Murder Case: ಶೀಲ ಶಂಕಿಸಿ 8 ತಿಂಗಳ ಗರ್ಭಿಣಿಯನ್ನು ಕೊಲೆಗೈದ ಪಾಪಿ ಪತಿ!
Murder Case: 8 ವರ್ಷದ ಮಗನ ಕಣ್ಣೆದುರೇ ಗರ್ಭಿಣಿಯಾದ ಪತ್ನಿ ಬಾಯಿಗೆ ಬಟ್ಟೆ ತುರುಕಿ ನೇಣು ಬಿಗಿದು ಕೊಲೆ ಮಾಡಿದ ಗಂಡ, ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ತುಮಕೂರು ನಗರದ ತಿಲಕ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ತುಮಕೂರು: ಶೀಲಶಂಕಿಸಿ 8 ತಿಂಗಳ ಗರ್ಭಿಣಿಯನ್ನು 8 ವರ್ಷದ ಮಗನ ಕಣ್ಣೆದುರೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ (Murder Case) ನಗರದ ತಿಲಕ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗ್ಮಾ ಕೊಲೆಯಾದ ಗರ್ಭಿಣಿ. ಪತಿ ಸೈಯದ್ ಆರೋಪಿ ಎಂದು ತಿಳಿದುಬಂದಿದೆ. ಹೌಸಿಂಗ್ ಬೋರ್ಡ್ ನಿವಾಸಿಯಾದ ನಗ್ಮಾಗೆ 8 ವರ್ಷದ ಮಗನಿದ್ದಾನೆ. ಒಂದು ವರ್ಷದ ಹಿಂದೆ ನಗ್ಮಾ ಮೊದಲ ಗಂಡನನ್ನು ಬಿಟ್ಟಿದ್ದಳು. ಬಳಿಕ ಸೈಯದ್‌ನನ್ನು ಪ್ರೀತಿಸಿ ಎರಡನೇ ಮದುವೆಯಾಗಿದ್ದಳು. ಆದರೆ, ಶೀಲಶಂಕಿಸಿ ಎಂಟು ತಿಂಗಳ ಗರ್ಭಿಣಿ ನಗ್ಮಾಳನ್ನು ನೇಣು ಬಿಗಿದು ಗಂಡ ಹತ್ಯೆ ಮಾಡಿದ್ದಾನೆ.
ಆರೋಪಿ ನಶೆಮುಕ್ತ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಹಣ ತೆಗೆದುಕೊಂಡು ಬಾ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಗಲಾಟೆ ನಡೆದು 8 ವರ್ಷದ ಮಗನ ಕಣ್ಣೆದುರೇ ನಗ್ಮಾ ಬಾಯಿಗೆ ಬಟ್ಟೆ ತುರುಕಿ ನೇಣು ಬಿಗಿದು ಕೊಲೆ ಮಾಡಿದ ಗಂಡ, ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಕಲ್ಲಂಗಡಿಯಲ್ಲಿ ಕೃತಕ ಬಣ್ಣ: ಅಂಗಡಿ ಬಂದ್
ಕುಣಿಗಲ್: ಪಟ್ಟಣದಲ್ಲಿ ಮಾರಾಟವಾಗಿರುವ ಕಲ್ಲಂಗಡಿ ಹಣ್ಣಿನಲ್ಲಿ ಅಧಿಕ ಪ್ರಮಾಣದ ಕೆಂಪು ಬಣ್ಣ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿ ಶಿವರಾಮ್ ಎಂಬುವರು ನೀಡಿದ ದೂರಿನ ಮೇಲೆ ಸ್ಥಳಕ್ಕೆ ಪುರಸಭಾ ಅಧಿಕಾರಿ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಅಂಗಡಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ್ದಾರೆ.
ಗ್ರಾಹಕ ಶಿವರಾಮ್ ಪಟ್ಟಣದ ಮಹಾತ್ಮ ಗಾಂಧಿ ಕಾಲೇಜು ಬಳಿ ತಮಿಳುನಾಡು ಮೂಲದ ವ್ಯಕ್ತಿ ಮಾರುತ್ತಿದ್ದ ಕಲ್ಲಂಗಡಿ ಹಣ್ಣನ್ನು ಖರೀದಿ ಮಾಡಿದ್ದರು. ಮನೆಯಲ್ಲಿ ಹಣ್ಣನ್ನು ಕತ್ತರಿಸುವ ಸಂದರ್ಭದಲ್ಲಿ ತಮ್ಮಲ್ಲಿದ್ದ ಬಿಳಿಯ ಟಿಶ್ಯೂ ಪೇಪರನ್ನು ಹಣ್ಣಿನ ಮೇಲೆ ಇರಿಸಲಾಗಿದೆ. ಬಿಳಿಯ ಟಿಶ್ಯೂ ಪೇಪರ್ ಕೆಂಪು ಬಣ್ಣಕ್ಕೆ ತಿರುಗಿದೆ.
ಇದರಿಂದ ಅನುಮಾನಗೊಂಡು ಪುರಸಭಾ ಅಧಿಕಾರಿಗಳಿಗೆ ದೂರು ನೀಡಿದ್ದರು. ಪುರಸಭೆ ಆರೋಗ್ಯ ವಿಭಾಗದ ಅಧಿಕಾರಿಗಳಾದ ಶ್ರೀಕಾಂತ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿ ಕಲ್ಲಂಗಡಿ ಹಣ್ಣಿನಲ್ಲಿ ಕೆಂಪು ಬಣ್ಣ ಅತಿ ಹೆಚ್ಚಾಗಿ ಕಾಣುವುದರ ಜತೆಗೆ ಟಿಶ್ಯೂ ಪೇಪರ್ ಗೆ ಅಂಟಿದೆ. ಇದರಿಂದ ಕೂಡಲೇ ಅಂಗಡಿಯಲ್ಲಿರುವ ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿ ಮೇಲಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದು ಹೆಚ್ಚಿನ ತನಿಖೆಗೆ ತುಮಕೂರು ಆಹಾರ ಸುರಕ್ಷತಾ ಅಧಿಕಾರಿಗಳನ್ನು ಕರೆಯಿಸಿ ಮುಂದಿನ ಕ್ರಮ ಜರುಗಿಸುವುದಾಗಿ ತಿಳಿಸಿದರು.
ಈ ಸುದ್ದಿಯನ್ನೂ ಓದಿ | Murder Case: ಬೆಂಗಳೂರಲ್ಲಿ ಮತ್ತೊಂದು ಬರ್ಬರ ಹತ್ಯೆ, ಸೆಕ್ಯೂರಿಟಿ ಗಾರ್ಡ್ ಕೊಲೆ
ಸುದ್ದಿ ತಿಳಿದು ಸ್ಥಳಕ್ಕೆ ಟಿಎಚ್‌ಒ ಮರಿಯಪ್ಪ ಸಹ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳ ಮೇಲೆ ಆಹಾರ ಸುರಕ್ಷಿತ ಇಲಾಖೆ ನಿಗಾವಹಿಸಬೇಕಾಗಿದೆ.