#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Massive Explosion: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ; ಐವರ ದುರ್ಮರಣ!

ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಶಸ್ತ್ರಾಸ್ತ್ರ ತಯಾರಿಕಾ ಘಟಕ ಕಾರ್ಖಾನೆಯಲ್ಲಿ ಶುಕ್ರವಾರ(ಜ.24) ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಪೋಟದ ನಂತರ ಸ್ಥಳಕ್ಕಾಗಮಿಸಿದ ತಂಡಗಳಿಂದ ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾವಿನ ಸಂಖ್ಯೆಯ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಇನ್ನು ಕೆಲವು ಕಾರ್ಮಿಕರು ಮೃತಪಟ್ಟಿರುವ ಸಾಧ್ಯತೆಯಿದೆ.

ಶಸ್ತಾಸ್ತ್ರ ತಯಾರಿಕ ಘಟಕದಲ್ಲಿ ಸ್ಫೋಟ; ಐವರು ಕಾರ್ಮಿಕರು ಬಲಿ

Massive Explosion

Profile Deekshith Nair Jan 24, 2025 1:56 PM

ಮುಂಬೈ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ(Ordnance Factory) ಶುಕ್ರವಾರ (ಜ.24) ಬೆಳಗ್ಗೆ ಭಾರೀ ಸ್ಫೋಟ (Massive Explosion) ಸಂಭವಿಸಿದೆ. ಘಟನೆಯಲ್ಲಿ 5ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸ್ಪೋಟದ ನಂತರ ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದ ನಾಗ್ಬುರ ಬಳಿಯಿರುವ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ 10:30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಐವರು ಮೃತಪಟ್ಟಿರುವ ಶಂಕೆಯಿದೆ. ಸದ್ಯ ರಕ್ಷಣಾ ತಂಡಗಳು ಅವಶೇಷದಡಿಯಲ್ಲಿ ಸಿಲುಕಿರುವವರಿಗಾಗಿ ಶೋಧ ನಡೆಸುತ್ತಿವೆ. ಅಗ್ನಿಶಾಮ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ವೈದ್ಯರ ತಂಡ ಸೂಕ್ತ ಚಿಕಿತ್ಸೆ ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಸಂಜಯ್‌ ಕೋಲ್ಟೆ ತಿಳಿಸಿದ್ದಾರೆ.



ಸ್ಫೋಟದ ಸಮಯದಲ್ಲಿ ಛಾವಣಿ ಕುಸಿದು ಬಿದ್ದಿದೆ. ಅದರ ಅವಶೇಷದಡಿಯಲ್ಲಿ 12 ಮಂದಿ ಕಾರ್ಮಿಕರು ಸಿಲುಕಿದ್ದು, ಅವರಲ್ಲಿ ಇಬ್ಬರನ್ನು ಮಾತ್ರ ರಕ್ಷಿಸಲಾಗಿದೆ. ಉಳಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಯಾಗಿದೆ. ಸ್ಫೋಟದ ಶಬ್ಧ 5 ಕಿಮೀವರೆಗೆ ಕೇಳಿಸಿದೆ. ಸ್ಥಳದಲ್ಲಿ ದಟ್ಟ ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಸುದ್ದಿಯನ್ನೂಓದಿ:Nigeria Horror: ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆ ಸಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಗಳು ತಿಳಿಸಿದ್ದು, ಸ್ಫೋಟದ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಜವಾಹರನಗರದಲ್ಲಿರುವ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯ 23 ರ ಕಟ್ಟಡದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸುವ ವೇಳೆ ಸ್ಥಳದಲ್ಲಿ ಹತ್ತಾರು ಕಾರ್ಮಿಕರು ಇದ್ದರು ಎಂದು ತಿಳಿದು ಬಂದಿದೆ.