#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Mahakumbh: ಕುಟುಂಬ ಸಮೇತ ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ ಅಮಿತ್ ಶಾ- ಸಂಗಮದಲ್ಲಿ ಪವಿತ್ರ ಸ್ನಾನ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸೋಮವಾರ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಆಗಮಿಸಿದ್ದರು. ಅವರು ತ್ರಿವೇಣಿಯಲ್ಲಿ ಪುಣ್ಯಸ್ನಾನ ಕೈಗೊಂಡಿದ್ದಾರೆ. ಅವರ ಜೊತೆ ಸಿಎಂ ಯೋಗಿ ಆದಿತ್ಯನಾಥ್‌, ಬಾಬಾ ರಾಮ್‌ ದೇವ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮಹಾಕುಂಭ ಮೇಳಕ್ಕೆ ಅಮಿತ್‌ ಶಾ ವಿಸಿಟ್‌; ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ

Amit Shah in Mahakumbh

Profile Vishakha Bhat Jan 27, 2025 3:59 PM

ಲಖನೌ : ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ (Mahakumbh Mela) ನಡೆಯುತ್ತಿದೆ. ಕೋಟ್ಯಾಂತರ ಜನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಸೋಮವಾರ ಮಹಾ ಕುಂಭಮೇಳದಲ್ಲಿ ಸಾಧುಗಳ ಜೊತೆಗೆ ಪವಿತ್ರ ಸ್ನಾನ ಮಾಡಿದ್ದಾರೆ. ಶಾ ಅವರೊಂದಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, (Yogi Adityanath) ಬಾಬಾ ರಾಮ್ ದೇವ್ (Baba RAmdev) ಸೇರಿದಂತೆ ಹಲವು ಸಂತರು ಮತ್ತು ಸಾಧುಗಳು ಇದ್ದರು. ಐಸಿಸಿ ಅಧ್ಯಕ್ಷ ಜಯ್‌ ಶಾ ಹಾಗೂ ಅವರ ಪುತ್ರ ಕೂಡ ಆಗಮಿಸಿದ್ದು, ಆಶೀರ್ವಾದ ಪಡೆದಿದ್ದಾರೆ.



ಪವಿತ್ರ ಸ್ನಾನಕ್ಕೂ ಮೊದಲು, ಅಮಿತ್ ಶಾ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಯಾಗ್‌ರಾಜ್‌ನಲ್ಲಿರುವ ಸಾಧು, ಸಂತರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಪವಿತ್ರ ಸ್ನಾನದ ನಂತರ ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಲಿದ್ದಾರೆ. ಅವರು ಮಹಾರಾಜ್ ಮತ್ತು ಜುನಾ ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಊಟ ಮಾಡುತ್ತಾರೆ ಎಂದು ಮೂಲಗಳು ತಿಳಿಸಿದ್ದಾರೆ.



ಈ ಸುದ್ದಿಯನ್ನೂ ಓದಿ : Mahakumbh 2025: ಮಹಾಕುಂಭ ಮೇಳದಲ್ಲಿ ನಡೀತು ವಿದೇಶಿ ಯುವತಿಯ ಜೊತೆ ಭಾರತೀಯ ಯುವಕನ ವಿವಾಹ!

ನಂತರ ಶಾ ಗುರು ಶರಣಾನಂದ ಜಿ ಅವರ ಆಶ್ರಮಕ್ಕೆ ಭೇಟಿ ಮಾಡಿ ಅಲ್ಲಿ ಅವರು ಗುರು ಶರಣಾನಂದ ಜಿ ಮತ್ತು ಗೋವಿಂದ ಗಿರಿ ಜಿ ಮಹಾರಾಜ್ ಜೊತೆ ಮಾತುಕತೆ ನಡೆಸಲಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಸರ್ಕಾರದ ಸಚಿವರೆಲ್ಲರೂ ಪುಣ್ಯ ಸ್ನಾನ ಮಾಡಿದ್ದರು. ಫೆ 5 ರಂದು ಮಹಾಕುಂಭ ಮೇಳಕ್ಕೆ ನರೇಂದ್ರ ಮೋದಿ ಅವರು ಆಗಮಿಸಿ ಪುಣ್ಯ ಸ್ನಾನ ಮಾಡಲಿದ್ದಾರೆ.