ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranya Rao: ಆಕೆ ನಮ್ಮ ಜೊತೆಗಿಲ್ಲ, ನನ್ನ ಕೆರಿಯರ್‌ನಲ್ಲಿ ಕಪ್ಪು ಚುಕ್ಕಿ ಇಲ್ಲ: ರನ್ಯಾ ರಾವ್‌ ತಂದೆ

ರನ್ಯಾ ರಾವ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮಗಳ ಬಂಧನದ ಬಗ್ಗೆ ರಾಮಚಂದ್ರ ರಾವ್ ನ್ಯೂಸ್ ಏಜೆನ್ಸಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮಗೂ ಕೂಡ ಈ ವಿಷಯ ಮಾಧ್ಯಮದ ಮೂಲಕ ತಿಳಿಯಿತು. ಹಲವು ದಿನಗಳಿಂದ ಮಗಳ ಜೊತೆ ತಾವು ಸಂಪರ್ಕದಲ್ಲಿ ಇಲ್ಲ ಎಂದು ರಾಮಚಂದ್ರ ರಾವ್ ಹೇಳಿದ್ದಾರೆ.

ನನ್ನ ಕೆರಿಯರ್‌ನಲ್ಲಿ ಕಪ್ಪು ಚುಕ್ಕಿ ಇಲ್ಲ: ರನ್ಯಾ ರಾವ್‌ ತಂದೆ

ರನ್ಯಾ ರಾವ್

ಹರೀಶ್‌ ಕೇರ ಹರೀಶ್‌ ಕೇರ Mar 6, 2025 8:57 AM

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ (gold smuggling) ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ (Kannada Actress Ranya Rao) ಅವರ ತಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಆಕೆ ಹಾಗೂ ತಮ್ಮ ಕುಟುಂಬ ಪ್ರತ್ಯೇಕವಾಗಿವೆ ಎಂದು ತಿಳಿಸಿದ್ದಾರೆ. ಆಕೆ ತಮ್ಮ ಜೊತೆಗೆ ವಾಸಿಸುತ್ತಿಲ್ಲ. ನನ್ನ ಕೆರಿಯರ್‌ನಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ಕೆ. ರಾಮಚಂದ್ರ ರಾವ್ ತಿಳಿಸಿದ್ದಾರೆ. ಆರೋಪಿತೆ ರನ್ಯಾ ರಾವ್‌ ಇವರ ಮಲಮಗಳಾಗಿದ್ದಾರೆ.

ರನ್ಯಾ ರಾವ್‌ ಪ್ರಕರಣದಿಂದ ಕುಟುಂಬಕ್ಕೆ ಮುಜುಗರ ಉಂಟಾಗಿದೆ. ರನ್ಯಾ ರಾವ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮಗಳ ಬಂಧನದ ಬಗ್ಗೆ ರಾಮಚಂದ್ರ ರಾವ್ ನ್ಯೂಸ್ ಏಜೆನ್ಸಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮಗೂ ಕೂಡ ಈ ವಿಷಯ ಮಾಧ್ಯಮದ ಮೂಲಕ ತಿಳಿಯಿತು. ಹಲವು ದಿನಗಳಿಂದ ಮಗಳ ಜೊತೆ ತಾವು ಸಂಪರ್ಕದಲ್ಲಿ ಇಲ್ಲ ಎಂದು ರಾಮಚಂದ್ರ ರಾವ್ ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿದಾಗ ನನಗೆ ಶಾಕ್ ಆಯಿತು. ಈ ವಿಚಾರದ ಬಗ್ಗೆ ನನಗೆ ತಿಳಿದಿರಲಿಲ್ಲ. ಯಾವುದೇ ತಂದೆಗೆ ಆಗುವಂತೆ ನನಗೆ ಕೂಡ ಆಘಾತ ಆಯಿತು. ರನ್ಯಾ ನಮ್ಮ ಜೊತೆ ವಾಸ ಮಾಡುತ್ತಿಲ್ಲ. ಗಂಡನ ಜೊತೆ ಅವಳು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾಳೆ ಎಂದು ರಾಮಚಂದ್ರ ರಾವ್ ಅವರು ಹೇಳಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ರನ್ಯಾ ವಿವಾಹ ನಡೆದಿತ್ತು.

ಮಗಳ ಸಂಸಾರದಲ್ಲಿ ಏನೋ ಸಮಸ್ಯೆ ಉಂಟಾಗಿರಬಹುದು ಎಂದು ರಾಮಚಂದ್ರ ರಾವ್ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ‘ಕೌಟುಂಬಿಕ ಕಾರಣದಿಂದ ಅವರ ನಡುವೆ ಏನೋ ಸಮಸ್ಯೆ ಆಗಿರಬಹುದು. ಏನೇ ಆದರೂ ಕಾನೂನು ತನ್ನ ಕೆಲಸ ಮಾಡಲಿದೆ. ನನ್ನ ವೃತ್ತಿಜೀವನದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲ. ಹೆಚ್ಚು ಏನೂ ಹೇಳಲು ನಾನು ಇಷ್ಟಪಡಲ್ಲ’ ಎಂದು ರಾಮಚಂದ್ರ ರಾವ್ ಹೇಳಿದ್ದಾರೆ.‌

ಇದನ್ನೂ ಓದಿ: Ranya Rao: ರನ್ಯಾ ರಾವ್‌ಗೆ ಮತ್ತಷ್ಟು ಸಂಕಷ್ಟ, ಮನೆಯಲ್ಲಿ ಚಿನ್ನ- ನಗದು ಸೇರಿ 17.29 ಕೋಟಿ ಪತ್ತೆ

ನಟಿ ರನ್ಯಾ ಅವರು ದುಬೈನಿಂದ ಬರುವಾಗ ಅಕ್ರಮವಾಗಿ 14 ಕೆಜಿ ಚಿನ್ನವನ್ನು ಸಾಗಿಸುತ್ತಿದ್ದರು. ಅಧಿಕಾರಿಗಳ ಕಣ್ಣು ತಪ್ಪಿಸಲು ಅವರು ಪ್ರಯತ್ನಿಸಿದ್ದರು. ಆದರೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಯಿತು. ಕೆಲವೇ ದಿನಗಳ ಅಂತರದಲ್ಲಿ 10 ಬಾರಿ ರನ್ಯಾ ಅವರು ದುಬೈಗೆ ಪ್ರಯಾಣ ಮಾಡಿದ್ದರು. ಹಾಗಾಗಿ ಅವರ ಚಲನವಲನದ ಮೇಲೆ ಡಿಆರ್​ಐ ಅಧಿಕಾರಿಗಳಿಗೆ ಅನುಮಾನ ಮೂಡಿತ್ತು. ಈ ಪ್ರಕರಣದಲ್ಲಿ ಇನ್ನೂ ಅನೇಕರು ಭಾಗಿ ಆಗಿರುವ ಶಂಕೆ ಇದೆ. ರನ್ಯಾ ಅವರ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸಿ ಕೆಲವು ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಕನ್ನಡದ ಮಾಣಿಕ್ಯ, ಪಟಾಕಿ ಸಿನಿಮಾದಲ್ಲಿ ರನ್ಯಾ ಅವರು ನಟಿಸಿದ್ದರು.