Mahakumbh Mela Stampede: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಬೆಳಗಾವಿಯ ತಾಯಿ-ಮಗಳು ಸಾವು, ಹಲವರಿಗೆ ಗಾಯ
Mahakumbh Mela Stampede: ಮೌನಿ ಅಮಾವಾಸ್ಯೆ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಕೋಟ್ಯಂತರ ಜನ ತೆರಳಿದ್ದಾರೆ. ಮುಂಜಾನೆ ನದಿಯಲ್ಲಿ ಸ್ನಾನ ಮಾಡುವಾಗ ಕಾಲ್ತುಳಿತ ಸಂಭವಿಸಿ ಹಲವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬೆಳಗಾವಿ ತಾಯಿ-ಮಗಳು ಮೃತಪಟ್ಟಿದ್ದಾರೆ.


ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ (Mahakumbh Mela Stampede) ಬೆಳಗಾವಿ ಮೂಲದ ತಾಯಿ-ಮಗಳು ಮೃತಪಟ್ಟಿದ್ದಾರೆ. ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ ಮೃತರು.
ಮೌನಿ ಅಮಾವಾಸ್ಯೆ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಕೋಟ್ಯಂತರ ಜನ ತೆರಳಿದ್ದಾರೆ. ಮುಂಜಾನೆ ನದಿಯಲ್ಲಿ ಸ್ನಾನ ಮಾಡುವಾಗ ಕಾಲ್ತುಳಿತ ಸಂಭವಿಸಿ ಹಲವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ತಾಯಿ-ಮಗಳು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಳಗಾವಿಯಿಂದ ಸುಮಾರ 60 ಜನ ಕುಂಭಮೇಳಕ್ಕೆ ತೆರಳಿದ್ದರು. ಸಾಯಿರಥ ಟ್ರಾವೆಲ್ಸ್ ಮೂಲಕ ಇವರೆಲ್ಲಾ 3 ದಿನದ ಹಿಂದೆ ಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ್ದರು. ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ ಅವರ ಜತೆ ಹಲವರು ಗಾಯಗೊಂಡಿದ್ದು, ಅವರಿಗೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಮಾಹಿತಿ ಸಂಗ್ರಹಿಸುತ್ತಿದೆ.
ಈ ಸುದ್ದಿಯನ್ನೂ ಓದಿ | Maha Kumbh 2025: ಮಹಾಕುಂಭ ಮೇಳದಲ್ಲಿ ಭಾರೀ ಕಾಲ್ತುಳಿತ; ಕನಿಷ್ಠ 15 ಮಂದಿ ಸಾವಿನ ಶಂಕೆ
ರಾಜ್ಯದ ಹಲವರಿಗೆ ಗಾಯ
ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಕರ್ನಾಟಕದ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರಲ್ಲಿ ಬೆಳಗಾವಿಯ ದಂಪತಿಯೂ ಇದ್ದಾರೆ. ಬೆಳಗಾವಿಯ ವಡಗಾವಿಯ ಶೆಟ್ಟಿ ಗಲ್ಲಿಯ ಅರ್ಚನಾ ಕೋರ್ಪಡೆ, ಕಾಂಚನಾ ಕೋರ್ಪಡೆ ದಂಪತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿಯಿಂದ ಒಟ್ಟು 30 ಜನರು ಕುಂಭಮೇಳಕ್ಕೆ ಹೋಗಿದ್ದರು. ಜ. 29ರಂದು ಮುಂಜಾನೆ 3 ಗಂಟೆಗೆ ಕಾಲ್ತುಳಿತ ಸಂಭವಿಸಿದೆ. ʼʼರಾಜ್ಯದಿಂದ ಎಷ್ಟು ಜನರು ಪ್ರಯಾಗ್‌ರಾಜ್‌ಗೆ ತೆರಳಿದ್ದಾರೆಂದು ತಿಳಿದು ಬಂದಿಲ್ಲ. ಅಲ್ಲಿರುವ ಕನ್ನಡಿಗರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಅವರಿಗೆ ಅಗತ್ಯವಾದ ಎಲ್ಲ ನೆರವು ಒದಗಿಸುತ್ತೇವೆʼʼ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಸಂಗಮ್ ಘಾಟ್ ಬಳಿ ಈ ದುರಂತ ಸಂಭವಿಸಿದೆ. ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಕೋಟ್ಯಂತರ ಭಕ್ತರು ಸೇರಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಜತೆಗೆ ಸ್ಥಳೀಯ ಅಧಿಕಾರಿಗಳು ಗಣ್ಯರತ್ತ ಮಾತ್ರ ಗಮನ ಹರಿಸಿದ್ದರಿಂದಲೂ ಕಾಲ್ತುಳಿತ ಸಂಭವಿಸಿದೆ ಎನ್ನುವ ಆರೋಪವೂ ಕೇಳಿ ಬಂದಿದೆ.
ಈ ಸುದ್ದಿಯನ್ನೂ ಓದಿ: Kumbhamela Stampede: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ-ಸಿಎಂ ಯೋಗಿ ಫಸ್ಟ್ ರಿಯಾಕ್ಷನ್
ʼʼಇದ್ದಕ್ಕಿಂತೆ ತಳ್ಳಾಟ ಕಂಡು ಬಂತು. ಬಳಿಕ ನಾವು ಜನರ ಗುಂಪಿನಲ್ಲಿ ಸಿಲುಕಿಕೊಂಡೆವುʼʼ ಎಂದು ಭಕ್ತರೊಬ್ಬರು ಮಾಹಿತಿ ನೀಡಿದ್ದಾರೆ. ಗಲಾಟೆಯಲ್ಲಿ ತಮ್ಮ ಮಗನಿಗೂ ಗಾಯಗಳಾಗಿದ್ದು, ಸದ್ಯ ಎಲ್ಲಿದ್ದಾನೆಂದು ತಿಳಿದು ಬಂದಿಲ್ಲ ಎಂದು ಮಹಿಳೆಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಗಾಯಗೊಂಡವರನ್ನು ವಿವಿದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.