#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Mallikarjun Kharge: ತ್ರಿವೇಣಿ ಸಂಗಮದಲ್ಲಿ ಮುಳುಗಿ ಎದ್ದ ಮಾತ್ರಕ್ಕೆ ಬಡತನ ನಿರ್ಮೂಲನೆ ಸಾಧ್ಯವೇ?; ಖರ್ಗೆ ಪ್ರಶ್ನೆ!

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಇಂದು(ಜ.27) ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಗಮದಲ್ಲಿ ಸಾಧುಗಳ ಜೊತೆಗೆ ಪವಿತ್ರ ಸ್ನಾನ ಮಾಡಿದ್ದಾರೆ. ಇದರ ಬೆನ್ನಲ್ಲೇ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಮಿತ್ ಶಾ ಗಂಗಾಸ್ನಾನ‌ ಮಾಡಿದ ತಕ್ಷಣ ಬಡತನ ತೊಡೆದುಹಾಕಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರು ಕ್ಯಾಮೆರಾಗಳಲ್ಲಿ ಕಾಣಲು ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನದಿಯಲ್ಲಿ ಮುಳಗಿದ ಮಾತ್ರಕ್ಕೆ ಬಡತನ ನಿರ್ಮೂಲನೆ ಸಾಧ್ಯವೇ?: ವಿವಾದ ಹುಟ್ಟು ಹಾಕಿದ ಖರ್ಗೆ

Mallikarjun Kharge

Profile Deekshith Nair Jan 27, 2025 7:38 PM

ನವದೆಹಲಿ: ಉತ್ತರ ಪ್ರದೇಶದ(Uttar Pradesh) ಪ್ರಯಾಗ್‌ರಾಜ್‌ನಲ್ಲಿ(Prayagraj) ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ(Mahakumbh) ಇಂದು (ಜ. 27) ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ತ್ರಿವೇಣಿ ಸಂಗಮದಲ್ಲಿ ಸಾಧುಗಳ ಜತೆಗೆ ಪವಿತ್ರ ಸ್ನಾನ ಮಾಡಿದ್ದಾರೆ. ಇದರ ಬೆನ್ನಲ್ಲೇ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮತ್ತು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಅಮಿತ್ ಶಾ ಗಂಗಾಸ್ನಾನ‌ ಮಾಡಿದ ತಕ್ಷಣ ಬಡತನ ತೊಡೆದುಹಾಕಲು ಸಾಧ್ಯವೇ ಎಂದು ಪ್ರಶ್ನಿಸಿದರು. ಬಿಜೆಪಿ ನಾಯಕರು ಕ್ಯಾಮೆರಾಗಳಲ್ಲಿ ಕಾಣಲು ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಮಧ್ಯಪ್ರದೇಶದ ಮಹುವಿನಲ್ಲಿ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಬಿಜೆಪಿ ನಾಯಕರು ಕ್ಯಾಮೆರಾದಲ್ಲಿ ಚೆನ್ನಾಗಿ ಕಾಣುವವರೆಗೂ ಸ್ನಾನ ಮಾಡಿದ್ದಾರೆ ಎಂದು ಅಪಹಾಸ್ಯ ಮಾಡಿದ್ದಾರೆ. ನಾನು ಯಾರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಒಂದು ವೇಳೆ ನನ್ನ ಹೇಳಿಕೆಯಲ್ಲಿ ತಪ್ಪಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.



