HD Kumaraswamy: ಎಚ್‌ಡಿ ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ, ಬಲವಂತದ ಕ್ರಮವಿಲ್ಲ ಎಂಬ ಮುಚ್ಚಳಿಕೆ ವಾಪಸ್ ಪಡೆದ ರಾಜ್ಯ ಸರ್ಕಾರ
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ 6 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದನ್ನು ಕಂದಾಯ ಇಲಾಖೆಯಿಂದ ಸರ್ವೆ ಮಾಡಿ ತೆರವುಗೊಳಿಸಿ, ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಪ್ರಶ್ನಿಸಿ ಎಚ್‌ಡಿಕೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಸರ್ಕಾರ, ಅವರ ವಿರುದ್ಧ ಯಾವುದೇ ಬಲವಂತದ ಕ್ರಮವಿಲ್ಲ ಎಂಬುದಾಗಿ ನ್ಯಾಯಾಲಯಕ್ಕೆ ಮುಚ್ಚಳಿಕೆ ಸಲ್ಲಿಸಿತ್ತು.

ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ (Ketaganahalli) 6 ಎಕರೆ ಸರ್ಕಾರಿ ಭೂಮಿ ಒತ್ತುವರಿ (Encroachment) ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (Minister HD Kumaraswamy) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಎಚ್‌ಡಿಕೆ ವಿರುದ್ಧ ಬಲವಂತದ ಕ್ರಮವಿಲ್ಲ ಎಂದು ತಾನು ನೀಡಿದ್ದ ಮುಚ್ಚಳಿಕೆಯನ್ನು ರಾಜ್ಯ ಸರ್ಕಾರ (Karnataka Government) ಹಿಂಪಡೆದಿದೆ. ಈ ಸಂಬಂಧ ನಿನ್ನೆ ನ್ಯಾಯಾಲಯಕ್ಕೆ ಎಎಜಿ ಕಿರಣ್ ಮಾಹಿತಿ ನೀಡಿದ್ದು, ಕಾಯಿದೆ ತಿದ್ದುಪಡಿಯ ಸಂವಿಧಾನ ಬದ್ಧತೆ ಪ್ರಶ್ನಿಸುವುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹೀಗಾಗಿ ಬಲವಂತದ ಕ್ರಮವಿಲ್ಲ ಎಂಬುದಾಗಿ ಸರ್ಕಾರ ಸಲ್ಲಿಸಿದ್ದ ಮುಚ್ಚಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದರು.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ 6 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದನ್ನು ಕಂದಾಯ ಇಲಾಖೆಯಿಂದ ಸರ್ವೆ ಮಾಡಿ ತೆರವುಗೊಳಿಸಿ, ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಪ್ರಶ್ನಿಸಿ ಎಚ್‌ಡಿಕೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಸರ್ಕಾರ, ಅವರ ವಿರುದ್ಧ ಯಾವುದೇ ಬಲವಂತದ ಕ್ರಮವಿಲ್ಲ ಎಂಬುದಾಗಿ ನ್ಯಾಯಾಲಯಕ್ಕೆ ಮುಚ್ಚಳಿಕೆ ಸಲ್ಲಿಸಿತ್ತು.
‘ಕೇತಗಾನಹಳ್ಳಿ ಸರ್ವೇ ನಂಬರ್ 7 ಮತ್ತು 8ರಲ್ಲಿ ಪೋಡಿ ದುರಸ್ತಿಯಾಗದ ಜಮೀನಿನಲ್ಲಿ ನೀವು ಅನಧಿಕೃತವಾಗಿ ಒತ್ತುವರಿ ಮಾಡಿ ಸ್ವಾಧೀನಾನುಭವ ಹೊಂದಿದ್ದೀರಿ. ಹಾಗಾಗಿ, ಕರ್ನಾಟಕ ಭೂ ಕಂದಾಯ ಕಾಯ್ದೆ–1964ರ ಕಲಂ 94ರ ಅಡಿಯಲ್ಲಿ ಏಕೆ ನಿಮ್ಮಿಂದ ದಂಡ ವಸೂಲಿ ಮಾಡಬಾರದು ಎಂಬುದಕ್ಕೆ ಸಮಜಾಯಿಷಿ ನೀಡಿ. ಈ ಕುರಿತಂತೆ ನಿಮ್ಮ ಬಳಿ ಇರುವ ದಾಖಲೆಗಳನ್ನು ಸಲ್ಲಿಸಿ. ಇಲ್ಲವಾದಲ್ಲಿ ಕಾನೂನು ರೀತ್ಯಾ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ರಾಮನಗರ ತಾಲ್ಲೂಕು ತಹಶೀಲ್ದಾರ್ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇದೇ 18ರಂದು ಒತ್ತುವರಿ ತೆರವು ನೋಟಿಸ್ ನೀಡಿದ್ದರು.
ಇದನ್ನೂ ಓದಿ: DK Shivakumar: ದ್ವೇಷದ ರಾಜಕಾರಣ ಅವ್ರ ಡಿಎನ್‌ಎಯಲ್ಲಿದೆ: ಎಚ್‌ಡಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು