ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Self Harming: ಪ್ರೀತಿಸಿ ಸಿಐಎಸ್ಎಫ್ ಮಹಿಳಾ ಅಧಿಕಾರಿ ಮೋಸ; ಮಂಗಳೂರಿನ ಲಾಡ್ಜ್‌ನಲ್ಲಿ ಉತ್ತರ ಪ್ರದೇಶದ ವ್ಯಕ್ತಿ ಆತ್ಮಹತ್ಯೆ

Self Harming: ಮಂಗಳೂರಿನ ಲಾಡ್ಜ್‌ನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಮುನ್ನ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹರಿಬಿಟ್ಟಿರುವ ವ್ಯಕ್ತಿ, ಮಹಿಳಾ ಅಧಿಕಾರಿ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳೂರಿನ ಲಾಡ್ಜ್‌ನಲ್ಲಿ ಉತ್ತರ ಪ್ರದೇಶದ ವ್ಯಕ್ತಿ ಆತ್ಮಹತ್ಯೆ

Profile Prabhakara R Mar 3, 2025 5:18 PM

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿ ತನ್ನನ್ನು ಪ್ರೀತಿಸಿ, ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಉತ್ತರ ಪ್ರದೇಶದ ಗಾಜಿಪುರ ನಿವಾಸಿ, ಚೆನ್ನೈಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅಭಿಷೇಕ್ ಸಿಂಗ್ (40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನ ರಾವ್ ಅಂಡ್ ರಾವ್ ಸರ್ಕಲ್‌ನಲ್ಲಿರುವ ಲಾಡ್ಜ್‌ನಲ್ಲಿ ಎರಡು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೃತ್ಯಕ್ಕೂ ಮುನ್ನ ಸುದೀರ್ಘ 20 ನಿಮಿಷಗಳ ವಿಡಿಯೊ ಮಾಡಿದ್ದು, ತನ್ನ ಸಾವಿಗೆ ಮಹಿಳಾ ಅಧಿಕಾರಿಯೇ ಕಾರಣ ಎಂದು ಹೇಳಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್‌ಗೆ ಈಗಾಗಲೇ ಮರುವೆಯಅಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಜತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ. ಪ್ರೀತಿಯ ನೆಪದಲ್ಲಿ ತನಗೆ ಮೋಸ ಮಾಡಿದ್ದಾಳೆ. ತನ್ನಿಂದ ದೈಹಿಕ ಸುಖ, ಆರ್ಥಿಕ ಲಾಭ ಪಡೆದು ಮೋಸ ಮಾಡಿದ್ದಾಳೆ. ಹಾಗಯೇ ಹಲವರ ಜತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದುಬಂದಿದೆ. ಮೋನಿಕಾಗೆ
8 ಲಕ್ಷದಷ್ಟು ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ ಎಂದು ವಿಡಿಯೊದಲ್ಲಿ ಆರೋಪಿಸಿದ್ದಾನೆ. ಮೋನಿಕಾ ಸಿಂಗ್, ಗುಜರಾತಿನ ಅಹಮದಾಬಾದ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ಹೇಳಿದ್ದಾನೆ. ಘಟನೆ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Tumkur News: ಸಾಕುನಾಯಿಯನ್ನು ಸದ್ದಿಲ್ಲದಂತೆ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಪಿಎಸ್‌ಐ ಹುದ್ದೆ ಕೊಡಿಸುವುದಾಗಿ 45 ಲಕ್ಷ ವಂಚನೆ; ವೈದ್ಯ ಸೇರಿ ಇಬ್ಬರ ಬಂಧನ

ದಾಬಸ್ ಪೇಟೆ: ಸಬ್ ಇನ್ಸ್‌ಪೆಕ್ಟರ್ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ 45 ಲಕ್ಷ ಪಡೆದು ವಂಚನೆ (Fraud case) ಮಾಡಿರುವ ಆರೋಪದಡಿ ಆರೋಗ್ಯ ಭಾರತಿ ಆಸ್ಪತ್ರೆ ವೈದ್ಯ ಚಂದ್ರಶೇಖರ್ ಹಾಗೂ ಯೋಗೇಂದ್ರ ಎಂಬುವವರನ್ನು ದಾಬಸ್ ಪೇಟೆ ಪೋಲೀಸರು ಬಂಧಿಸಿದ್ದಾರೆ. ಬಿಲ್ಲನಕೋಟೆ ಗ್ರಾಮದ ಅನಿಲ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಕೋವಿಡ್ ಚಿಕಿತ್ಸೆಗೆ ಅನುಮತಿ ಇಲ್ಲದೆ ಚಿಕಿತ್ಸೆ ನೀಡಿ ಹಲವರ ಸಾವಿಗೆ ಕಾರಣವಾಗಿದ್ದ ವೈದ್ಯ ಚಂದ್ರಶೇಖರ್ ವಿರುದ್ಧ ಜಿಲ್ಲಾಧಿಕಾರಿ ಆಸ್ಪತ್ರೆ ಮುಚ್ಚುವಂತೆ ಆದೇಶಿಸಿದ್ದರು. ಈ ಮೂಲಕ ಸುದ್ದಿಯಾಗಿದ್ದ ವೈದ್ಯ ಇದೀಗ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.

