ಚುನಾವಣೆ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Kumbh Mela: ಫೆ.10ರಿಂದ 3 ದಿನ ಟಿ.ನರಸೀಪುರ ಸಂಗಮದಲ್ಲಿ ಕುಂಭಮೇಳ, ಪುಣ್ಯ ಸ್ನಾನಕ್ಕೆ 5 ಕಡೆ ಸ್ಥಳ ಗುರುತು

ತಿರುಮಕೂಡಲು ನರಸೀಪುರದಲ್ಲಿ ಕಾವೇರಿ ಹಾಗೂ ಕಬಿನಿ ನದಿಗಳು ಸಂಗಮಿಸುತ್ತವೆ. ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಈ ಪುಣ್ಯಕ್ಷೇತ್ರದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭ ಮೇಳ ನಡೆಯುತ್ತದೆ. ಇಲ್ಲಿ ಭಕ್ತರಿಗೆ ಪುಣ್ಯಸ್ನಾನಕ್ಕೆ 5 ಕಡೆ ಸ್ಥಳ ಗುರುತು ಮಾಡಲಾಗಿದೆ.

ಫೆ.10ರಿಂದ ಟಿ.ನರಸೀಪುರದಲ್ಲಿ ಕುಂಭಮೇಳ, 5 ಕಡೆ ಪುಣ್ಯ ಸ್ನಾನ

ತಿರುಮಕೂಡಲು ನರಸೀಪುರದ ಸಂಗಮ

ಹರೀಶ್‌ ಕೇರ ಹರೀಶ್‌ ಕೇರ Feb 8, 2025 7:18 AM

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿನ ಮಹಾ ಕುಂಭಮೇಳದ (Maha Kumbh Mela) ಬೆನ್ನಲ್ಲೇ ಕರ್ನಾಟಕದಲ್ಲೂ ಸೋಮವಾರದಿಂದ ಕುಂಭಮೇಳ ನಡೆಯಲಿದೆ. ತಿರುಮಕೂಡಲು ನರಸೀಪುರದ (T Narsipura) ಸಂಗಮದಲ್ಲಿ ಭಕ್ತರಿಗೆ ಪುಣ್ಯ ಸ್ನಾನ ಮಾಡಲು 5 ಕಡೆ ಸ್ಥಳ ಗುರುತು ಮಾಡಲಾಗಿದೆ.

ಮೈಸೂರು ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ ಸಹಯೋಗದೊಂದಿಗೆ 13ನೇ ಕುಂಭಮೇಳವನ್ನು ಫೆ.10, 11 ಮತ್ತು 12ರಂದು ಜಿಲ್ಲೆಯ ಟಿ. ನರಸೀಪುರದ ಶ್ರೀ ಕ್ಷೇತ್ರ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದೆ.

ಫೆ.10ರ ಬೆಳಗ್ಗೆ 8.30ಕ್ಕೆ ಶ್ರೀ ಅಗಸ್‌ತ್ಯೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನುಜ್ಞಾ ಕಾರ್ಯಕ್ರಮ, ಅಂಕುರಾರ್ಪಣೆ ಮತ್ತು ಧ್ವಜಾರೋಹಣ ನೆರವೇರಲಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ.ಮಹದೇವಪ್ಪ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಫೆ.11ರ ಬೆಳಗ್ಗೆ 11ಕ್ಕೆ ಧಾರ್ಮಿಕ ಸಭೆಯನ್ನು ಏರ್ಪಡಿಸಲಾಗಿದ್ದು, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಉದ್ಘಾಟಿಸುವರು. ಸಚಿವರಾದ ಮಹದೇವಪ್ಪ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕ‌ರ್ ಭಾಗವಹಿಸುವರು. ಫೆ.12ರ ಮಧ್ಯಾಹ್ನ 12ಕ್ಕೆ ಧರ್ಮಸಭೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸಮಾರೋಪ ಭಾಷಣ ಮಾಡುವರು.

ತಿರುಮಕೂಡಲು ನರಸೀಪುರದಲ್ಲಿ ಕಾವೇರಿ ಹಾಗೂ ಕಬಿನಿ ನದಿಗಳು ಸಂಗಮಿಸುತ್ತವೆ. ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಈ ಪುಣ್ಯಕ್ಷೇತ್ರದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭ ಮೇಳ ನಡೆಯುತ್ತದೆ.

ಇದನ್ನೂ ಓದಿ: Aishwarya DK Shivakumar: ಕುಂಭಮೇಳದಲ್ಲಿ ಪವಿತ್ರಸ್ನಾನ ಮಾಡಿದ ಡಿಕೆಶಿ ಮಗಳು ಐಶ್ವರ್ಯಾ: ವಿಡಿಯೋ ಇಲ್ಲಿದೆ