Kolkata Horror : ಕೊನೆಗೂ ಸಿಕ್ಕಿತು ಕೊಲ್ಕತ್ತಾ ವೈದ್ಯೆಯ ಹತ್ಯೆಗೆ ನ್ಯಾಯ ; ಹಂತಕ ಸಂಜಯ್‌ರಾಯ್ ತಪ್ಪಿತಸ್ಥ ಎಂದು ತೀರ್ಪು
ಕೊಲ್ಕತ್ತಾದ ಆರ್‌ಜಿಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ನಡೆದಿದ್ದ ಕಿರಿಯ ವೈದ್ಯೆಯ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಇಂದು ತೀರ್ಪನ್ನು ಪ್ರಕಟ ಮಾಡಿದೆ. ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋಲ್ಕತ್ತಾ ನ್ಯಾಯಾಲಯ ಶನಿವಾರ ಘೋಷಿಸಿದೆ
ಕೊಲ್ಕತ್ತಾ ಜ.18.2025 : ಕಳೆದ ವರ್ಷ ಕೊಲ್ಕತ್ತಾದ ಆರ್‌ಜಿಕರ್ (Kolkata Horror) ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆಗೆ ಸಂಬಂಧಿಸಿದ ತೀರ್ಪು ಇಂದು ಹೊರಬಿದ್ದಿದೆ. ಸೀಲ್ದಾ ನ್ಯಾಯಾಲಯ ತೀರ್ಪನ್ನು ಪ್ರಕಟ ಮಾಡಿದೆ. ಅತ್ಯಾಚಾರ-ಕೊಲೆ ಮಾಡಿದ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋಲ್ಕತ್ತಾ ನ್ಯಾಯಾಲಯ ಶನಿವಾರ ಘೋಷಿಸಿದೆ. ಆದರೆ ಈ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ಮುಂದಿನ ಸೋಮವಾರ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ. ಈ ಮೂಲಕ ಬರೋಬ್ಬರಿ 161 ದಿನಗಳ ನಂತರ ವೈದ್ಯೆಯ ಸಾವಿಗೆ ನ್ಯಾಯ ದೊರಕಿದಂತಾಗಿದೆ. (RG Kar College)
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2024 ಆಗಸ್ಟ್ 9 ರಂದು ರಾತ್ರಿ ಪಾಳಿಯಲ್ಲಿದ್ದ ಕಿರಿಯ ವೈದ್ಯೆಯ ಮೇಲೆ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು. ಮಹಿಳಾ ವೈದ್ಯೆಯ ಮೃತ ದೇಹವು ಗಾಯದ ಗುರುತುಗಳೊಂದಿಗೆ ಪತ್ತೆಯಾಗಿತ್ತು. ವೈದ್ಯೆಯ ಹತ್ಯೆಯನ್ನು ಖಂಡಿಸಿ ಇಡೀ ದೇಶದಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಆರ್‌ಜಿಕರ್ ಕಾಲೇಜಿನ ವೈದ್ಯರು ನಿರಂತರವಾಗಿ ಪ್ರತಿಭಟನೆ ನಡೆಸಿದ್ದರು. ಕೊಲ್ಕತ್ತಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಭಟನಾ ನಿರತರರ ಜೊತೆಗೆ ಮಾತನಾಡಿ ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದರು.
ಈ ಸುದ್ದಿಯನ್ನೂ ಓದಿ : RG Kar Horror : ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ತೀರ್ಪು ಶನಿವಾರ ಪ್ರಕಟ ; ಆರೋಪಿಗೆ ಮರಣದಂಡನೆ ನೀಡುವಂತೆ ಸಿಬಿಐ ಮನವಿ
ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವರ್ಗಾವಣೆ ಮಾಡಿತ್ತು. ತನಿಖೆ ಪ್ರಾರಂಭಿಸಿದ ಸಿಬಿಐ 120ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಯನ್ನು ವಿಚಾರಣಾ ನ್ಯಾಯಾಲಯದ ಮುಂದೆ ದಾಖಲಿಸಿತ್ತು. 45 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿ ಸಂಜಯ್ ರಾಯ್ ಜೀನ್ಸ್ ಮತ್ತು ಶೂಗಳಲ್ಲಿ ಸಂತ್ರಸ್ತೆಯ ರಕ್ತ ಪತ್ತೆಯಾಗಿದೆ ಎಂದು ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಕೆ ಮಾಡಲಾಗಿತ್ತು. ಪ್ರಕರಣದ ಕೂಲಂಕುಷ ತನಿಖೆ ಮಾಡಿದ ನ್ಯಾಯಾಲಯ, ಇದೀಗ ಆರೋಪಿಯನ್ನು ದೋಷಿ ಎಂದು ಘೋಷಿಸಿದೆ. ನ್ಯಾಯಮೂರ್ತಿ ಅನಿರ್ಬನ್ ದಾಸ್, ಅವರು ತೀರ್ಪನ್ನು ಪ್ರಕಟಿಸಿದ್ದಾರೆ.