Kodi Mutt Swamiji: ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ!
Kodi Mutt Swamiji: ಹಳೇ ಹುಬ್ಬಳ್ಳಿಯಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆಗೆ ಕೋಡಿ ಸ್ವಾಮೀಜಿ ಮಾತನಾಡಿದ್ದಾರೆ. ಈ ವೇಳೆ ರಾಜ್ಯ ರಾಜಕೀಯದ ಬಗ್ಗೆಯೂ ಶ್ರೀಗಳು ಭವಿಷ್ಯ ನುಡಿದಿದ್ದು, ಇನ್ನುಳಿದ ವಿಷಯಗಳ ಬಗ್ಗೆ ಯುಗಾದಿಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.


ಹುಬ್ಬಳ್ಳಿ: ಬರುವ ದಿನಗಳು ಶುಭ ಮತ್ತು ಅಶುಭಗಳಿಂದ ಕೂಡಿದ್ದು, ಮುಂದಿನ ದಿನಗಳಲ್ಲಿ ಭೂಮಿಯ ಧಗೆ ಹೆಚ್ಚಾಗಲಿದೆ. ಯುಗಾದಿಗೆ ಎಲ್ಲವನ್ನೂ ಹೇಳುತ್ತೇನೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ರಾಜ್ಯ ರಾಜಕೀಯದ ಬಗ್ಗೆಯೂ ಶ್ರೀಗಳು ಭವಿಷ್ಯ ಹೇಳಿದ್ದು, ರಾಜ್ಯ ಸರ್ಕಾರಕ್ಕೆ ಸದ್ಯಕ್ಕೇನೂ ತೊಂದರೆಯಿಲ್ಲ ಎಂದು ಹೇಳಿದ್ದಾರೆ. ಸೋಮವಾರ ಹಳೇ ಹುಬ್ಬಳ್ಳಿಯಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆಗೆ ಸ್ವಾಮೀಜಿ ಮಾತನಾಡಿದ್ದು,ಈಗ ಏನು ಬಹಳ ಹೇಳಲ್ಲ. ಯುಗಾದಿಗೆ ಎಲ್ಲವನ್ನೂ ಹೇಳ್ತೇನೆ. ಮಧ್ಯದಲ್ಲಿಯೇ ಹೇಳೋಕೆ ಬರಲ್ಲ ಎಂದು ಪೂರ್ಣ ಭವಿಷ್ಯವನ್ನು ಯುಗಾದಿವರೆಗೂ ಕಾಯ್ದಿರಿಸಿದ್ದಾರೆ.
ಈ ವೇಳೆ ಸರ್ಕಾರ ಪತವಾಗುತ್ತದಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ ಎಂದು ಹೇಳಿದರು. ಬರುವ ದಿನಗಳು ಶುಭ ಮತ್ತು ಅಶುಭ ಗಳಿಂದ ಕೂಡಿದ್ದು, ಮುಂದಿನ ದಿನಗಳಲ್ಲಿ ಭೂಮಿಯ ಧಗೆ ಹೆಚ್ಚಾಗಲಿದೆ. ಯುಗಾದಿಗೆ ಎಲ್ಲವನ್ನೂ ಹೇಳ್ತೇನೆ. ಮೈಲಾರ ಕಾರ್ಣಿಕಕ್ಕೂ ಇದಕ್ಕೂ ಏನು ಸಂಬಂಧವಿಲ್ಲ ಎಂದು ಹೇಳಿದ ಸ್ವಾಮೀಜಿ, ಸರ್ಕಾರದ ಪ್ರತಿನಿಧಿಗಳ ನಡುವಿನ ಕಿತ್ತಾಟದ ಬಗ್ಗೆ ಪ್ರತಿಕ್ರಿಸಲು ನಿರಾಕರಿಸಿದರು.