ಪ್ರಧಾನಿಯ ಸುಳ್ಳು ಭರವಸೆಗಳಿಗೆ ಮರುಳಾಗಬೇಡಿ. ಗಂಗಾ ಸ್ನಾನದಿಂದ ಬಡತನ ಕೊನೆಯಾಗುತ್ತದೆಯೇ? ಅದು ನಿಮ್ಮ ಹೊಟ್ಟೆಯನ್ನು ತುಂಬಿಸುತ್ತದೆಯೇ? ಎಂದು ಪ್ರಶ್ನಿಸಿದ ಖರ್ಗೆ, ನಾನು ಯಾರ ನಂಬಿಕೆಯನ್ನು ಪ್ರಶ್ನಿಸಲು ಬಯಸುವುದಿಲ್ಲ. ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾದರೆ ಕ್ಷಮೆಯಾಚಿಸುತ್ತೇನೆ. "ಆದರೆ ಹೇಳಿ, ಒಂದು ಮಗು ಶಾಲೆಗೆ ಹೋಗದೆ, ಹಸಿವಿನಿಂದ ಸಾಯುತ್ತಿರುವಾಗ, ಕೂಲಿ ಕಾರ್ಮಿಕರಿಗೆ ಸರಿಯಾದ ಕೂಲಿ ಸಿಗದ ಸಮಯದಲ್ಲಿ ಬಿಜೆಪಿಯವರು ಸಾವಿರಾರು ರೂ. ಖರ್ಚು ಮಾಡಿ ಗಂಗಾದಲ್ಲಿ ಸ್ನಾನ ಮಾಡಲು ಪೈಪೋಟಿ ನಡೆಸುತ್ತಿದ್ದಾರೆ. ಕ್ಯಾಮೆರಾದಲ್ಲಿ ಚೆನ್ನಾಗಿ ಕಾಣಿಸುವವರೆಗೂ ಅವರು ಸ್ನಾನ ಮಾಡುತ್ತಲೇ ಇರುತ್ತಾರೆ ಎಂದು ಲೇವಡಿ ಮಾಡಿದರು.

ಈ ಸುದ್ದಿಯನ್ನೂ ಓದಿ:Mahakumbh 2025: ಕುಂಭಮೇಳದ ಅಮೃತ ಸ್ನಾನಕ್ಕೆ ಪಾಪಗಳನ್ನು ತೊಳೆಯುವ ಶಕ್ತಿ ಇದೆಯೇ? ಇಲ್ಲಿದೆ ವಿವರವಾದ ಮಾಹಿತಿ

ಇಂತಹ ಜನರಿಂದ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ. ದೇವರ ಮೇಲೆ ನಮಗೂ ನಂಬಿಕೆ ಇದೆ. ಜನರು ಪ್ರತಿದಿನ ಮನೆಯಲ್ಲಿ 'ಪೂಜೆ' ಮಾಡುತ್ತಾರೆ. ಎಲ್ಲಾ ಮಹಿಳೆಯರು 'ಪೂಜೆ' ಮಾಡಿದ ನಂತರ ತಮ್ಮ ಮನೆಯಿಂದ ಹೊರ ಹೋಗುತ್ತಾರೆ. ಯಾವುದೇ ಸಮಸ್ಯೆ ಇಲ್ಲ. ಆದರೆ ಧರ್ಮದ ಹೆಸರಿನಲ್ಲಿ ಬಡವರು ಶೋಷಣೆಗೆ ಒಳಗಾಗುತ್ತಿರುವುದು ಸಮಸ್ಯೆಯಾಗಿದೆ ಎಂದು ಖರ್ಗೆ ಹೇಳಿದರು.

ಇನ್ನು ಖರ್ಗೆ ಅವರ ಹೇಳಿಕೆಯನ್ನು ಬಿಜೆಪಿಯ ಹಲವು ನಾಯಕರು ತೀವ್ರವಾಗಿ ಖಂಡಿಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಕಾಂಗ್ರೆಸ್‌ನ ದ್ವೇಷವು ಕೋಟ್ಯಂತರ ಹಿಂದೂಗಳ ನಂಬಿಕೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಪಕ್ಷದ ಸಂಸದ ಮತ್ತು ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ.

"ಮಹಾ ಕುಂಭಮೇಳವು ಶತಮಾನಗಳಿಂದಲೂ ನಡೆದುಕೊಂಡು ಬಂದಿದೆ. ಅದು ಸನಾತನ ಧರ್ಮದ ನಂಬಿಕೆಯ ಪ್ರತೀಕವಾಗಿದೆ. ಇಡೀ ವಿಶ್ವವೇ ಈ ನಂಬಿಕೆಯನ್ನು ಗೌರವಿಸುತ್ತಿರುವಾಗ, ಭಾರತದ ದೊಡ್ಡ ರಾಜಕೀಯ ವಿರೋಧ ಪಕ್ಷವು ಮಹಾ ಕುಂಭಮೇಳ ಮತ್ತು ಧಾರ್ಮಿಕ ನಂಬಿಕೆಯನ್ನು ಅಪಹಾಸ್ಯ ಮಾಡುತ್ತಿದೆ ಎಂದು ಸಂಬಿತ್‌ ಕಿಡಿಕಾರಿದ್ದಾರೆ.