ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ganesha chaturthi: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಬೆಂಗಳೂರು: ನಾಳೆ (ಆಗಸ್ಟ್ 27) ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ. ದಿನಾಂಕ 27-08-2025 ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಬಿಜಿಎಸ್ ಶಾಲೆಯಲ್ಲಿ ಬೀಜದುಂಡೆ ಗಣಪನ ತಯಾರಿ ಮೂಲಕ ಪರಿಸರ ಜಾಗೃತಿ

ಚಿಕ್ಕಬಳ್ಳಾಪುರ : ವಿದ್ಯಾರ್ಥಿಗಳ ಕೈಯಲ್ಲಿ ಮಣ್ಣಿನ ಗಣಪನನ್ನು ಮಾಡಿಸಿ ತಲೆ ಮತ್ತು ಹೊಟ್ಟೆಯ ಭಾಗದಲ್ಲಿ ಅರಣ್ಯ ಸಂವರ್ಧನೆಯ ಬೀಜಗಳನ್ನಿಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಕೆಲಸವನ್ನು ಬಿಜಿಎಸ್ ಶಾಲೆಯು ಸದ್ದಿಲ್ಲದಂತೆ ಕಳೆದ ೬ ವರ್ಷಗಳಿಂದ ಮಾಡಿಕೊಂಡು ಬರುತ್ತಿದೆ.

ನಗರ ಹೊರವಲಯ ಬಿಜಿಎಸ್ ಇಂಗ್ಲೀಷ್ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೂ ಪೂರ್ವದಲ್ಲಿ ವಿದ್ಯಾರ್ಥಿಗಳ ಕೈಯಲ್ಲಿ ಸೀಡ್‌ಬಾಲ್ ಗಣಪನನ್ನು ಮಾಡಿಸಿ ಪರಿಸರ ಜಾಗೃತಿ ಮೂಡಿಸಲಾಯಿತು.

ಸದಾಕಾಲ ಪಾಠಪ್ರವಚನ ಇತ್ಯಾದಿ ಶೈಕ್ಷಣಿಕ ಚಟವಟಿಕೆಗಳಲ್ಲಿ ತೊಡಗಿರುವ ಮಕ್ಕಳ ಕೈಗೆ ಮಣ್ಣನ್ನು ನೀಡಿ ಅವರ ಮನೋಭಿತ್ತಿಯಲ್ಲಿರುವ ಗಣಪನ ಸೃಷ್ಟಿಗೆ ಅವಕಾಶ ಮಾಡಿಕೊಡುವ ಮೂಲಕ ಪರಿಸರ ಕಾಪಾಡುವ ಹೊಣೆಗಾರಿಕೆಯನ್ನು ಮಕ್ಕಳ ಮನಸ್ಸಲ್ಲಿ ತುಂಬುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾದರು.

ಬಣ್ಣಗಳ ಗೊಡವೆಯಿಲ್ಲದೆ, ಅಲಂಕಾರದ ಸೋಂಕಿಲ್ಲದೆ ಮಕ್ಕಳು ತಮ್ಮ ಮನಸ್ಸಿಗೆ ತೋಚಿದಂತೆ ಗಣಪನನ್ನು ಸೃಷ್ಟಿಸಿ ಸಂತೋಷ ಪಟ್ಟರು.೫೦ಕ್ಕೂ ಹೆಚ್ಚು ಮಕ್ಕಳು ಗಣಪನನ್ನು ಮಾಡಿ ಗುರು ಗಳಿಗೆ ತೋರಿಸಿ ಆನಂದಪಡುತ್ತಿರುವ ದೃಶ್ಯವು ನೋಡಲು ಸುಂದರವಾಗಿತ್ತು.

ಇದನ್ನೂ ಓದಿ: DJ ban: ರಾಜ್ಯಾದ್ಯಂತ ಚೌತಿ, ಈದ್ ಹಬ್ಬಕ್ಕೆ ಡಿಜೆ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಹರೀಶ್‌ ಕೇರ

View all posts by this author