ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Budget 2025: ಕರ್ನಾಟಕ ರಾಜ್ಯ ಬಜೆಟ್ 2025 ಯಾವಾಗ? ಮಂಡನೆ ಎಷ್ಟು ಗಂಟೆಗೆ? ನಿರೀಕ್ಷೆಗಳೇನು?

ಈ ಬಾರಿ ಸಿಎಂ ಸಿದ್ದರಾಮಯ್ಯ ಅವರು 16ನೇ ದಾಖಲೆಯ ಬಜೆಟ್‌ ಮಂಡಿಸಲಿದ್ದು, ಈ ಬಜೆಟ್‌ ಮೇಲೆ ಜನಸಾಮಾನ್ಯರು ನಿರೀಕ್ಷೆಗಳ ಹೊರೆಯನ್ನೇ ಇಟ್ಟುಕೊಂಡಿದ್ದಾರೆ. ಕರ್ನಾಟಕದಲ್ಲಿ ಇಷ್ಟು ಪ್ರಮಾಣದಲ್ಲಿ ಬಜೆಟ್‌ ಮಂಡಿಸಿದವರು ಸಿದ್ದರಾಮಯ್ಯ ಮಾತ್ರ. ಮೊದಲ ಬಾರಿಗೆ ಬಜೆಟ್‌ ಗಾತ್ರ ಅಂದಾಜು 4 ಲಕ್ಷ ಕೋಟಿ ರೂಗಳನ್ನು ದಾಟಲಿದೆ ಎಂದು ಅಂದಾಜು ಮಾಡಲಾಗಿದೆ.

ಕರ್ನಾಟಕ ರಾಜ್ಯ ಬಜೆಟ್ 2025 ಯಾವಾಗ? ನಿರೀಕ್ಷೆಗಳೇನು?

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 5, 2025 11:45 AM

ಬೆಂಗಳೂರು: 2025-26ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಮಂಡನೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ರಾಜ್ಯ ವಿಧಾನಮಂಡಲದಲ್ಲಿ ಬಜೆಟ್‌ ಅಧಿವೇಶನ ಆರಂಭವಾಗಿದೆ. ಮಾರ್ಚ್ 3ರಿಂದ ಶುರುವಾಗಿರುವ ಈ ಅಧಿವೇಶನ 21ರವರೆಗೆ ನಡೆಯಲಿದೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಲಿದ್ದಾರೆ.

ಗುರುವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಕೈಗೊಳ್ಳಲಾಗುವುದು. ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2025 -26 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಮಾ. 10 ರಿಂದ 21ರವರೆಗೆ ಬಜೆಟ್ ಮೇಲೆ ಚರ್ಚೆಗಳು ನಡೆಯಲಿವೆ. ಸಿಎಂ ಸಿದ್ದರಾಮಯ್ಯ ಕರ್ನಾಟಕದ ಹಣಕಾಸು ಸಚಿವರಾಗಿ 1994ರಲ್ಲಿ ಮೊದಲ ಬಾರಿ ಬಜೆಟ್‌ ಮಂಡಿಸಿದರು. ಆನಂತರ ಎರಡು ಬಾರಿ ಡಿಸಿಎಂ, ಎರಡು ಬಾರಿ ಸಿಎಂ ಆಗಿ ಪ್ರತಿವರ್ಷ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಬಾರಿ 16ನೇ ದಾಖಲೆಯ ಬಜೆಟ್‌ ಮಂಡಿಸಲಿದ್ದು, ಈ ಬಜೆಟ್‌ ಮೇಲೆ ಜನಸಾಮಾನ್ಯರು ನಿರೀಕ್ಷೆಗಳ ಹೊರೆಯನ್ನೇ ಇಟ್ಟುಕೊಂಡಿದ್ದಾರೆ. ಕರ್ನಾಟಕದಲ್ಲಿ ಇಷ್ಟು ಪ್ರಮಾಣದಲ್ಲಿ ಬಜೆಟ್‌ ಮಂಡಿಸಿದವರು ಸಿದ್ದರಾಮಯ್ಯ ಮಾತ್ರ. ಮೊದಲ ಬಾರಿಗೆ ಬಜೆಟ್‌ ಗಾತ್ರ ಅಂದಾಜು 4 ಲಕ್ಷ ಕೋಟಿ ರೂಗಳನ್ನು ದಾಟಲಿದೆ ಎಂದು ಅಂದಾಜು ಮಾಡಲಾಗಿದೆ.

