Karnataka budget 2025: ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ; 5 ಲಕ್ಷವರೆಗೆ ನಗದು ರಹಿತ ಚಿಕಿತ್ಸೆ
Karnataka budget 2025: ಪತ್ರಕರ್ತರ ಅಭ್ಯುದಯಕ್ಕಾಗಿ ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದಿಷ್ಟು ಯೋಜನೆಗಳನ್ನು ಘೋಷಿಸಿದ್ದಾರೆ. ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ 'ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ' ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.


ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಅಕಾಡೆಮಿಗೆ 2.16 ಕೋಟಿ ರೂ.ಗಳ ಅನುದಾನ ನೀಡಲಾಗಿದೆ. 16ನೇ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕೊಡುಗೆ ನೀಡಿದ್ದಾರೆ. ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಐದು ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ನೀಡುವ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಸಿಎಂ ಘೋಷಣೆ ಮಾಡಿದ್ದು, ನಿವೃತ್ತ ಪತ್ರಕರ್ತರ ಮಾಸಾಶನ 12ರಿಂದ 15 ಸಾವಿರ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಅದೇ ರೀತಿ ಮೃತ ಪತ್ರಕರ್ತರ ಕುಟುಂಬದವರಿಗೆ ನೀಡುವ ಮಾಸಾಶನ 6ರಿಂದ 7.500 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.
ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ 'ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ' ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಉದ್ಯೋಗಾಕಾಂಕ್ಷಿಗಳಿಗೆ ಸಿದ್ದರಾಮಯ್ಯ ಬಜೆಟ್‌ನಲ್ಲಿ ಸಿಕ್ಕಿದ್ದೇನು?
ಬೆಂಗಳೂರು: ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ (CM Siddaramaiah) 2025-26ನೇ ಸಾಲಿನ ಬಜೆಟ್ (Karnataka Budget 2025) ಅನ್ನು ಶುಕ್ರವಾರ ಸದನದಲ್ಲಿ ಮಂಡಿಸಿದ್ದು, 4,09,549 ಲಕ್ಷ ಕೋಟಿ ರೂ. ಗಾತ್ರದ ಈ ಆಯವ್ಯಯದಲ್ಲಿ ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ ಉದ್ಯೋಗಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಹಲವು ವಲಯಗಳಲ್ಲಿ ನೀಡಲಾಗಿರುವ ಈ ಯೋಜನೆಗಳಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಒದಗಿಸಿದ್ದಾರೆ.
ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮಾ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ಸರ್ಕಾರವು 'ಯುವನಿಧಿ' ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ Industry Linkage Cell ಅಡಿ ಭವಿಷ್ಯ ಕೌಶಲ್ಯ ತರಬೇತಿ ನೀಡಲಾಗುವುದು. ನಮ್ಮ ಸರ್ಕಾರದ ಹಿಂದಿನ ಆಡಳಿತಾವಧಿಯಲ್ಲಿ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಪ್ರಸ್ತುತ, ರಾಜ್ಯದ ಯುವಕರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು ಯೋಜನೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸಿ CMKKY 2.0 ಅನ್ನು ಜಾರಿಗೊಳಿಸಲಾಗುವುದು ಎಂದಿದ್ದಾರೆ.
ಮಾರ್ಚ್ 15ರಂದು ದಾವಣಗೆರೆಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಸಾಂಪ್ರದಾಯಿಕ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಉಪಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜರ್ಮನ್, ಇಟಾಲಿಯನ್, ಸ್ಪ್ಯಾನಿಷ್ ಮತ್ತು ಇತರೆ ವಿದೇಶೀ ಭಾಷಾ ಕೌಶಲ್ಯ ತರಬೇತಿ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮೂಲಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು.
