ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Meg Lanning: ಎಲ್ಲಿಸ್‌ ಪೆರ್ರಿ ದಾಖಲೆ ಹಿಂದಿಕ್ಕಿದ ಮೆಗ್‌ ಲ್ಯಾನಿಂಗ್‌

Meg Lanning WPL record: ಶುಕ್ರವಾರ ನಡೆದಿದ್ದ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ ಆರ್‌ಸಿಬಿ ಆಟಗಾರ್ತಿ ಎಲ್ಲಿಸ್‌ ಪೆರ್ರಿ(835) ಅವರನ್ನು ಹಿಂದಿಕ್ಕಿ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು.

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ ಅವರು ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಶುಕ್ರವಾರ ನಡೆದಿದ್ದ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಈ ಸಾಧನೆಗೈದರು. ಈ ಸಾಧನೆಯ ಹಾದಿಯಲ್ಲಿ ಲ್ಯಾನಿಂಗ್‌(845) ತನ್ನದೇ ದೇಶದ, ಆರ್‌ಸಿಬಿ ಆಟಗಾರ್ತಿ ಎಲ್ಲಿಸ್‌ ಪೆರ್ರಿ(835) ಅವರನ್ನು ಹಿಂದಿಕ್ಕಿದರು. ಇದು ಮಾತ್ರವಲ್ಲದೆ ಡಬ್ಲ್ಯುಪಿಎಲ್‌ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಆಟಗಾರ್ತಿ ಎಂಬ ಹಿರಿಮೆಗೂ ಲ್ಯಾನಿಂಗ್‌ ಪಾತ್ರರಾದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಮುಂಬೈ ತಂಡ 9 ವಿಕೆಟ್‌ಗೆ 123 ರನ್‌ ಗಳಿಸಲಷ್ಟೇ ಶಕ್ತವಾಯಿತು. ಜವಾಬಿತ್ತ ಡೆಲ್ಲಿ ವಿಸ್ಫೋಟಕ ಬ್ಯಾಟಿಂಗ್‌ ನಡೆಸಿ 14.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ನಷ್ಟಕ್ಕೆ 124 ರನ್‌ ಪೇರಿಸಿ 9 ವಿಕೆಟ್‌ ಅಂತರದ ಗೆಲುವು ಸಾಧಿಸಿತ್ತು. ಇದು ಈ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧ ಮುಂಬೈಗೆ ಎದುರಾದ 2ನೇ ಸೋಲು. ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಒಂದು ರನ್‌ ಅಂತರದ ರೋಚಕ ಗೆಲುವು ಸಾಧಿಸಿತ್ತು.

ಇದನ್ನೂ ಓದಿ MIW vs DCW: ಮುಂಬೈಗೆ ಮತ್ತೆ ಸೋಲಿನ ಶಾಕ್‌ ನೀಡಿದ ಡೆಲ್ಲಿ

ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಮಾಜಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌(MIW vs DCW,) ಈ ಸೋಲಿನಿಂದ ಅಗ್ರಸ್ಥಾನ ಕಳೆದುಕೊಂಡಿತು. ಗೆದ್ದ ಡೆಲ್ಲಿ ತಂಡ 8 ಅಂಕದೊಂದಿಗೆ ಅಗ್ರಸ್ಥಾನಕ್ಕೇರಿತು.



ಚೇಸಿಂಗ್‌ ವೇಳೆ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಶಫಾಲಿ ವರ್ಮಾ 28 ಎಸೆತಗಳಲ್ಲಿ 43(4 ಬೌಂಡರಿ ಮತ್ತು 3 ಸಿಕ್ಸರ್‌) ರನ್‌ ಬಾರಿಸಿದರು. ಇವರಿಗೆ ನಾಯಕಿ ಮೆಗ್‌ ಲ್ಯಾನಿಂಗ್‌ ಕೂಡ ಉತ್ತಮ ಸಾಥ್‌ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 85 ರನ್‌ ರಾಶಿ ಹಾಕಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿತು. ಶಫಾಲಿ ವಿಕೆಟ್‌ ಪತನದ ಬಳಿಕ ಬಿರುಸಿನ ಬ್ಯಾಟಿಂಗ್‌ ನಡೆಸಿದ ಲ್ಯಾನಿಂಗ್‌ ಅಜೇಯ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. 49 ಎಸೆತ ಎದುರಿಸಿದ ಲ್ಯಾನಿಂಗ್‌ 60 ರನ್‌ ಬಾರಿಸಿದರು.