ಇದಕ್ಕೂ ಮುಂಚಿತವಾಗಿ 2023-24ನೇ ಸಾಲಿನ ಬಜೆಟ್‌ನಲ್ಲಿ 3,12,708 ಕೋಟಿ ರೂ. ಪರಿಷ್ಕೃತ ಅಂದಾಜಿನ ಬದಲಾಗಿ, 2024-25ನೇ ಸಾಲಿನ ರಾಜ್ಯ ಬಜೆಟ್‌ನ ಒಟ್ಟು ವೆಚ್ಚ 3,71,383 ಕೋಟಿ ರೂ. ಎಂದು ನಿಗದಿಪಡಿಸಿ ಸಿದ್ದರಾಮಯ್ಯ ಬಜೆಟ್‌ ಮಂಡನೆ ಮಾಡಿದ್ದರು. ಕಳೆದ ವರ್ಷದ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ 27,353 ಕೋಟಿ ರೂ. ರಾಜಸ್ವ ಕೊರತೆಯ ಬಜೆಟ್ ಮಂಡನೆ ಮಾಡಿದ್ದರು. ಈ ಬಾರಿಯ ಬಜೆಟ್‌ನಲ್ಲಿಯೂ ರಾಜಸ್ವ ಕೊರತೆಯ ಬಜೆಟ್ ಮಂಡಿಸುವುದು ಬಹುತೇಕ ಖಚಿತವಾಗಿದೆ. 21,900 ಕೋಟಿ ರೂ. ರಾಜಸ್ವ ಕೊರತೆ ಆಗುವ ಸಾಧ್ಯತೆ ಇದೆ. ಹೆಚ್ಚಿನ ಭಾಗ ಗ್ಯಾರಂಟಿಗಳಿಗೆ ಹೋಗಿದೆ.

2024-25ನೇ ಸಾಲಿನ ಬಜೆಟ್​​ನಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ ರೂ. ಎಂದು ಅಂದಾಜು ಮಾಡಲಾಗಿತ್ತು. ಆದರೆ, ಈ ಸಲದ ಬಜೆಟ್‌ನಲ್ಲಿ ವೇತನ ಪರಿಷ್ಕರಣೆ, ಬಡ್ಡಿ ಪಾವತಿ ಹೆಚ್ಚಳ, ಪಿಂಚಣಿ ಹೊರೆ, ಆಡಳಿತಾತ್ಮಕ ವೆಚ್ಚಗಳು ಹೆಚ್ಚಾಗುವ ಹಿನ್ನೆಲೆ ರಾಜಸ್ವ ವೆಚ್ಚ 3.20 ಲಕ್ಷ ಕೋಟಿ ರೂ. ದಾಟುವ ಅಂದಾಜು ಇದೆ. 2025-26ನೇ ಸಾಲಿನಲ್ಲಿ ಬಡ್ಡಿ ಪಾವತಿ ಅಂದಾಜು 45,000 ಕೋಟಿ ರೂ. ಏರಿಕೆಯಾಗುವ ಸಾಧ್ಯತೆ ಅಂತೂ ಇದೆ. ಕಳೆದ ವರ್ಷದ ಬಜೆಟ್​ನಲ್ಲಿ ಸುಮಾರು 1,05,246 ಕೋಟಿ ರೂ. ಸಾಲ ಮಾಡಲು ಅಂದಾಜಿಸಿದ್ದರು. 2025-26ನೇ ಸಾಲಿನಲ್ಲಿ ಇನ್ನೂ ಹೆಚ್ಚಿನ ಸಾಲದ ಮೊರೆ ಹೋಗಲು ಚಿಂತನೆಯನ್ನು ನಡೆಸಲಾಗುತ್ತಿದೆ.

