Job Guide: ರಕ್ಷಣಾ ಸಚಿವಾಲಯದಲ್ಲಿದೆ 113 ಹುದ್ದೆ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Job Guide: ಭಾರತ ಸರ್ಕಾರದ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಜ. 7ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆ. 6.
Ramesh B
January 5, 2025
ಬೆಂಗಳೂರು: ಭಾರತ ಸರ್ಕಾರದ ರಕ್ಷಣಾ ಸಚಿವಾಲಯ(Ministry of Defence)ದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (Ministry of Defence Recruitment 2025). ಅಕೌಂಟೆಂಟ್, ಸ್ಟೆನೋಗ್ರಾಫರ್ ಗ್ರೇಡ್-I, ಲೋಬರ್ ಡಿವಿಷನ್ ಕ್ಲರ್ಕ್ ಸೇರಿ ಒಟ್ಟು 113 ಹುದ್ದೆಗಳಿವೆ. 10ನೇ ತರಗತಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಜ. 7ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆ. 6 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಕೌಂಟೆಂಟ್ - 1 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ, ಪದವಿಸ್ಟೆನೋಗ್ರಾಫರ್ ಗ್ರೇಡ್-1 - 1 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿಲೋವರ್ ಡಿವಿಷನ್ ಕ್ಲರ್ಕ್ - 11 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿಸ್ಟೋರ್ ಕೀಪರ್ - 24 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿಫೋಟೊಗ್ರಾಫರ್ - 1 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ, ಡಿಪ್ಲೊಮಾಫೈರ್ ಮ್ಯಾನ್ - 5 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿಕುಕ್ - 4 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿಲ್ಯಾಬ್ ಅಟೆಂಡೆಂಟ್ - 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) - 29 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿಟ್ರೇಡ್ಸ್‌ಮ್ಯಾನ್ ಮೇಟ್ - 31 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿವಾಷರ್‌ಮ್ಯಾನ್ - 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿಕಾರ್ಪೆಂಟರ್ & ಜಾಯಿನರ್ - 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿಟಿನ್ ಸ್ಮಿತ್ - 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ವಯೋಮಿತಿ ಮತ್ತು ಅರ್ಜಿ ಶುಲ್ಕ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಎಚ್ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18,000 ರೂ. - 92,300 ರೂ. ಮಾಸಿಕ ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ(https://mod.gov.in/)
ಹೆಸರು ನೋಂದಾಯಿಸಿ.
ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಈ ಸುದ್ದಿಯನ್ನೂ ಓದಿ: CBSE Recruitment 2025: CBSEಯಲ್ಲಿ ಖಾಲಿ ಇದೆ 212 ಹುದ್ದೆ; ದ್ವಿತೀಯ ಪಿಯು ಪಾಸಾದವರು ಅರ್ಜಿ ಸಲ್ಲಿಸಿ