Kerala Horror: ಕೇರಳದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, 59 ಆರೋಪಿಗಳ ಪೈಕಿ 57 ಮಂದಿ ಅರೆಸ್ಟ್
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು 59 ಜನರ ಪೈಕಿ 57 ಜನರನ್ನು ಈಗಾಗಲೇ ಬಂಧಿಸಿದ್ದು, ವಿಚಾರಣೆಯನ್ನು ಕೈಗೊಂಡಿದ್ದಾರೆ. ಬಾಲಕಿಯ ಮೇಲೆ ಐದಕ್ಕೂ ಹೆಚ್ಚು ಬಾರಿ ಲೈಂಗಿಕ ದೌರ್ಜನ್ಯ ನಡೆಸಿತ್ತು.
ತಿರುವನಂತಪುರಂ: ಕೇರಳದ (Keral Herror) ಪ್ತಂತಿಟ್ಟ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 59 ಆರೋಪಿಗಳ ಪೈಕಿ 57 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 10 ರಂದು ಇಳವುಂತಿಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದಾಗಿನಿಂದ ಇಲ್ಲಿಯವರೆಗೂ ವಿದೇಶದಲ್ಲಿರುವ ಇಬ್ಬರನ್ನು ಹೊರತುಪಡಿಸಿ ಪಟ್ಟಿಯಲ್ಲಿರುವ ಎಲ್ಲಾ ಆರೋಪಿಗಳನ್ನು ಸಮಗ್ರ ತನಿಖೆಯ ಮೂಲಕ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿ.ಜಿ ವಿನೋದ್ ಕುಮಾರ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೊನೆಯ ಆರೋಪಿ 25 ವರ್ಷದ ಯುವಕನನ್ನು ಭಾನುವಾರ ಬೆಳಿಗ್ಗೆ ಆತನ ಮನೆಯಲ್ಲಿ ಬಂಧಿಸಲಾಗಿದೆ. ಮಹಿಳಾ ಐಪಿಎಸ್ ಅಧಿಕಾರಿ ಎಸ್ ಅಜಿತಾ ಬೇಗಂ ನೇತೃತ್ವದ ವಿಶೇಷ ತನಿಖಾ ತಂಡವು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದೆ.ಆರೋಪಿಗಳ ಹೇಳಿಕೆ ಆಧರಿಸಿ ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳಲ್ಲಿ ಐವರು ಅಪ್ರಾಪ್ತರು ಕೂಡ ಇದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಏನಿದು ಘಟನೆ?
ಕಳೆದ ವರ್ಷ ಹನ್ನೆರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಯುವಕನೊಬ್ಬ ರಾನ್ನಿಯ ರಬ್ಬರ್ ತೋಟಕ್ಕೆ ಕರೆದೊಯ್ದು ಇತರ ಮೂವರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ಜನವರಿಯಲ್ಲಿ ಕಾರಿನೊಳಗೆ ಮತ್ತು ಪಥನಂತಿಟ್ಟ ಜನರಲ್ ಆಸ್ಪತ್ರೆಯಲ್ಲಿ ಸೇರಿದಂತೆ ಐದು ಸಂದರ್ಭಗಳಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಈಗ 18 ವರ್ಷ ವಯಸ್ಸಿನ ಬಾಲಕಿ ತನ್ನ ದೂರಿನಲ್ಲಿ 62 ವ್ಯಕ್ತಿಗಳಿಂದ ಲೈಂಗಿಕ ಕಿರುಕುಳ ನಡೆದಿದೆ ಎಂದು ತಿಳಿಸಿದ್ದಳು. ಆಕೆಯ ನಡವಳಿಕೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಗಮನಿಸಿದ ಶಾಲೆಯ ಶಿಕ್ಷಕರು ಮಕ್ಕಳ ಕಲ್ಯಾಣ ಸಮಿತಿಗೆ ತಿಳಿಸಿದ್ದರು. ನಂತರ ಆಕೆಯನ್ನು ಕೌನ್ಸೆಲಿಂಗ್‌ಗೆ ಒಳಪಡಿಸಲಾಗಿತ್ತು. ಬಳಿಕ ಘಟನೆ ಬೆಳಕಿಗೆ ಬಂದಿದೆ. ನಂತರ ಸಮಿತಿಯು ಪೊಲೀಸರಿಗೆ ಸೂಚನೆ ನೀಡಿದ್ದು, ತನಿಖೆ ನಡೆಯುತ್ತಿದೆ.
ಈ ಸುದ್ದಿಯನ್ನೂ ಓದಿ : Mumbai Horror : ಅಪರಾಧದ ಪ್ರಮುಖ ಸಾಕ್ಷಿ ಆಗಿದ್ದ ಉದ್ಯಮಿಯನ್ನೇ ಗುಂಡಿಕ್ಕಿ ಕೊಂದ ಹಂತಕರು!
ಪ್ರತ್ಯೇಕ ಘಟನೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದಲಿತ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ (Physical Abuse) ನಂತರ ಆಕೆಯನ್ನು ರಸ್ತೆ ಬದಿಗೆ ಎಸೆದ ಘಟನೆ ಕಳೆದ ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಈ ಬಗ್ಗೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಪ್ರಾಪ್ತ ಬಾಲಕಿ ಗುರುವಾರ ಮನೆಗೆ ವಸ್ತುಗಳನ್ನು ಖರೀದಿಸಲು ಅಂಗಡಿಗೆ ಹೋದಾಗ ಈ ಘಟನೆ ನಡೆದಿದೆ. ಅಂಗಡಿಯಲ್ಲಿ, ನೀರಜ್ ಎಂಬ ವ್ಯಕ್ತಿ ಅವಳಿಗೆ ನಿದ್ರೆಯ ಔಷಧ ಮಿಶ್ರಣಗೊಂಡಿರುವ ನೀರಿನ ಬಾಟಲಿಯನ್ನು ನೀಡಿದ್ದಾನೆ. ನೀರು ಕುಡಿದ ಕೂಡಲೇ ಆಕೆಗೆ ಮೂರ್ಛೆ ತಪ್ಪಿದೆ. ಅರೆ ಪ್ರಜ್ಞಾವಸ್ಥೆಯಲ್ಲಿದ್ದಾಗ ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಸಾನಾ ರಸ್ತೆಯ ಫ್ಲೈಓವರ್ ಕೆಳಗೆ ಎಸೆದು ಪರಾರಿಯಾಗಿದ್ದರು.