#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Aravind Kejriwal: ದೆಹಲಿ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಕೇಜ್ರಿವಾಲ್‌ಗೆ ಪಂಜಾಬ್‌ ಸಿಎಂ ಗಾದಿ?

ದೆಹಲಿ ಚುನಾವಣೆಯ ಫಲಿತಾಂಶ ಶನಿವಾರ(ಫೆ.8) ಹೊರ ಬಿದ್ದಿದ್ದು, ಬಿಜೆಪಿ ದಾಖಲೆಯ ಗೆಲುವು ಸಾಧಿಸಿದೆ. ಕಳೆದ ಹತ್ತು ವರ್ಷಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರಾಬಲ್ಯ ಸಾಧಿಸಿದ್ದ ಆಪ್‌ ಮಕಾಡೆ ಮಲಗಿದೆ. ಸ್ವತಃ ಅರವಿಂದ ಕೇಜ್ರಿವಾಲ್‌ ಕೂಡ ತಮ್ಮ ತವರು ಕ್ಷೇತ್ರದಲ್ಲಿಯೇ ಹೀನಾಯವಾಗಿ ಸೋತಿದ್ದಾರೆ. ಈ ಮಧ್ಯೆ ಚುನಾವಣೆಯಲ್ಲಿ ಸೋತರೂ ಕೇಜ್ರಿವಾಲ್‌ ಪಂಜಾಬಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಚುನಾವಣೆಯಲ್ಲಿ ಸೋತರೂ ಕೇಜ್ರಿವಾಲ್‌ಗೆ ಪಂಜಾಬ್‌ ಸಿಎಂ ಪಟ್ಟ?

Aravind Kejriwal

Profile Deekshith Nair Feb 10, 2025 3:39 PM

ನವದೆಹಲಿ: ದೆಹಲಿ ಚುನಾವಣೆಯ(Delhi Election 2025) ಫಲಿತಾಂಶ ಶನಿವಾರ(ಫೆ.8) ಹೊರ ಬಿದ್ದಿದ್ದು, ಬಿಜೆಪಿ(BJP) ದಾಖಲೆಯ ಗೆಲುವು ಸಾಧಿಸಿದೆ. ಕಳೆದ ಹತ್ತು ವರ್ಷಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರಾಬಲ್ಯ ಸಾಧಿಸಿದ್ದ ಆಪ್‌(AAP) ಮಕಾಡೆ ಮಲಗಿದೆ. ಸ್ವತಃ ಅರವಿಂದ ಕೇಜ್ರಿವಾಲ್‌(Aravind Kejriwal) ಕೂಡ ತಮ್ಮ ತವರು ಕ್ಷೇತ್ರದಲ್ಲಿಯೇ ಹೀನಾಯವಾಗಿ ಸೋತಿದ್ದಾರೆ. ಈ ಮಧ್ಯೆ ಚುನಾವಣೆಯಲ್ಲಿ ಸೋತರೂ ಕೇಜ್ರಿವಾಲ್‌ ಪಂಜಾಬಿನ (Punjab) ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅಷ್ಟೇ ಅಲ್ಲದೆ ನಾಳೆ(ಫೆ.11) ಕೇಜ್ರಿವಾಲ್‌ ಪಂಜಾಬಿನ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಮ್‌ ಆದ್ಮಿ ಪಕ್ಷದ ಶಾಸಕರನ್ನು ಭೇಟಿಯಾಗಲಿದ್ದಾರೆ. ಇದೀಗ ರಾಜಕೀಯ ಪಡಸಾಲೆಯಲ್ಲಿ ಮತ್ತಷ್ಟು ಕುತೂಹಲ ಹುಟ್ಟುಕೊಂಡಿದೆ.

