Bidar News: ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು
Bidar News: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ನಂತರ, ಕಾಶಿ ದೇವಸ್ಥಾನಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ.
![ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು](https://cdn-vishwavani-prod.hindverse.com/media/original_images/Bidar_News_1.jpg)
![Profile](https://vishwavani.news/static/img/user.png)
ಬೀದರ್: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ಕಂಟೆಪ್ಪ ಜಿರ್ಗೆ (65) ಮೃತರು. ಇವರು ಸಂಬಂಧಿಕರೊಂದಿಗೆ ಭಾನುವಾರ ಕುಂಭಮೇಳಕ್ಕೆ ತೆರಳಿದ್ದರು. ಸೋಮವಾರ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ನಂತರ ಮರಳಿ ಉತ್ತರ ಪ್ರದೇಶದ ಕಾಶಿ ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಬುಧವಾರ ಬೆಳಗ್ಗೆ 11 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರ ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ಠಾಣಾಕುಶನೂರದಲ್ಲಿ ನಡೆಯಲಿದೆ.
ಈ ಸುದ್ದಿಯನ್ನೂ ಓದಿ | Bangalore News: ಮೊಬೈಲ್ ನೋಡಬೇಡ ಎಂದಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವಾಗ ಹೃದಯಾಘಾತವಾಗಿ ಶಿರಾ ಮೂಲದ ವ್ಯಕ್ತಿ ಸಾವು
ಶಿರಾ: ತಾಲೂಕಿನ ಭಕ್ತರೊಬ್ಬರು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಶಿರಾ ತಾಲೂಕಿನ ಬರಗೂರು ಗ್ರಾಮದ ನಾಗರಾಜು (57) ಮೃತರು ಎಂದು ತಿಳಿದು ಬಂದಿದೆ. ಪ್ರಯಾಗ್ ರಾಜ್‌ನಲ್ಲಿ ಪುಣ್ಯಸ್ನಾನ ಮಾಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತ ನಾಗರಾಜು ಬರಗೂರಿನ ಎಲ್‌ಎನ್‌ಪಿ ಬ್ರಿಕ್ಸ್‌ನ ಮಾಲೀಕರಾಗಿದ್ದಾರೆ. ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಎಲ್ಲಾ ರೀತಿಯ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಿಲ್ಲೆಯಿಂದ ಪ್ರಯಾಗ್ ರಾಜ್ ಕುಂಭ ಮೇಳಕ್ಕೆ ಸಹಸ್ರಾರು ಭಕ್ತರು ತೆರಳಿದ್ದಾರೆ. ಈ ರೀತಿ ಅವಘಡ ಸಂಭವಿಸಿರುವುದು ಇದೇ ಮೊದಲು.
ಇತ್ತೀಚೆಗೆ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ ದಲ್ಲಿ ಭಾಗವಹಿಸಿ ವಾಪಸ್ ಬರುವ ವೇಳೆ ರೈಲಿನಲ್ಲಿ ಹೃದಯಾಘಾತದಿಂದ ಬೆಳಗಾವಿಯ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿತ್ತು. ಅದೇ ರೀತಿ ಕಾಶಿಯಲ್ಲಿ ಸ್ನಾನ ಮಾಡುವ ವೇಳೆ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಇದಕ್ಕೂ ಮೊದಲು ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಬೆಳಗಾವಿ ಮೂಲದ ನಾಲ್ವರು ಮೃತಪಟ್ಟಿದ್ದರು. ಇದೀಗ ಶಿರಾ ಮೂಲದ ವ್ಯಕ್ಯಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೊಬೈಲ್ ನೋಡಬೇಡ ಎಂದಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
![Self Harm (6)](https://cdn-vishwavani-prod.hindverse.com/media/images/Self_Harm_6.width-800.jpg)
ಬೆಂಗಳೂರು: ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Bangalore News) ನಗರದ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಘಟನೆ ನಡೆದಿದ್ದು, ಅವಂತಿಕಾ ಚೌರಾಸಿಯಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ, ತಾಯಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹತ್ತಿರ ಬರುತ್ತಿದೆ. ಹೀಗಾಗಿ ಮೊಬೈಲ್ ಬಿಟ್ಟು ಪರೀಕ್ಷೆಗೆ ಓದು ಎಂದು ಬೈದಿದ್ದಾರೆ. ಇದರಿಂದ ದುಡುಕಿದ ಅವಂತಿಕಾ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಧ್ಯಪ್ರದೇಶ ಮೂಲದ ಲಕ್ಷ್ಮೀಕಾಂತ್ ಚೌರಾಸಿಯಾ ದಂಪತಿಯ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲಕ್ಷ್ಮೀಕಾಂತ್ ಚೌರಾಸಿಯಾ ದಂಪತಿ ಇಬ್ಬರು ಪುತ್ರಿಯರ ಜತೆ ಕನ್ನಮಂಗಲದ ಅಪಾರ್ಟ್‌ಮೆಂಟ್‌ನ 20ನೇ ಮಹಡಿಯ ಫ್ಲ್ಯಾಟ್‌ನಲ್ಲಿವಾಸಿಸುತ್ತಿದ್ದರು. ಲಕ್ಷ್ಮೀಕಾಂತ್ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರು. ಪತ್ನಿ ನಮ್ರತಾ ಗೃಹಿಣಿಯಾಗಿದ್ದರು.
ವೈಟ್‌ಫೀಲ್ಡ್‌ನ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಹಿರಿಯ ಪುತ್ರಿ ಅವಂತಿಕಾ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಮಾರ್ಚ್ 15 ರಂದು ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯಲಿದ್ದು, ಓದಿಕೊಳ್ಳಲು ಮಕ್ಕಳಿಗೆ ರಜೆ ನೀಡಲಾಗಿತ್ತು. ಬುಧವಾರ ಬೆಳಗ್ಗೆ 11.30ರ ಸುಮಾರಿಗೆ ತನ್ನ ಕೊಠಡಿಯಲ್ಲಿದ್ದ ಅವಂತಿಕಾ ಮೊಬೈಲ್ ನೋಡುತ್ತಿದ್ದಳು. ಇದನ್ನು ಗಮನಿಸಿದ ತಾಯಿ ನಮ್ರತಾ, 'ಪರೀಕ್ಷೆಗೆ ಮೂರೇ ದಿನ ಬಾಕಿ ಇದೆ. ಮೊಬೈಲ್ ಬಿಟ್ಟು ಓದು' ಎಂದು ಬುದ್ಧಿವಾದ ಹೇಳಿದ್ದಾರೆ. ತಾಯಿ ಮಾತಿಗೆ ಕೋಪಗೊಂಡ ಅವಂತಿಕಾ, ತನ್ನ ಕೊಠಡಿಯ ಕಿಟಕಿ ಸರಿಸಿ ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ.
ಈ ಸುದ್ದಿಯನ್ನೂ ಓದಿ | Microfinance ordinance: ಸಾಲಕ್ಕೆ ಭದ್ರತೆ ಕೇಳುವಂತಿಲ್ಲ, ನಿಯಮ ಮೀರಿದ್ರೆ 10 ವರ್ಷ ಜೈಲು ಶಿಕ್ಷೆ, 5 ಲಕ್ಷ ದಂಡ
ತಕ್ಷಣ ತಾಯಿ, ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲು ಮುಂದಾಗಿದ್ದಾರೆ. ಆದರೆ, ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಸ್ಥಳದಲ್ಲಿಯೇ ಅವಂತಿಕಾ ಮೃತಪಟ್ಟಿದ್ದಾಳೆ.