ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bidadi Township: ಬಿಡದಿ ಟೌನ್‌ಶಿಪ್‌ ಯೋಜನೆ; ಭೂಸ್ವಾಧೀನಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ಬಿಡದಿ ಟೌನ್​ಶಿಪ್ ಯೋಜನೆಗೆ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರ, ಬಿಡದಿಯ ಮಂಡಲಹಳ್ಳಿ, ವಡೇರಹಳ್ಳಿ, ಕೆಂಪಯ್ಯನಪಾಳ್ಯ ಗ್ರಾಮಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರೈತರು ಹೈಕೋರ್ಟ್ ಮೊರೆಹೋಗಿದ್ದರು. ಸದ್ಯ ಭೂಸ್ವಾಧೀನಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಬಿಡದಿ ಟೌನ್‌ಶಿಪ್‌ ಯೋಜನೆಗೆ ಹಿನ್ನಡೆ; ಭೂಸ್ವಾಧೀನಕ್ಕೆ ಹೈಕೋರ್ಟ್‌ ತಡೆ

-

Prabhakara R
Prabhakara R Aug 4, 2026 5:12 PM

ಬಿಡದಿ: ಬೆಂಗಳೂರು ನಗರದ ಹೊರವಲಯದಲ್ಲಿ ಬಿಡದಿ ಟೌನ್​ಶಿಪ್ (Bidadi Township) ಯೋಜನೆ ಹಿನ್ನಡೆಯಾಗಿದೆ. 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' ಯೋಜನೆಗಾಗಿ ಸುಮಾರು 516 ಎಕರೆ ಫಲವತ್ತಾದ ಕೃಷಿ ಭೂಮಿಯ ಸ್ವಾಧೀನ ಪ್ರಶ್ನಿಸಿ ಹೊಸೂರು ಗ್ರಾಮದ 14 ರೈತರು ಸಲ್ಲಿಸಿರುವ ಅರ್ಜಿ ಕುರಿತು ಇಂದು ಹೈಕೋರ್ಟ್​ ವಿಚಾರಣೆ ನಡೆಸಿದ್ದು, ಪರಿಹಾರ ನಿಗದಿಯಾಗುವವರೆಗೂ ಅರ್ಜಿದಾರರ ಸ್ವತ್ತು ಸ್ವಾಧೀನ ಮಾಡದಂತೆ ಮಧ್ಯಂತರ ಆದೇಶ ನೀಡಿದೆ.

ಬಿಡದಿ ಟೌನ್​ಶಿಪ್ ಯೋಜನೆಗೆ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರ, ಬಿಡದಿಯ ಮಂಡಲಹಳ್ಳಿ, ವಡೇರಹಳ್ಳಿ, ಕೆಂಪಯ್ಯನಪಾಳ್ಯ ಗ್ರಾಮಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರೈತರು ಹೈಕೋರ್ಟ್ ಮೊರೆಹೋಗಿದ್ದರು. ಹೀಗಾಗಿ ಯಾರು ಯೋಜನೆಗೆ ಭೂಮಿ ನೀಡಲು ನಿರಾಕರಿಸಿದ್ದಾರೋ ಅವರ ಜಮೀನಿನ ಭೂಸ್ವಾಧೀನ ಮಾಡದಿರಲು ಕೋರ್ಟ್ ಸೂಚನೆ ನೀಡಿದೆ. ನ್ಯಾಯಾಲಯದ ತೀರ್ಪು ರೈತರಲ್ಲಿ ಸಂತಸ ಮೂಡಿಸಿದೆ.

ಬಿಡದಿ ಟೌನ್ ಶಿಪ್​​ನಿಂದ ಸರ್ಕಾರವು 34 ಸಾವಿರ ಕೋಟಿ ಲಾಭ ಗಳಿಸಲು ಮುಂದಾಗಿದೆ. ಕಾನೂನು ಪ್ರಕ್ರಿಯೆ ಪಾಲಿಸದೇ ಭೂಸ್ವಾಧೀನವಾಗುತ್ತಿದೆ ಎಂದು ರೈತರ ಪರ ವಕೀಲ ಎಂ.ಎಚ್. ಪ್ರಕಾಶ್ ವಾದ ಮಂಡಿಸಿದ್ದಾರೆ.

ಯೋಜನೆಗೆ ಮುನ್ನ 2013 ರ ಭೂಸ್ವಾಧೀನ ಕಾಯ್ದೆಯ ನಿಯಮ ಪಾಲಿಸಲಾಗಿದೆಯೇ ಎಂದು ಸರ್ಕಾರಕ್ಕೆ ನ್ಯಾ. ಆರ್. ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಪ್ರಶ್ನೆ ಮಾಡಿದೆ. ಇದಕ್ಕೆ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯಿಸಿ, ಇತರೆ ರೈತರು ಭೂಸ್ವಾಧೀನಕ್ಕೆ ಸಮ್ಮತಿ ನೀಡಿದ್ದಾರೆ. ಕಾಯ್ದೆಯ ಸೆ.10 ಎ ವಿನಾಯಿತಿ‌ ನೀಡಲಾಗಿದೆ. ಪರಿಹಾರ ನಿಗದಿಯಾಗುವವರೆಗೂ ಅರ್ಜಿದಾರರ ಸ್ವತ್ತು ಸ್ವಾಧೀನ ಮಾಡುವುದಿಲ್ಲ ಎಂದು ಹೈಕೋರ್ಟ್​ಗೆ ತಿಳಿಸಿದ್ದಾರೆ.

ತಾಳ್ಮೆ ಇರಲಿ, ಎಲ್ಲರಿಗೂ ಅವಕಾಶ ಸಿಗಲಿದೆ: 133 ಶಾಸಕರೂ ಸಚಿವರಾಗಲೂ ಅರ್ಹರು: ಸಿಎಂ ಡಿಕೆ ಶಿವಕುಮಾರ್

ಸೆ.10 ಎ ಅಡಿ ವಿನಾಯಿತಿಗೆ ಇದು ಗ್ರಾಮೀಣ ವಸತಿ ಯೋಜನೆಯೇ ಎಂದು ಸರ್ಕಾರಕ್ಕೆ ಹೈಕೋರ್ಟ್ ಪೀಠ ಪ್ರಶ್ನೆ ಮಾಡಿದೆ. ಪರಿಹಾರ ನಿಗದಿಯಾಗುವವರೆಗೂ ಅರ್ಜಿದಾರರ ಸ್ವತ್ತು ಸ್ವಾಧೀನ ಮಾಡಬಾರದು ಎಂದು ಪೀಠ ತಿಳಿಸಿ, ವಿಚಾರಣೆಯನ್ನು 3 ವಾರ ಮುಂದೂಡಿದೆ.