Mahakumbh: ಪಾಕಿಸ್ತಾನ ಕೂಡ ಪ್ರಭಾವಿತವಾಗಿದೆ; ಮಹಾ ಕುಂಭಮೇಳವನ್ನು ಹಾಡಿ ಹೊಗಳಿದ ಮುಸ್ಲಿಂ ಧರ್ಮಗುರು!

Mahakumbh: ಮಹಾ ಕುಂಭಮೇಳದ ವ್ಯವಸ್ಥೆಯ ಅಚ್ಚುಕಟ್ಟುತನವನ್ನು ಮುಸ್ಲಿಂ ಧರ್ಮಗುರುವೊಬ್ಬರು ಹಾಡಿ ಹೊಗಳಿದ್ದು,ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಶ್ಲಾಘಿಸಿದ್ದಾರೆ.

image-7a681957-d50b-4142-9ffa-e578cbfd0a67.jpg
Profile Deekshith Nair January 13, 2025
ಲಖನೌ: ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವವಾದ ಮಹಾ ಕುಂಭಮೇಳ(Mahakumbh) ಉತ್ತರಪ್ರದೇಶದ(Uttar Pradesh) ಪ್ರಯಾಗ್‌ರಾಜ್(‌Prayagraj) ನಗರದ ಪವಿತ್ರ ತ್ರಿವೇಣಿ ಸಂಗಮದಲ್ಲಿ ಇಂದು ಬೆಳಗ್ಗೆ ಆರಂಭವಾಗಿದೆ. ಈ ಮಹಾ ಕುಂಭಮೇಳವು ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ವಿಜೃಂಭಣೆಯಿಂದ ನಡೆಯುತ್ತದೆ. ಬರೋಬ್ಬರಿ ಹತ್ತು ಸಾವಿರ ಎಕರೆ ಭೂಮಿಯಲ್ಲಿ ಕುಂಭಮೇಳಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇಂದಿನಿಂದ ಫೆ.26ರವರೆಗೆ ಅಂದರೆ 45 ದಿನಗಳು ಕುಂಭಮೇಳ ನಡೆಯಲಿದ್ದು, 45 ಕೋಟಿಗೂ ಹೆಚ್ಚು ಭಕ್ತಾಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ. ಈ ನಡುವೆ ಮಹಾಕುಂಭಮೇಳವನ್ನು ಕಣ್ತುಂಬಿಕೊಂಡಿರುವ ಮುಸ್ಲಿಂ ಧರ್ಮ ಗುರುಗಳು ವ್ಯವಸ್ಥೆಯ ಅಚ್ಚುಕಟ್ಟುತನವನ್ನು ಹಾಡಿ ಹೊಗಳಿದ್ದಾರೆ. VIDEO | Bareilly: Here's what All India Muslim Jamaat president Maulana Shahabuddin Razvi Barelvi said on Maha Kumbh 2025."I extend my best wishes to all the devotees and saints who are coming to the Kumbh Mela. At the same time, I appeal to the Muslims of Prayagraj to warmly… pic.twitter.com/mB7S6fuP2b— Press Trust of India (@PTI_News) January 10, 2025 ಕುಂಭಮೇಳ ನಡೆಯುತ್ತಿರುವ ಅಷ್ಟೂ ಜಾಗ ಮುಸ್ಲಿಂ ವಕ್ಫ್‌ ಬೋರ್ಡಿಗೆ ಸೇರಿದ್ದು ಎಂಬ ಸಾಕಷ್ಟು ವಿವಾದಗಳ ಮಧ್ಯೆಯೇ ಕುಂಭಮೇಳವನ್ನು ಮುಸ್ಲಿಂ ಧರ್ಮ ಗುರುವೊಬ್ಬರು ಶ್ಲಾಘಿಸಿದ್ದಾರೆ. ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ( Barelvi) ಅವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಪ್ರಶಂಸಿಸಿದ್ದು, ಭಕ್ತರಿಗೆ ಊಟ, ವಸತಿ ಮತ್ತು ಸ್ನಾನಕ್ಕೆ ಅತ್ಯುತ್ತಮ ವ್ಯವಸ್ಥೆ ಮಾಡಿದ್ದಾರೆ ಎಂದಿದ್ದಾರೆ. ವಕ್ಫ್ ಭೂಮಿಯಲ್ಲಿ ಮಹಾಕುಂಭವನ್ನು ನಡೆಸಲಾಗುತ್ತಿದೆ ಎಂದು ಪ್ರತಿಪಾದಿಸಿದ್ದ ಪ್ರಮುಖ ಮುಸ್ಲಿಂ ಧರ್ಮಗುರು ಭಾನುವಾರ(ಜ.12) ಕುಂಭಮೇಳದ ವ್ಯವಸ್ಥೆಗಳನ್ನು ಶ್ಲಾಘಿಸಿರುವ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ವಿಡಿಯೊ ಮೂಲಕ ಮಾತನಾಡಿರುವ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ "ಈ ಅದ್ಧೂರಿ ಕಾರ್ಯಕ್ರಮವು ದೇಶದ ಜನರನ್ನು ಮಾತ್ರವಲ್ಲದೆ ಇಡೀ ವಿಶ್ವವನ್ನು ಮೆಚ್ಚಿಸುತ್ತದೆ. ಭಾರತವನ್ನು ಆಗಾಗ್ಗೆ ಟೀಕಿಸುವ ಪಾಕಿಸ್ತಾನ ಕೂಡ ಮಹಾಕುಂಭದ ಸಿದ್ಧತೆಗಳನ್ನು ವಿಶೇಷವಾಗಿ ಪ್ರಶಂಸಿಸುತ್ತಿದೆ. ಯೋಗಿ ಆದಿತ್ಯನಾಥ್ ಅವರು ಭಕ್ತರಿಗೆ ಊಟ, ವಸತಿ, ಸ್ನಾನದ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಕಾರ್ಯಕ್ರಮದ ಭವ್ಯತೆ ಮತ್ತು ಸುಗಮ ನಿರ್ವಹಣೆಯು ಅವರ ದೂರದೃಷ್ಟಿಯ ಯೋಜನೆಯ ಫಲಿತಾಂಶ" ಎಂದು ಹೇಳಿದ್ದಾರೆ. ಬರೇಲ್ವಿ ಅವರು ಒಂದು ವಾರದ ಹಿಂದೆ ವಕ್ಫ್ ಭೂಮಿಯ ಬಗ್ಗೆ ಹಕ್ಕು ಮಂಡಿಸಿದ್ದರು. ಬೃಹತ್ 'ಘರ್ ವಾಪಸಿ' ಉಪಕ್ರಮದ ಭಾಗವಾಗಿ ಮುಸ್ಲಿಮರ ಸಾಮೂಹಿಕ ಮತಾಂತರವನ್ನು ನಿಲ್ಲಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಯಾಗಿ ಧರ್ಮಗುರುಗಳ ಹೆಸರು ಹೇಳದೆ ಯೋಗಿ ಆದಿತ್ಯನಾಥ್, ವಕ್ಫ್ ಹೆಸರಿನಲ್ಲಿ ಕಬಳಿಸಿರುವ ಪ್ರತಿಯೊಂದು ಇಂಚು ಭೂಮಿಯನ್ನು ಮರಳಿ ಪಡೆಯಲಾಗುವುದು ಎಂದು ಹೇಳಿದ್ದರು. ಈ ಸುದ್ದಿಯನ್ನೂ ಓದಿ:Ajith Kumar: ದುಬೈ ಕಾರ್‌ ರೇಸ್‌ನಲ್ಲಿ ಗೆದ್ದು ತ್ರಿವರ್ಣ ಧ್ವಜ ಹಾರಿಸಿದ‌ ನಟ ಅಜಿತ್; ಪ್ರೀತಿಯ ಹೆಂಡತಿಗೆ ಮುತ್ತಿಟ್ಟು ಸಂಭ್ರಮ!‌
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