ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kalaburagi News: ಸಿಬ್ಬಂದಿಯಿಂದ ಶಾಲೆಯಲ್ಲೇ ಮಸಾಜ್‌ ಮಾಡಿಸಿಕೊಂಡ ಮುಖ್ಯ ಶಿಕ್ಷಕಿ; ಅಮಾನತಿಗೆ ಆಗ್ರಹ

Kalaburagi News: ಕಲಬುರಗಿಯ ಯಡ್ರಾಮಿ ಪಟ್ಟಣದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಲ್ಲಿ ಸ್ವೀಪರ್ ಆಗಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಯ ಕೈಯಲ್ಲಿ ಪ್ರತಿನಿತ್ಯ ಮಸಾಜ್ ಮಾಡಿಸಿಕೊಂಡು ಕಾಲಹರಣ ಮಾಡುತ್ತಿರುವ ಮುಖ್ಯ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ.

ಕಲಬುರಗಿ: ವಸತಿ ಶಾಲೆಯಲ್ಲಿ ಸಿಬ್ಬಂದಿಯಿಂದ ಮಸಾಜ್‌ ಮಾಡಿಸಿಕೊಂಡು ಮುಖ್ಯ ಶಿಕ್ಷಕಿಯೊಬ್ಬರು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿರುವ ಘಟನೆ (Kalaburagi News) ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿಯ ಯಡ್ರಾಮಿ ಪಟ್ಟಣದ ಕಸ್ತೂರ ಬಾ ವಸತಿ ಶಾಲೆಯ ಮುಖ್ಯ ಶಿಕ್ಷಕಿ ವಿಜಯಶ್ರೀ ಪಾಟೀಲ್‌ ಅವರು, ಶಾಲೆಯಲ್ಲಿನ ಮಹಿಳಾ ಸಿಬ್ಬಂದಿಯಿಂದ ಮಸಾಜ್‌ ಮಾಡಿಸಿಕೊಂಡಿದ್ದು, ಇವರನ್ನು ಅಮಾನತು ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ.

ಶಾಲೆಯಲ್ಲಿ ಸ್ವೀಪರ್ ಆಗಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಯ ಕೈಯಲ್ಲಿ ಪ್ರತಿನಿತ್ಯ ಮಸಾಜ್ ಮಾಡಿಸಿಕೊಂಡು ಕಾಲಹರಣ ಮಾಡುತ್ತಿರುವ ಮುಖ್ಯ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಿ, ಇದರ ಬಗ್ಗೆ ಸೂಕ್ತ ತನಿಖೆ ಮಾಡಬೇಕು. ಇಲ್ಲವಾದರೆ ಉಗ್ರವಾದ ಹೋರಾಟ ಮಾಡ ಬೇಕಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಶ್ರವಣಕುಮಾರ ಡಿ. ನಾಯಕ ಆಗ್ರಹಿಸಿದ್ದಾರೆ.

ಪತಿಯನ್ನು ನದಿಗೆ ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್; ಬಾಲ್ಯ ವಿವಾಹ ಆರೋಪ, ತಾತಪ್ಪಗೆ ಸಂಕಷ್ಟ!

Raichur News  (1)

ರಾಯಚೂರು: ರಾಯಚೂರಿನ ಗುರ್ಜಾಪುರ ಬ್ಯಾರೇಜ್ ಬಳಿ ಫೋಟೊ ತೆಗೆಯುವ ನೆಪದಲ್ಲಿ ಪತಿಯನ್ನು ಪತ್ನಿ ನದಿಗೆ ತಳ್ಳಿದ ಪ್ರಕರಣಕ್ಕೆ (Raichur News) ಟ್ವಿಸ್ಟ್‌ ಸಿಕ್ಕಿದೆ. ಪ್ರಕರಣ ಬೆನ್ನಲ್ಲೇ ತಾತಪ್ಪ, ಪತ್ನಿ ಗದ್ದೆಮ್ಮಳಿಗೆ ವಿಚ್ಛೇದನ ನೀಡಲು ಮುಂದಾಗಿದ್ದ. ಆದರೆ, 16 ವರ್ಷದ ಅಪ್ರಾಪ್ತ ಬಾಲಕಿಯನ್ನು ತಾತಪ್ಪ ಮದುವೆಯಾಗಿದ್ದ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಇದರಿಂದ ತಾತಪ್ಪನಿಗೆ ಸಂಕಷ್ಟ ಎದುರಾಗಿದೆ.

