ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lokayukta Raid: ರಾಜ್ಯದ ಹಲವೆಡೆ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

ಭ್ರಷ್ಟಾಚಾರದ ಕುರಿತು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಮುಂಜಾನೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಹಲವು ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತ ಪರಿಶೀಲನೆ ಮಾಡಿದರು.

ರಾಜ್ಯದ ಹಲವೆಡೆ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

ಕರ್ನಾಟಕ ಲೋಕಾಯುಕ್ತ

ಹರೀಶ್‌ ಕೇರ ಹರೀಶ್‌ ಕೇರ Mar 6, 2025 9:25 AM

ಬೆಂಗಳೂರು: ರಾಜಧಾನಿ (Bengaluru News) ಸೇರಿದಂತೆ ರಾಜ್ಯದ (Karnataka state) ಹಲವೆಡೆ ಅಧಿಕಾರಿಗಳ ಮನೆಗಳಿಗೆ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು (Lokayukta Raid) ದಾಳಿ ನಡೆಸಿ ಶಾಕ್‌ ನೀಡಿದರು. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ, ವಿಜಯಪುರ ಸೇರಿದಂತೆ 7 ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲಕ್ಕೆ 8 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಗಳನ್ನು ಸಂಘಟಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನವವಿವಾಹಿತ ಹೃದಯಾಘಾತಕ್ಕೆ ಬಲಿ

ಮಂಡ್ಯ: ಇತ್ತೀಚೆಗೆ ಪೂರ್ವಹಿನ್ನೆಲೆ ಇಲ್ಲದಿದ್ದರೂ ಆಕಸ್ಮಿಕವಾಗಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ (Heart Failure) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಮಂಡ್ಯ (Mandya News) ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮೂರು ದಿನದ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾಗಿದ್ದ ಶಶಾಂಕ್ ಎನ್ನುವ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಪುರಸಭೆ ಸದಸ್ಯ ಕೆಸಿ ಮಂಜುನಾಥ್ ಪುತ್ರ ಶಶಾಂಕ್ (28) ಹೀಗೆ ಸಾವನ್ನಪ್ಪಿದವರು. ಕಳೆದ ಭಾನುವಾರ ಶಶಾಂಕ್ ಹಸೆಮಣೆ ಏರಿದ್ದು, ಜಾರ್ಖಂಡ್ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ನಿನ್ನೆ ಹೃದಯಾಘಾತದಿಂದ ಶಶಾಂಕ್ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Ranya Rao: ಆಕೆ ನಮ್ಮ ಜೊತೆಗಿಲ್ಲ, ನನ್ನ ಕೆರಿಯರ್‌ನಲ್ಲಿ ಕಪ್ಪು ಚುಕ್ಕಿ ಇಲ್ಲ: ರನ್ಯಾ ರಾವ್‌ ತಂದೆ