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನವನ್ನು ಒದಗಿಸಲು ನನ್ನ ವೃತ್ತಿ, ನನ್ನ ಆಯ್ಕೆ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಲಾಗುವುದು. ವಿಶ್ವ ಕೌಶಲ್ಯ, ಸ್ಪರ್ಧೆಯ ಪೂರ್ವಸಿದ್ಧತೆಗಾಗಿ ಅಯೋಜಿಸಲಾಗುವ ರಾಷ್ಟ್ರೀಯ ಮಟ್ಟದ India Skills-2026 ಸ್ಪರ್ಧೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುತ್ತದೆ. ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು 2,000 ಅಭ್ಯರ್ಥಿಗಳಿಗೆ ಅಗತ್ಯವಿರುವ ಟೂಲ್‌ಕಿಟ್‌ಗಳೊಂದಿಗೆ ಅಲ್ಪಾವಧಿ ತರಬೇತಿಯನ್ನು ನೀಡಲಾಗುವುದು. ಲಂಬಾಣಿ ಜನಾಂಗದ ಕಸೂತಿ ಕಲೆಯ ಬಗ್ಗೆ ತರಬೇತಿಯನ್ನು 1,000 ಅಭ್ಯರ್ಥಿಗಳಿಗೆ ದಾವಣಗೆರೆ ಮತ್ತು ಬೀದರ್ ಜಿಲ್ಲೆಗಳಲ್ಲಿನ ಕೌಶಲ್ಯ ತರಬೇತಿ ಕೇಂದ್ರಗಳಲ್ಲಿ ನೀಡಲಾಗುವುದು.
ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಜೀವನೋಪಾಯ ಚಟುವಟಿಕೆ ಕೈಗೊಳ್ಳಲು ತ್ವರಿತ ಸಾಲ ಸೌಲಭ್ಯ ಒದಗಿಸಿ, ಆರ್ಥಿಕ ಅಗತ್ಯತೆಗಳ ಪೂರೈಕೆ ಮತ್ತು ಭದ್ರತೆ ಒದಗಿಸಿ, ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ 'ಅಕ್ಕ ಕೋ-ಆಪರೇಟಿವ್ ಸೊಸೈಟಿ' ಸ್ಥಾಪಿಸಲಾಗುವುದು. 'ಗೃಹಲಕ್ಷ್ಮಿ' ಯೋಜನೆಯ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರಾಗಿ ಮಾಡಿ ರಾಜ್ಯಮಟ್ಟದ 'ಅಕ್ಕ ಕೋ-ಆಪರೇಟಿವ್ ಸೊಸೈಟಿ' ವ್ಯಾಪ್ತಿಗೆ ತರಲಾಗುವುದು.
ಇದನ್ನೂ ಓದಿ: Karnataka Budget 2025: ಕಟ್ಟಡ ಕಾರ್ಮಿಕರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?
ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶು ಪಾಲನೆಗಾಗಿ 'ವಾತ್ಸಲ್ಯ ಕೇಂದ್ರ'ಗಳನ್ನು ಸ್ಥಾಪಿಸಲಾಗುವುದು. ತಜ್ಞ ಚಿಕಿತ್ಸೆ ಪಡೆಯಲು ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸುತ್ತಿರುವ ಬಡ ರೋಗಿಗಳು ಹಾಗೂ ಅವರ ಆರೈಕದಾರರಿಗಾಗಿ ವಿಶ್ರಾಂತಿ ಗೃಹಗಳನ್ನು ಸ್ಥಾಪಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಯನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವ-ಸಹಾಯ ಸಂಘಗಳ ಮಹಿಳೆಯರ ಮೂಲಕ ನಿರ್ವಹಿಸುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ 10 ನಗರ ಪ್ರದೇಶಗಳಲ್ಲಿ ಪ್ರಾರಂಭಿಸಲಾಗುವುದು. ಪಿ.ಎಮ್. ಸ್ವನಿಧಿ ಯೋಜನೆಯಡಿ ಸಾಲದ ಗರಿಷ್ಠ ಮಿತಿಯನ್ನು ತಲುಪಿರುವ ಬೀದಿಬದಿ ವ್ಯಾಪಾರಿಗಳು, ತಮ್ಮ ವ್ಯಾಪಾರ ವಹಿವಾಟನ್ನು ವಿಸ್ತರಿಸಲು ಒಂದು ಲಕ್ಷದವರೆಗಿನ ಸಾಲ ಪಡೆದಲ್ಲಿ ಶೇ.8ರಷ್ಟು ಬಡ್ಡಿ ಸಹಾಯಧನವನ್ನು ಸರ್ಕಾರದಿಂದ ನೀಡಲಾಗುವುದು ಎಂದರು.