ಈ ಸಲದ ಬಜೆಟ್‌ನಲ್ಲಿ ಸುಮಾರು 1.25 ಲಕ್ಷ ಕೋಟಿ ರೂ.ಸಾಲವನ್ನು ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳು ನೀಡಿದ್ದು ಸಾಲದ ಪ್ರಮಾಣದಲ್ಲಿ ಏರಿಕೆಯಾಗಬಹುದು. ಕರ್ನಾಟಕ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳಿಗೆ ಸುಮಾರು 52 ಸಾವಿರ ಕೋಟಿ ರೂ. ಹಣವನ್ನು ಮೀಸಲಿಡುತ್ತಿದೆ. ಆದರೆ ಈ ವರ್ಷ ಗೃಹ ಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆಗಳಿಗೆ ಆರ್ಥಿಕ ಅಡೆತಡೆಯಾಗಿದೆ. ಇದರೊಂದಿಗೆ, ಬಾಕಿ ಬಿಡುಗಡೆಗಾಗಿ ಸರ್ಕಾರ ನಿರೀಕ್ಷೆಯಲ್ಲಿದೆ. ಈ ವರ್ಷದ ಬಜೆಟ್‌ನಲ್ಲಿ ಈ ಯೋಜನೆಗಳನ್ನು ಮುಂದುವರಿಸುತ್ತದೆಯೋ ಅಥವಾ ಬದಲಾಯಿಸಲು ಹೊಸ ನೀತಿಗಳನ್ನು ಜಾರಿಗೊಳಿಸಲು ಕೆಲವೊಂದು ನಿರ್ಧಾರಳನ್ನು ತೆಗೆದುಕೊಳ್ಳುತ್ತದೆಯೋ ಎಂಬುದು ಸಹ ನಿರ್ದಾರವಾಗುತ್ತದೆ.

ತೆರಿಗೆ ಏರಿಸುವ ಪ್ರಯತ್ನವೂ ಈ ಬಾರಿ ಬಜೆಟ್‌ನ ಪ್ರಮುಖ ಅಂಶ ಅಬಕಾರಿ ಸೇರಿದಂತೆ ಅಗತ್ಯ ವಸ್ತುಗಳ ತೆರಿಗೆಯಲ್ಲಿ ಏರಿಕೆ ಮಾಡುವ ಸಾಧ್ಯತೆಗಳಿವೆ. ಬಜೆಟ್‌ಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಆಹಾರ ಮತ್ತು ನಾಗರಿಕ ಸರಬರಾಜು, ಸಮಾಜ ಕಲ್ಯಾಣ ಇಲಾಖೆ, ಕೃಷಿ, ತೋಟಗಾರಿಕೆ, ವಸತಿ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಲಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ ಇಲಾಖೆಗಳಿಗೆ ಹೆಚ್ಚಿನ ನೆರವು ನೀಡಬಹುದು.

ಸಾಂಸ್ಕೃತಿಕ ನಗರಿಯಾಗಿರುವ ಮೈಸೂರಿನ ಅಭಿವೃದ್ದಿ ವಿಚಾರದಲ್ಲಿ ಸಿದ್ದರಾಮಯ್ಯ ಅವರಿಂದ ನಿರೀಕ್ಷಿತ ಕೊಡುಗೆ ಸಿಕ್ಕಿಲ್ಲ ಎನ್ನುವ ಅಭಿಪ್ರಾಯವಿದೆ. ಮೈಸೂರಿನ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಯಿದೆ. ಬೆಂಗಳೂರು ಬೃಹತ್‌ ಮಹಾನಗರ ಪಾಲಿಕೆ ವ್ಯಾಪ್ತಿ ದೊಡ್ಡದಾಗಿ ಅಭಿವೃದ್ದಿಗೆ ಅಡ್ಡಿಯಾಗುತ್ತಿದೆ ಎನ್ನುವ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಬಿಬಿಎಂಪಿಯನ್ನು ಏಳು ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ವಿಕೇಂದ್ರೀಕರಣಕ್ಕೆ ಒತ್ತು ನೀಡುವ ನಿರೀಕ್ಷೆ ಇದೆ. ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರುತ್ತೇನೆ ಎಂದು ಹೇಳಿಕೆಯನ್ನು ನೀಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿಕರಿಗೂ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: CM Siddaramaiah: ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಸಿಎಂಗೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸುದೀರ್ಘ ಪತ್ರ