ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Terror Attack Live: ಮಹತ್ವದ ಸಭೆ ಬೆನ್ನಲ್ಲೇ ಅಮಿತ್‌ ಶಾ ಪಹಲ್ಗಾಮ್‌ಗೆ ಭೇಟಿ

Pahalgam Terror Attack:ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿದೆ. ಬೈಸರನ್ ಹುಲ್ಲುಗಾವಲು ಪಹಲ್ಗಾಮ್ ಗಿರಿಧಾಮದಿಂದ ಸುಮಾರು 5 ಕಿ.ಮೀ ದೂರದಲ್ಲಿದೆ ಮತ್ತು ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೂಲಕ ಮಾತ್ರ ಪ್ರವೇಶಿಸಬಹುದು. ದಾಳಿಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿವೆ.

ಶೀಘ್ರದಲ್ಲೇ ಪಹಲ್ಗಾಮ್‌ಗೆ ಅಮಿತ್‌ ಶಾ ಭೇಟಿ

Profile Rakshita Karkera Apr 22, 2025 7:51 PM

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ಮಂಗಳವಾರ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ವಿದೇಶಿ ಪ್ರಾಸಿಗರು ಸೇರಿ 27ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಗಾಯಾಳುಗಳನ್ನು ಅನಂತ್‌ನಾಗ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ದಾಳಿ ನಡೆದ ಸ್ಥಳವನ್ನು ತಲುಪಲು ಪ್ರಯತ್ನಿಸುತ್ತಿವೆ ಆದರೆ ಕಠಿಣ ಭೂಪ್ರದೇಶದಿಂದಾಗಿ ತೊಂದರೆಗಳನ್ನು ಎದುರಿಸುತ್ತಿವೆ. ಇನ್ನು ಲಷ್ಕರ್-ಎ-ತೈಬಾದ ಒಂದು ಶಾಖೆಯು ಘಟನೆಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ

ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿದೆ. ಬೈಸರನ್ ಹುಲ್ಲುಗಾವಲು ಪಹಲ್ಗಾಮ್ ಗಿರಿಧಾಮದಿಂದ ಸುಮಾರು 5 ಕಿ.ಮೀ ದೂರದಲ್ಲಿದೆ ಮತ್ತು ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೂಲಕ ಮಾತ್ರ ಪ್ರವೇಶಿಸಬಹುದು. ದಾಳಿಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಅಷ್ಟೇ ಅಲ್ಲದೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದ್ದಾರೆ.

ಘಟನೆಯ ಲೈವ್‌ ಅಪ್ಡೇಟ್ಸ್‌ ಇಲ್ಲಿದೆ

Live News
April 22, 2025, 7:51 p.m.

ವಿದೇಶಿ ಪ್ರವಾಸಿಗರು ಸೇರಿ 27ಜನ ಬಲಿ

ಘಟನೆಯಲ್ಲಿ ವಿದೇಶಿ ಪ್ರಾಸಿಗರು ಸೇರಿ 27ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಗಾಯಾಳುಗಳನ್ನು ಅನಂತ್‌ನಾಗ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

April 22, 2025, 7:51 p.m.

ಮಹತ್ವದ ಸಭೆ ಬೆನ್ನಲ್ಲೇ ಅಮಿತ್‌ ಶಾ ಕಾಶ್ಮೀರಕ್ಕೆ ಪ್ರಯಾಣ

ಭಯೋತ್ಪಾದಕ ದಾಳಿಯ ನಂತರ, ಅಮಿತ್ ಶಾ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ. ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸುತ್ತಾರೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ದಾಳಿಯನ್ನು ಖಂಡಿಸಿ "ನನಗೆ ನಂಬಲಾಗದಷ್ಟು ಆಘಾತವಾಗಿದೆ. ಪ್ರವಾಸಿಗರ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ನಾನು ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದರು. ಇನ್ನು ಮಹತ್ವದ ಸಭೆ ಬೆನ್ನಲ್ಲೇ ಅಮಿತ್‌ ಶಾ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದಾರೆ.