ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mahesh Shetty Thimarodi: ಇಂದು ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ

Bail: ಬ್ರಹ್ಮಾವರ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿರಿಯಡ್ಕ ಸಬ್‌ ಜೈಲಿನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಇಂದು ನಡೆಯಲಿರುವ ಜಾಮೀನು ಅರ್ಜಿ ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ. ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ದೂರು ನೀಡಿದ್ದರು.

ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ (BL Santosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarodi) ಬಂಧಿಸಲಾಗಿತ್ತು. ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹಿರಿಯಡ್ಕ ಸಬ್ ಜೈಲಿನಲ್ಲಿರುವ ತಿಮರೋಡಿಯ ಜಾಮೀನು (bail) ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿರಿಯಡ್ಕ ಸಬ್‌ ಜೈಲಿನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಇಂದು ನಡೆಯಲಿರುವ ಜಾಮೀನು ಅರ್ಜಿ ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ. ಬ್ರಹ್ಮಾವರದಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ನ್ಯಾಯಾಧೀಶ ನಾಗೇಶ್ ಎನ್.ಎ. ಅವರು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದರು. ತಿಮರೋಡಿಯನ್ನು ಬಂಧಿಸಿದ ತಕ್ಷಣವೇ ಅವರ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಪ್ರಸ್ತುತ ಆರೋಪಗಳು ನಾನ್-ಬೇಲೇಬಲ್ ಸೆಕ್ಷನ್ ಒಳಗೊಂಡಿರುವುದರಿಂದ, ಕೋರ್ಟ್ ಜಾಮೀನನ್ನು ನೀಡಲು ನಿರಾಕರಿಸಿತ್ತು. ಹೀಗಾಗಿ ಆಗಸ್ಟ್ 23ರಂದು ಮತ್ತೆ ವಿಚಾರಣೆ ನಡೆಯಲಿದ್ದು, ಅಂದು ವಾದ ಪ್ರತಿವಾದಗಳ ಆಧಾರದ ಮೇಲೆ ಜಾಮೀನು ಭವಿಷ್ಯ ನಿರ್ಣಯವಾಗಲಿದೆ.

ಆಗಸ್ಟ್‌ 16ರಂದು ಫೇಸ್‌ಬುಕ್‌ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಈ ನಡುವೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mahesh Shetty Timarodi: ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಹರೀಶ್‌ ಕೇರ

View all posts by this author