Micro Finance Torture: ಆತ್ಮಹತ್ಯೆ ಮಾಡಿಕೊಳ್ಳಬೇಡಿ, ಸರ್ಕಾರ ನಿಮ್ಮ ಜತೆಗಿದೆ: ಸಿಎಂ‌ ಸಿದ್ದರಾಮಯ್ಯ

Micro Finance Torture: ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಅತಿರೇಕದ ವಸೂಲಿ ನಿಯಂತ್ರಿಣಕ್ಕೆ ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

CM Siddaramaiah (3)
Profile Prabhakara R Jan 31, 2025 3:33 PM

ಮೈಸೂರು: ಬಡವರ ಆರ್ಥಿಕ ಅಸಹಾಯಕತೆಯನ್ನು ಬಳಸಿಕೊಂಡು ಶೋಷಿಸುವ ಮೈಕ್ರೋ ಫೈನಾನ್ಸ್‌ಗಳ (Micro Finance Torture) ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜತೆಗಿದೆ. ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ. ಕಾನೂನು ಕ್ರಮ ತಗೊತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು, ಮಹದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು. ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಢ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು.

ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯ ಆರ್ಥಿಕವಾಗಿ, ಸಮಾಜಿಕವಾಗಿ ಇಲ್ಲ. ಇದು ಸಿಗದ ಹೊರತು ಸ್ವಾತಂತ್ರ್ಯದ ಆಶಯ ಪೂರ್ತಿ ಆಗುವುದಿಲ್ಲ ಎನ್ನುವ ಮಾತನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲೇ ಹೇಳಿದ್ದರು. ಅವತ್ತಿನ‌ ಅವರು ಮಾತು ಇವತ್ತಿಗೂ ಸತ್ಯ ಎಂದರು.

ಬಸವಣ್ಣನವರು 850 ವರ್ಷಗಳ ಹಿಂದೆ "ಇವ ನಾರವ ಎಂದು ಪ್ರಶ್ನಿಸದೆ, ಇವ ನಮ್ಮವ" ಎಂದು ಹೇಳಿ ಅಂದಿದ್ದರು. ಆದರೂ ಇವತ್ತಿಗೂ ನಾವು ಜಾತಿ ಕೇಳುವುದನ್ನು ನಿಲ್ಲಿಸಿಲ್ಲ, ಜಾತಿ-ಧರ್ಮದ ಅನಿಷ್ಠ ತಾರತಮ್ಯವನ್ನು ಇವತ್ತಿಗೂ ಕಾಣುತ್ತೇನೆ. ನಾನು ವೈಯುಕ್ತಿಕವಾಗಿ ಬಸವಣ್ಣನವರ ಅಪ್ಪಟ ಹಿಂಬಾಲಕ. ಅದಕ್ಕೇ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೊ ಕಡ್ಡಾಯಗೊಳಿಸಿದೆ ಎಂದರು.

ವಿದ್ಯಾವಂತರೂ ಕರ್ಮ‌ಸಿದ್ಧಾಂತವನ್ನು ಆಚರಿಸುವ ದುರಂತವನ್ನು ನಾವು ಕಾಣುತ್ತೇವೆ. ಯಾವ ದೇವರೂ ಬಡವನಾಗಿರು, ಹಸಿದುಕೊಂಡಿರು, ಹರಿದ ಬಟ್ಟೆಯಲ್ಲಿರು ಎಂದು ಹಣೆಬರಹ ಬರೆಯುವುದಿಲ್ಲ. ಇಂಥಾ ಮೌಢ್ಯವನ್ನು ವಿದ್ಯಾವಂತರೂ ಆಚರಿಸುತ್ತಿದ್ದಾರೆ. ಹೀಗಾದಾಗ ಅವರ ವಿದ್ಯೆಗೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು.

ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ. ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ವಿಶ್ಲೇಷಿಸಿದರು.

ನಾವು ಉಚಿತವಾಗಿ ಅಕ್ಕಿ ಕೊಟ್ಟಿದ್ದರಿಂದ ಬಡವರು, ಶ್ರಮಿಕರು ಸೋಮಾರಿಗಳಾಗುತ್ತಿದ್ದಾರೆ ಎನ್ನುವುದು ದುಡಿಯದ ಗ್ರ ಮೈಗಳ್ಳರು, ದುಡಿಯದೆ ಬೊಜ್ಜು ಬೆಳೆಸಿಕೊಂಡವರು ಮಾತ್ರ ಹೇಳಲು ಸಾಧ್ಯ. ಬರಿ ಬಾಯಿ ಮಾತಿನಲ್ಲಿ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆಶಯಗಳು ಜಾರಿ ಆಗುವುದಿಲ್ಲ. ಆಶಯಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು. ಈ ಉದ್ದೇಶದಿಂದಲೇ ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದೆವು ಎಂದು ಕರೆ ನೀಡಿದರು.

ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದಾಗ ರಾಜ್ಯದ ಬೊಕ್ಕಸ ದಿವಾಳಿ ಆಗತ್ತೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯವರೇ ಈಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಹೊಡೆದು ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಘೋಷಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಸುದ್ದಿಯನ್ನೂ ಓದಿ | Micro Finance Torture: ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸದ್ಯದಲ್ಲೇ ಸುಗ್ರೀವಾಜ್ಞೆ: ಸಿಎಂ ಸಿದ್ದರಾಮಯ್ಯ

ಆರ್ಥಿಕ, ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ಹೋಗಲು ಸಾಧ್ಯ. ನಮ್ಮ ಗ್ಯಾರಂಟಿಗಳು ಪ್ರತೀ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಚಲನೆ ನೀಡಿವೆ. ಜನರ ಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿದ್