ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಕೋಲ್ಕತಾ ನೈಟ್‌ ರೈಡರ್ಸ್‌-ಪಂಜಾಬ್‌ ಕಿಂಗ್ಸ್ ನಡುವಣ ಪಂದ್ಯ ಮಳೆಗೆ ಬಲಿ!

KKR vs PBKS Match Highlights: ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣಲ್ಲಿನ ಪಂಜಾಬ್ ಕಿಂಗ್ಸ್‌ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ನಡುವಣ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 44ನೇ ಪಂದ್ಯ ಮಳೆಗೆ ಬಲಿಯಾಯಿತು. ಆ ಮೂಲಕ ಎರಡೂ ತಂಡಗಳಿಗೆ ಒಂದೊಂದು ಅಂಕವನ್ನು ಹಂಚಲಾಯಿತು.

1/6

ಟಾಸ್‌ ಗೆದ್ದಿದ್ದ ಪಂಜಾಬ್‌ ಕಿಂಗ್ಸ್‌

ಶನಿವಾರ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 44ನೇ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಪಂಜಾಬ್‌ ಕಿಂಗ್ಸ್‌ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಆ ಮೂಲಕ ದೊಡ್ಡ ಮೊತ್ತವನ್ನು ಕಲೆ ಹಾಕುವ ಮೂಲಕ ಎದುರಾಳಿ ಕೋಲ್ಕತಾ ನೈಟ್‌ ರೈಡರ್ಸ್‌ಗೆ ದೊಡ್ಡ ಗುರಿಯನ್ನು ನೀಡಲು ಯೋಜನೆ ರೂಪಿಸಿಕೊಂಡಿತು.

2/6

201 ರನ್‌ಗಳನ್ನು ಗಳಿಸಿದ ಪಂಜಾಬ್‌

ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತನ್ನ ಪಾಲಿನ 20 ಓವರ್‌ಗಳಿಗೆ 4 ವಿಕೆಟ್‌ಗೆ 201 ರನ್ ಗಳಿಸಿತು. ಆ ಮೂಲಕ ಎದುರಾಳಿ ಕೋಲ್ಕತಾ ನೈಟ್‌ ರೈಡರ್ಸ್‌ಗೆ 202 ರನ್‌ಗಳ ಗುರಿಯನ್ನು ನೀಡಿತು.

3/6

ಪ್ರಭ್‌ಸಿಮ್ರನ್ ಮತ್ತು ಪ್ರಿಯಾಂಶ್ ಜುಗಲ್‌ಬಂದಿ

ಪಂಜಾಬ್ ಕಿಂಗ್ಸ್ ತಂಡದ ಪರ ಇನಿಂಗ್ಸ್‌ ಆರಂಭಿಸಿದ ಪ್ರಭ್‌ಸಿಮ್ರಾನ್‌ ಸಿಂಗ್ (83) ಮತ್ತು ಪ್ರಿಯಾಂಶ್ ಆರ್ಯ (69) ಅವರು ಸ್ಪೋಟಕ ಬ್ಯಾಟ್‌ ಮಾಡಿದರು. ಈ ಇಬ್ಬರೂ ಮುರಿಯದ ಮೊದಲನೇ ವಿಕೆಟ್‌ಗೆ 120 ರನ್‌ಗಳ ಜೊತೆಯಾಟವನ್ನು ಆಡಿದರು. ಆ ಮೂಲಕ ಪಂಜಾಬ್‌ಗೆ ಭರ್ಜರಿ ಆರಂಭ ತಂದುಕೊಟ್ಟರು.

4/6

ಎರಡು ಅರ್ಧಶತಕಗಳು

ಸ್ಪೋಟಕ ಬ್ಯಾಟ್‌ ಮಾಡಿದ ಪ್ರಿಯಾಂಶ್‌ ಆರ್ಯ 35 ಎಸೆತಗಳಲ್ಲಿ 69 ರನ್‌ಗಳನ್ನು ಸಿಡಿಸಿದರೆ, ಪ್ರಭ್‌ಸಿಮ್ರಾನ್‌ 49 ಎಸೆತಗಳಲ್ಲಿ 83 ರನ್‌ಗಳನ್ನು ಸಿಡಿಸಿದರು. ಆ ಮೂಲಕ ಪಂಜಾಬ್‌ ಕಿಂಗ್ಸ್‌ 200ಕ್ಕೂ ಅಧಿಕ ರನ್‌ ಗಳಿಸಲು ನೆರವು ನೀಡಿದರು.

5/6

ಕೆಕೆಆರ್‌: 7-0

ಬಳಿಕ 202 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಕೋಲ್ಕತಾ ನೈಟ್‌ ರೈಡರ್ಸ್‌ ತಂಡ ಒಂದು ಓವರ್‌ಗೆ ವಿಕೆಟ್‌ ನಷ್ಟವಿಲ್ಲದೆ 7 ರನ್‌ಗಳನ್ನು ಕಲೆ ಹಾಕಿತು. ಈ ವೇಳೆ ಮಳೆ ಬಂದ ಕಾರಣ ಪಂದ್ಯವನ್ನು ನಿಲ್ಲಿಸಲಾಯಿತು. ನಂತರ ಮೈದಾನದಲ್ಲಿ ತೇವ ಇದ್ದ ಕಾರಣ ಆಟವನ್ನು ಮುಂದುವರಿಸಲು ಸಾಧ್ಯವಾಗದೆ ಪಂದ್ಯವನ್ನು ರದ್ದುಗೊಳಿಸಲಾಯಿತು.

6/6

ಎರಡೂ ತಂಡಗಳಿಗೆ ಒಂದೊಂದು ಅಂಕ

ಶನಿವಾರದ ಪಂದ್ಯ ಮಳೆಯಿಂದ ರದ್ದಾಯಿತು. ಈ ಹಿನ್ನೆಲೆಯಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳಿಗೆ ಒಂದೊಂದು ಅಂಕವನ್ನು ನೀಡಲಾಯಿತು. ಪಂಜಾಬ್‌ ನಾಲ್ಕನೇ ಸ್ಥಾನದಲ್ಲಿ ಉಳಿಯಿತು.