ಅರವಿಂದ ಕೇಜ್ರಿವಾಲ್ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬೆನ್ನಲ್ಲೇ, ಪಂಜಾಬ್‌ನ ವಿಧಾನಸಭೆಯ ವಿಪಕ್ಷ ನಾಯಕರಾದ ಪ್ರತಾಪ್ ಸಿಂಗ್ ಬಾಜ್ವಾ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ಕೇಜ್ರಿವಾಲ್ ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಕೆಳಗಿಳಿಸಿ ತಾವೇ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಬಹುದು ಎಂದು ಹೇಳಿದ್ದಾರೆ. ಹಿಂದೂ ಕೂಡ ಪಂಜಾಬ್‌ನ ಮುಖ್ಯಮಂತ್ರಿ ಆಗಬಹುದು ಎಂದು ಆಪ್‌ನ ಪಂಜಾಬ್ ಘಟಕದ ಅಧ್ಯಕ್ಷ ಅಮನ್ ಅರೋರಾ ನೀಡಿದ್ದ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಾಜ್ವಾ ಈ ಹೇಳಿಕೆ ನೀಡಿದ್ದಾರೆ.



ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್‌ ಮುಗ್ಗರಿಸಿದೆ. ಅರವಿಂದ ಕೇಜ್ರಿವಾಲ್‌ ಅವರ ಹ್ಯಾಟ್ರಿಕ್‌ ಗೆಲುವಿನ ಕನಸು ಭಗ್ನಗೊಂಡಿದೆ. ಕೇಜ್ರಿವಾಲ್‌ ಸೋತಿದ್ದರೂ ಅವರದ್ದೇ ಪಕ್ಷ ಪಂಜಾಬ್‌ ರಾಜ್ಯದಲ್ಲಿ ಅಧಿಕಾರದಲ್ಲಿರುವುದರಿಂದ ಈಗ ಮುಖ್ಯಮಂತ್ರಿ ಸ್ಥಾನದಲಿರುವ ಭಗವಂತ್‌ ಮಾನ್‌ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿ ಗದ್ದುಗೆ ಏರಬಹುದು ಎಂದು ಹೇಳಲಾಗುತ್ತಿದೆ. ಹಾಲಿ ಆಪ್ ಶಾಸಕರ ನಿಧನದಿಂದಾಗಿ ಈಗಾಗಲೇ ಲೂಧಿಯಾನ ವಿಧಾನಸಭಾ ಕ್ಷೇತ್ರದ ಸ್ಥಾನ ತೆರವಾಗಿದೆ. ಇದು ಆ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಕೇಜ್ರಿವಾಲ್‌ಗೆ ಅನುಕೂಲ ಮಾಡಿಕೊಡಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಸುದ್ದಿಯನ್ನೂ ಓದಿ:Arvind Kejriwal; ಅರವಿಂದ್ ಕೇಜ್ರಿವಾಲ್ ಪ್ರತಿಕೃತಿಯ ಅಂತ್ಯಕ್ರಿಯೆ ಮೆರವಣಿಗೆ ಮಾಡಿದ ದೆಹಲಿ ಜನ ! ವಿಡಿಯೋ ವೈರಲ್‌

ನಾಳೆ ಅರವಿಂದ ಕೇಜ್ರಿವಾಲ್‌ ಪಂಜಾಬಿನ ಆಪ್ ಮುಖ್ಯಮಂತ್ರಿ ಭಗವಂತ್‌ ಮಾನ್‌ ಮತ್ತು ಶಾಸಕರನ್ನು ಭೇಟಿಯಾಗುತ್ತಿದ್ದಾರೆ. ಇತ್ತ ಅಲ್ಲಿನ ಕಾಂಗ್ರೆಸ್‌ ನಾಯಕರು ಮುಖ್ಯಮಂತ್ರಿ ಕುರ್ಚಿ ಗಡಗಡ ಎಂದು ಹೇಳುವ ಮೂಲಕ ಲೇವಡಿ ಮಾಡುತ್ತಿದ್ದಾರೆ. ಪಂಜಾಬಿನಲ್ಲಿ ಆಮ್‌ ಆದ್ಮಿ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಅಧಿಕಾರದಲ್ಲಿದೆ. 2023 ರಲ್ಲಿ ಚುನಾವಣಾ ಆಯೋಗವು ಆಪ್‌ಗೆ ರಾಷ್ಟ್ರೀಯ ಸ್ಥಾನಮಾನ ನೀಡಿತ್ತು. ದೆಹಲಿ ಚುನಾವಣೆಯಲ್ಲಿ ಸೋತರೂ ಆಪ್‌ ರಾಷ್ಟ್ರೀಯ ಪಕ್ಷವಾಗಿಯೇ ಉಳಿಯಲಿದೆ.