್ದೆಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್-(ಡ್ರಿಲ್ಲಿಂಗ್)-ಪೆಟ್ರೋಲಿಯಂ - 6 ಹುದ್ದೆಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್-ಮೆಕ್ಯಾನಿಕಲ್ - 6 ಹುದ್ದೆಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್-ಎಲೆಕ್ಟ್ರಿಕಲ್ - 10 ಹುದ್ದೆವಿವಿಧ ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 26 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಅರ್ಜಿ ಶುಲ್ಕವಾಗಿ ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ಅಭ್ಯರ್ಥಿಗಳು 1,000 ರೂ. ಪಾವತಿಸಬೇಕು. ಪಾವತಿ ವಿಧಾನ: ಅನ್‌ಲೈನ್‌. ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ. ಪರೀಕ್ಷೆ ಫೆ. 23ರಂದು ನಡೆಯಲಿದೆ. ಆಯ್ಕೆಯಾದವರಿಗೆ 60,000 ರೂ. - 1,80,000 ರೂ. ಮಾಸಿಕ ವೇತನ ದೊರೆಯಲಿದೆ.
ONGC Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.
image-adbd8345-ba7d-41ad-89d5-509dcc4ce222.jpg
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ(https://ibpsonline.ibps.in/ongcdec24/)
ಹೆಸರು ನೋಂದಾಯಿಸಿ.
ಎಚ್ಚರಿಕೆಯಿಂದ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
ಅಗತ್ಯ ಡಾಕ್ಯುಮೆಂಟ್‌, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್‌ ಮಾಡಿ.
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅದಿಕೃತ ವೆಬ್‌ಸೈಟ್‌ ವಿಳಾಸ: ongcindia.comಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: Canara Bank Recruitment 2025: ಕೆನರಾ ಬ್ಯಾಂಕ್‌ನಲ್ಲಿದೆ 60 ಹುದ್ದೆ; ಇಂದೇ ಅರ್ಜಿ ಸಲ್ಲಿಸಿ