ತಾತಪ್ಪ ವಿರುದ್ಧ ಬಾಲ್ಯವಿವಾಹ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪತ್ನಿ ಗದ್ದೆಮ್ಮಳ ವಯಸ್ಸಿನ ದಾಖಲಾತಿ ನೀಡುವಂತೆ ಪತಿ ತಾತಪ್ಪನಿಗೆ ಗಡುವು ನೀಡಲಾಗಿದೆ. 15 ವರ್ಷ 8 ತಿಂಗಳ ವಯಸ್ಸಿನ ಅಪ್ರಾಪ್ತ ವಯಸ್ಸಿನ ಬಾಲಕಿ ಗದ್ದೆಮ್ಮಳನನ್ನು ತಾತಪ್ಪ ಮದುವೆ ಮಾಡಿಕೊಂಡಿರುವ ಬಗ್ಗೆ ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ತಂಡ ಪತ್ತೆ ಮಾಡಿದ್ದು, ಶಾಲಾ ದಾಖಲಾತಿ ಪ್ರಕಾರ ತಾತಪ್ಪನ ಪತ್ನಿ ಗದ್ದೆಮ್ಮ ಅಪ್ರಾಪ್ತೆ ಎನ್ನುವುದು ದೃಢವಾಗಿದೆ. ಈ ಸಂಬಂಧ ರಾಯಚೂರು ತಾಲೂಕಿನ ದೇವಸುಗೂರು ನಿವಾಸಿಯಾಗಿರುವ ಪತಿ ತಾತಪ್ಪನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಪತ್ರ ಬರೆದಿದೆ.

ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಪತ್ರ ತಲುಪುತ್ತಿದ್ದಂತೆಯೇ ಎಚ್ಚೆತ್ತ ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ತಾತಪ್ಪನ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಸಿಡಿಪಿಒ ಮತ್ತು ಗ್ರಾಮ ಪಂಚಾಯಿ್ತಿ ಸಿಬ್ಬಂದಿ ಭೇಟಿ ನೀಡಿ ವಿವಾಹದ ಕುರಿತು ತಾತಪ್ಪನ ಕುಟುಂಬದ ಪ್ರಮುಖರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ, ತಾತಪ್ಪ, ಪತ್ನಿ ಗದ್ದೆಮ್ಮಗಳ ಬಗ್ಗೆ ಯಾವುದೇ ದಾಖಲೆಗಳನ್ನು ನೀಡದೇ ಕೇವಲ ಮೌಖಿಕವಾಗಿ ಮಾಹಿತಿ ನೀಡಿದ್ದಾನೆ.

ಇನ್ನು ಪತ್ನಿ ಗದ್ದೆಮ್ಮಗಳ ಅಧಿಕೃತ ದಾಖಲಾತಿಗಳನ್ನು ನೀಡುವಂತೆ ತಾತಪ್ಪನಿಗೆ ಕೇಳಿದ್ದಾರೆ. ಇದಕ್ಕೆ ತಾತಪ್ಪ ಕುಟುಂಬಸ್ಥರು, ದಾಖಲೆ ನೀಡಲು 2 ದಿನ ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ಜುಲೈ 21ರಂದು ದಾಖಲಾತಿಗಳನ್ನು ಒದಗಿಸಬೇಕಿದೆ. ಒಂದು ವೇಳೆ ದಾಖಲೆಗಳನ್ನು ನೀಡದಿದ್ದರೆ ಪತಿ ತಾತಪ್ಪ ಹಾಗೂ ಕುಟುಂಬಸ್ಥರ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಅಡಿಯಲ್ಲಿ ಎಫ್​ಐಆರ್ ದಾಖಲು ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Mysuru News: ಕೆಆರ್‌ಎಸ್‌ ಹಿನ್ನೀರಿನಲ್ಲಿ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು ನೀರುಪಾಲು