ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಒಗ್ಗಟ್ಟಿನ ಶಕ್ತಿ ತೋರಿಸೋಣ : ಕಾಂಗ್ರೆಸ್ ಕಾರ್ಯಕರ್ತರಿಗೆ ಪುಟು ಅಂಜಿನಪ್ಪ ಮನವಿ

ತಾಲೂಕಿನ ಎಲ್ಲಾ ಹೋಬಳಿ ಹಾಗೂ ಗ್ರಾಮಗಳ ಕಾಂಗ್ರೆಸ್ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿ ಹೋರಾಟಕ್ಕೆ ಬಲ ತುಂಬ ಬೇಕು. ಪಕ್ಷದ ತತ್ವ–ಸಿದ್ಧಾಂತಗಳ ರಕ್ಷಣೆ ಮತ್ತು ಜನಪರ ಹೋರಾಟಗಳಿಗೆ ಶಕ್ತಿ ತುಂಬುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿ

ಶಿಡ್ಲಘಟ್ಟ : ಚಿಕ್ಕಬಳ್ಳಾಪುರದಲ್ಲಿ 23ರಂದು ನಡೆಯಲಿರುವ ಪ್ರತಿಭಟನೆಗೆ ಶಿಡ್ಲಘಟ್ಟ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಬೇಕು ಎಂದು ಕಾಂಗ್ರೆಸ್ ಮುಖಂಡ ಪುಟು ಅಂಜಿನಪ್ಪ ಕರೆ ನೀಡಿದ್ದಾರೆ.

ನಗರದ ವಾಯುಪುತ್ರ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರ ಸಮಸ್ಯೆಗಳು ದಿನೇ ದಿನೇ ಹೆಚ್ಚುತ್ತಿದ್ದು, ಅವುಗಳಿಗೆ ಶಾಶ್ವತ ಪರಿಹಾರ ಒದಗಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ರೈತರು, ಕಾರ್ಮಿಕರು, ಯುವಕರು ಹಾಗೂ ಮಹಿಳೆಯರು ಎದುರಿಸುತ್ತಿರುವ ಆರ್ಥಿಕ ಮತ್ತು ಸಾಮಾಜಿಕ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Shidlaghatta News: 75 ವರ್ಷಗಳ ಪರಂಪರೆಯ ದೇವಾಲಯದಲ್ಲಿ ಮಹಾಶಿವರಾತ್ರಿ ವೈಭವ...

ಈ ಹೋರಾಟದಲ್ಲಿ ಕೇಂದ್ರದ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರು, ಪಕ್ಷದ ಪ್ರಮುಖರು ಹಾಜರಾಗಲಿದ್ದಾರೆ ಎಂದರು.

ತಾಲೂಕಿನ ಎಲ್ಲಾ ಹೋಬಳಿ ಹಾಗೂ ಗ್ರಾಮಗಳ ಕಾಂಗ್ರೆಸ್ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿ ಹೋರಾಟಕ್ಕೆ ಬಲ ತುಂಬಬೇಕು. ಪಕ್ಷದ ತತ್ವ–ಸಿದ್ಧಾಂತಗಳ ರಕ್ಷಣೆ ಮತ್ತು ಜನಪರ ಹೋರಾಟಗಳಿಗೆ ಶಕ್ತಿ ತುಂಬುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿ ಎಂದು ಹೇಳಿದರು.

ಪ್ರತಿಭಟನೆ ಶಿಸ್ತಿನೊಂದಿಗೆ ಹಾಗೂ ಸಂಘಟಿತ ರೀತಿಯಲ್ಲಿ ನಡೆಯಲಿದ್ದು, ಶಿಡ್ಲಘಟ್ಟದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪುಟು ಅಂಜಿನಪ್ಪ ಮನವಿ ಮಾಡಿದ್ದಾರೆ.