ಪ್ರತಿ ವರ್ಷ ಯುಗಾದಿ ಸಂದರ್ಭದಲ್ಲಿ ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ವರ್ಷದ ಭವಿಷ್ಯ ನುಡಿಯುತ್ತಾರೆ. ಆ ವರ್ಷದ ಗಂಡಾಂತರಗಳು, ರಾಜಕೀಯ ಬೆಳವಣಿಗೆ , ಮಳೆ, ಬೆಳೆಯ ಬಗ್ಗೆ ಭವಿಷ್ಯ ಮಾತನಾಡುತ್ತಾರೆ.
ಕಳೆದ ಬಾರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್‌ನಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿರುವ ನಟ ದರ್ಶನ್ ಕುರಿತು ಕೂಡ ಕೋಡಿ ಶ್ರೀಗಳು ಮಾತನಾಡಿದ್ದರು. ಪಾಪದ ಪಾಷಾಣ ಕಳೆಯಬೇಕಿದೆ, ಪಾಪದ ಕೆಲಸ ಮಾಡುವುದಕ್ಕೆ ಹೆದರಬೇಕಾಗಿತ್ತು. ಜನರು ಪುಣ್ಯದ ಕೆಲಸ ಮಾಡಲು ಭಯ ಪಡುತ್ತಾರೆ ಎಂದು ಪರೋಕ್ಷವಾಗಿ ನುಡಿದಿದ್ದರು.
ಈ ಸುದ್ದಿಯನ್ನೂ ಓದಿ | ʻಪಾಕಿಸ್ತಾನ ಸೋಲಬೇಕೆಂದು ಮಾಟಮಂತ್ರ ಮಾಡಿಸಲಾಗಿದೆʼ: ಬಿಸಿಸಿಐ ವಿರುದ್ದ ಗಂಭೀರ ಆರೋಪ!
ಮುಜರಾಯಿ ದೇಗುಲಗಳ ನೌಕರರಿಗೆ ಸಿಹಿಸುದ್ದಿ; ಇನ್ಮುಂದೆ ಸಂಚಿತ ನಿಧಿಯಿಂದಲೇ ವೇತನ ಪಾವತಿ
ಬೆಂಗಳೂರು: ಮುಜರಾಯಿ ದೇವಸ್ಥಾನಗಳ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಇನ್ನು ಮುಂದೆ ವೇತನ ಮತ್ತು ಭತ್ಯೆಗಳು ರಾಜ್ಯ ಸರ್ಕಾರದ ಸಂಚಿತ ನಿಧಿಯಿಂದಲೇ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿ ಕಂದಾಯ ಇಲಾಖೆಯ (ಧಾರ್ಮಿಕ ದತ್ತಿ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಪಿ. ಹೇಮಂತರಾಜು ಆದೇಶ ಹೊರಡಿಸಿದ್ದಾರೆ. ಇದಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಸರ್ಕಾರಿ ಅಧಿಕಾರಿ ಹಾಗೂ ನೌಕರರ ವೇತನ ಮತ್ತಿತರ ಭತ್ಯೆಗಳನ್ನು ರಾಜ್ಯ ಸರ್ಕಾರದ ಸಂಚಿತ ನಿಧಿಯಿಂದ ಪಾವತಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿದೆ.
ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಅಧಿಕಾರಿ/ಸಿಬ್ಬಂದಿಗಳ ವೇತನಕ್ಕೆ ಅನುದಾನವನ್ನು ಲೆಕ್ಕ ಶೀರ್ಷಿಕೆ 2250-00-102-4-00 ಹಿಂದೂ ಧಾರ್ಮಿಕ ಸಂಸ್ಥೆಗಳು & ಧರ್ಮಾದಾಯ ದತ್ತಿಗಳು ಅಡಿ ಒದಗಿಸಲಾಗುವುದು. DDO ಅವರು ಈ ಲೆಕ್ಕಶೀರ್ಷಿಕೆ ಅನ್ನು ಮ್ಯಾಪ್ ಮಾಡಿಕೊಳ್ಳುವಂತೆ ಹಾಗೂ ಈ ಅಧಿಕಾರಿ ಸಿಬ್ಬಂದಿಗಳ ವಿವರಗಳನ್ನು HRMS ನಲ್ಲಿ ದಾಖಲಿಸುವಂತೆ ತಿಳಿಸಿದೆ. ಈ ರೀತಿ ಮ್ಯಾಪ್ ಮಾಡಿ HRMS ಪ್ರಕ್ರಿಯೆ ಮುಗಿದ ನಂತರ ಹೆಚ್ಚುವರಿ ಅನುದಾನದ ಅಗತ್ಯತೆಯನ್ನು ಅಂದಾಜು ಮಾಡಿ 2025-26 ನೇ ಸಾಲಿನ ಏಪ್ರಿಲ್-ಮೇ ರಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದಲ್ಲಿ ಪುನರ್-ವಿನಿಯೋಗದ ಮೂಲಕ ಹೆಚ್ಚುವರಿ ಒದಗಿಸಲಾಗುವುದೆಂದು ಆರ್ಥಿಕ ಇಲಾಖೆಯು ತಿಳಿಸಿದೆ.