ವೈದ್ಯ ಚಂದ್ರಶೇಖರ್ ಕಾಂಗ್ರೆಸ್, ಬಿಜೆಪಿ ಮುಖಂಡರೊಂದಿಗೆ ಫೋಟೊ ತೆಗೆಸಿಕೊಂಡು ನಾನು ರಾಜಕಾರಣಿ ಎಂದು ಪೋಸ್ ನೀಡುವುದನ್ನೇ ಬಂಡವಾಳ ಮಾಡಿಕೊಂಡು ಅಮಾಯಕರಿಂದ ವೈದ್ಯ ಹಣ ದೋಚಿದ್ದಾನೆ. ಇನ್ನು ಹಲವರಿಗೆ ವಂಚನೆ ಮಾಡುವುದನ್ನೇ ವೃತ್ತಿ ಮಾಡಿಕೊಂಡಿದ್ದ ಯೋಗೇಂದ್ರ ಒಂದೂವರೆ ವರ್ಷದಿಂದ ದುಬೈನಲ್ಲಿ ತಲೆ ಮರೆಸಿಕೊಂಡಿದ್ದ. ಇತ್ತೀಚೆಗೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೇಶಕ್ಕೆ ವಾಪಸ್ ಆದಾಗ ವಶಕ್ಕೆ ಪಡೆದಿದ್ದರು.

ಇನ್ನು ಮೋಸದ ಜಾಲ ಸೃಷ್ಟಿಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ಹಣ ದೋಚಿರುವ ಆರೋಪ ಇವರ ವಿರುದ್ಧ ಕೇಳಿಬಂದಿದೆ. ಆರೋಗ್ಯ ಭಾರತಿ ಆಸ್ಪತ್ರೆ ವೈದ್ಯ ಚಂದ್ರಶೇಖರ್‌, ದಾಬಸ್ ಪೇಟೆ ಸೇರಿ ಹಲವೆಡೆ ಕೋಟ್ಯಂತರ ಬೆಲೆ ಬಾಳುವ ಆಸ್ತಿ, ಬಂಗಲೆ ಹೊಂದಿದ್ದಾರೆ.

ದೂರುದಾರ ಅನಿಲ್ ಕುಮಾರ್ ಅವರ ಬಾಮೈದ ಪುರುಷೋತ್ತಮ್‌ ಡಿಗ್ರಿ ಮುಗಿಸಿ, ಪಿಎಸ್‌ಐ ಪರೀಕ್ಷೆ ಬರೆದಿದ್ದರು. ಅನಿಲ್ ಕುಮಾರ್ ಆಗಾಗ ಆರೋಗ್ಯ ಭಾರತಿ ಆಸ್ಪತ್ರೆಗೆ ಹೋಗುತ್ತಿದ್ದರಿಂದ ವೈದ್ಯ ಚಂದ್ರಶೇಖರ್ ಪರಿಚಯವಾಗಿತ್ತು. ಹೀಗಾಗಿ ಯಾರಿಗಾದರೂ ಸರ್ಕಾರಿ ಕೆಲಸ ಬೇಕಿದ್ದರೆ ಹೇಳಿ, ಮಾಡಿಸಿಕೊಡುತ್ತೇವೆ ಎಂದು ಹೇಳಿದ್ದರು. ಅವರ ಮಾತನ್ನು ನಂಬಿ ಅನಿಲ್ ಕುಮಾರ್, ಬ್ಯಾಂಕ್‌ ಖಾತೆಗೆ ಹಂತ ಹಂತವಾಗಿ 45 ಲಕ್ಷ ವರ್ಗಾವಣೆ ಮಾಡಿದ್ದರು.

ಈ ಸುದ್ದಿಯನ್ನೂ ಓದಿ | Kodi Mutt Swamiji: ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸುವುದು ಅಷ್ಟು ಸುಲಭವಲ್ಲ: ಕೋಡಿಮಠ ಶ್ರೀ ಭವಿಷ್ಯ

ಕೆಲಸವೂ ಇಲ್ಲದೆ ಹಣವೂ ನೀಡದೆ ವಂಚನೆ ಬಗ್ಗೆ ಕೇಳಲು ಹೋದರೆ ಬೆದರಿಕೆ ಹಾಗೂ ಜಾತಿ ನಿಂದನೆ ಕೇಸ್ ಹಾಕುವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ಅರೆಸ್ಟ್ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.