IPL 2025: ಸಿಎಸ್‌ಕೆ ಎದುರು ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕ!
Mumbai Indians vs Chennai Super Kings: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆಂದು ನಾಯಕ ಹಾರ್ದಿಕ್ ಪಾಂಡ್ಯ ಸ್ಪಷ್ಟಪಡಿಸಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಕಾರಣ ಹಾರ್ದಿಕ್ ಮುಂದಿನ ಪಂದ್ಯಕ್ಕೆ ರದ್ದುಗೊಳಿಸಲಾಗಿದೆ.

ಮುಂಬೈ ಇಂಡಿಯನ್ಸ್‌ನ ಮೊದಲನೇ ಪಂದ್ಯಕ್ಕೆ ಸೂರ್ಯಕುಮಾರ್ ಯಾದವ್ ನಾಯಕ ಎಂದ ಹಾರ್ದಿಕ್ ಪಾಂಡ್ಯ.

ನವದೆಹಲಿ: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಾರ್ಚ್ 23 ರಂದು ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ವಿರುದ್ಧದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆಂದು ನಾಯಕ ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ. ಕಳೆದ ಐಪಿಎಲ್ ಟೂರ್ನಿಯ ಪಂದ್ಯವೊಂದರಲ್ಲಿ ಮುಂಬೈ ಇಂಡಿಯನ್ಸ್ ತಂಡ ನಿಧಾನಗತಿಯ ಬೌಲಿಂಗ್ ಪ್ರಮಾದ ಎಸಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈ ತಂಡದ ಮುಂದಿನ ಪಂದ್ಯಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ರದ್ದುಗೊಳಿಸಲಾಗಿದೆ.
ಚೆನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆಂಬ ಬಗ್ಗೆ ಪ್ರಶ್ನೆಗಳು ಎದುರಾಗಿತ್ತು. ರೋಹಿತ್ ಶರ್ಮಾ ಮತ್ತೆ ನಾಯಕನಾಗಬಹುದಾ? ಅಥವಾ ಸೂರ್ಯಕುಮಾರ್ ಯಾದವ್ ಅವರು ತಂಡವನ್ನು ಮುನ್ನಡೆಸಬಹುದಾ? ಎಂಬ ಗೊಂದಲ ಅಭಿಮಾನಿಗಳಿಗೆ ಉಂಟಾಗಿತ್ತು. 2025ರ ಐಪಿಎಲ್ ಟೂರ್ನಿಯ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ಚೆನ್ನೈ ವಿರುದ್ಧದ ಪಂದ್ಯದಲ್ಲಿ ನಾನು ಆಡುವುದಿಲ್ಲ ಹಾಗೂ ನನ್ನ ಬದಲಿಗೆ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆಂದು ಖಚಿತಪಡಿಸಿದ್ದಾರೆ.
IPL 2025: ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ ಕಳೆದುಕೊಂಡ ಬೆನ್ನಲ್ಲೆ ಕೆಎಲ್ ರಾಹುಲ್‌ಗೆ ಮತ್ತೊಂದು ಹಿನ್ನಡೆ!
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಟಿ20ಐ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು. ಇದಾದ ಬಳಿಕ ಭಾರತ ಟಿ20 ತಂಡಕ್ಕೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಕಡೆಗಣಿಸಿ, ಸೂರ್ಯಕುಮಾರ್ ಯಾದವ್ ಅವರಿಗೆ ಟಿ20 ತಂಡದ ನಾಯಕತ್ವವನ್ನು ನೀಡಲಾಗಿತ್ತು. ಆ ಮೂಲಕ ಟಿ20 ವಿಶ್ವಕಪ್ ಭಾರತ ತಂಡಕ್ಕೆ ಉಪ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವಕ್ಕೆ ಬಿಸಿಸಿಐ ಪರಿಗಣಿಸದೆ ಅಚ್ಚರಿ ಮೂಡಿಸಿತ್ತು.
ಆದರೆ, ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಇಬ್ಬರೂ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ. ಆದರೆ, ಭಾರತ ಟಿ20 ತಂಡವನ್ನು ಮುನ್ನಡೆಸುವ ಸೂರ್ಯಕುಮಾರ್ ಯಾದವ್, ಮುಂಬೈನಲ್ಲಿ ಉಪ ನಾಯಕನಾಗಿ ಆಡುತ್ತಿದ್ದಾರೆ. ಆದರ, ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಂದ ಹಾಗೆ ಸೂರ್ಯಕುಮಾರ್ ಯಾದವ್ ಅವರು ಟಿ20ಐ ಕ್ರಿಕೆಟ್‌ನಲ್ಲಿ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ. ಅವರು 22 ಟಿ20ಐ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ ಹಾಗೂ ಇದರಲ್ಲಿ 17 ಪಂದ್ಯಗಳಲ್ಲಿ ಗೆಲುವು ಪಡೆದಿದ್ದಾರೆ.
IPL 2025: ಪಂಜಾಬ್ ಕಿಂಗ್ಸ್‌ಗೆ ಕಪ್ ಗೆದ್ದುಕೊಡುವುದು ನನ್ನ ಗುರಿ ಎಂದ ಶ್ರೇಯಸ್ ಅಯ್ಯರ್!
2023ರ ಐಪಿಎಲ್ ಟೂರ್ನಿಯ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ದ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದ್ದರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಇಂಪ್ಯಾಕ್ಸ್ ಸಬ್ ಆಗಿ ಆಡಿದ್ದರು. ಈ ಹಣಾಹಣಿಯಲ್ಲಿ ಐದು ಬಾರಿ ಚಾಂಪಿಯನ್ಸ್ ತಂಡ ಇನ್ನೂ 14 ಎಸೆತಗಳು ಬಾಕಿ ಇರುವಾಗಲೇ 5 ವಿಕೆಟ್ ಗೆಲುವು ಪಡೆದಿತ್ತು.
ಹಾರ್ದಿಕ್ ಪಾಂಡ್ಯ ಜತೆಗೆ ಜಸ್‌ಪ್ರೀತ್ ಬುಮ್ರಾ ಅವರು ಕೂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಸ್ಟಾರ್ ವೇಗಿ ಬುಮ್ರಾ ಅವರು ಗಾಯದಿಂದ ಇನ್ನೂ ಗುಣಮುಖರಾಗುತ್ತಿದ್ದಾರೆ. ಅವರು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ವೇಳೆ ಗಾಯಗೊಂಡಿದ್ದರು. ಇದಾದ ಬಳಿಕ ಅವರು ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಅಲಭ್ಯರಾಗಿದ್ದರು. ಅವರು ಯಾವಾಗ ಮುಂಬೈ ತಂಡಕ್ಕೆ ಮರಳಲಿದ್ದಾರೆಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.