ಆರ್ಥಿಕ ಇಲಾಖೆಯು ಸೂಚಿಸಿರುವಂತೆ ಶೀಘ್ರ ಅಗತ್ಯ ಕ್ರಮಕೈಗೊಳ್ಳುವಂತೆ ಮತ್ತು ಈ ಹೆಚ್ಚುವರಿ ಅನುದಾನದ ಅಗತ್ಯತೆಯನ್ನು ಅಂದಾಜು ಮಾಡಿ 2025-26 ನೇ ಸಾಲಿನ ಏಪ್ರಿಲ್-ಮೇ ರಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲು ಅನುವಾಗುವಂತೆ ಪೂರ್ಣವಿವರಗಳೊಂದಿಗೆ ಮಾಹಿತಿ ಸಲ್ಲಿಸಬೇಕು ಎಂದು ಧಾರ್ಮಿಕ ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ.
ಇನ್ನು ಈ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀವತ್ಸ ಅವರು ಧನ್ಯವಾದ ತಿಳಿಸಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಪ್ರತಿ ತಿಂಗಳು ರೂ 2 ಕೋಟಿಯಿಂದ 3 ಕೋಟಿಯವರಿಗೂ ಉಳಿತಾಯವಾಗಲಿದೆ.
ಈ ಸುದ್ದಿಯನ್ನೂ ಓದಿ | KJ George: ಗೃಹಜ್ಯೋತಿಯ ಸಹಾಯಧನ ಸರ್ಕಾರದಿಂದ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿ: ಕೆ.ಜೆ. ಜಾರ್ಜ್
ಎ ಮತ್ತು ಬಿ ವರ್ಗಗಳ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ದೇವಾಲಯಗಳ ಹಣದಿಂದ ವೇತನ, ಇತರೆ ಸೌಲಭ್ಯಗಳನ್ನು ಕೊಡುವಂತಿಲ್ಲ. ಸರ್ಕಾರದ ಸಂಚಿತ ನಿಧಿಯಿಂದ ನೀಡಬೇಕೆಂದು ಕೋರಲಾಗಿತ್ತು. ಅಲ್ಲದೇ ಕೋಟ್ಯಂತರ ರೂಪಾಯಿ ಹಣ ದುರ್ಬಳಕೆಯಾಗುತ್ತಿದ್ದ ಬಗ್ಗೆ ನಮ್ಮ ಸಂಘವು 2020 ರಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಮುಜರಾಯಿ ಸಚಿವರಿಗೆ ಮನವಿ ಮಾಡಿತ್ತು. ಇದೀಗ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಆಸಕ್ತಿ ಮತ್ತು ಪ್ರಯತ್ನದಿಂದ ಮಹತ್ವದ ಆದೇಶ ಹೊರಬಿದ್ದಿದ್ದು ದೇವಾಲಯಗಳ ಕೋಟ್ಯಂತರ ರೂಪಾಯಿ ಉಳಿಸುವ ಕೆಲಸವಾಗಿದೆ ಎಂದು ಶ್ರೀವತ್ಸ ಹೇಳಿದ್ದಾರೆ.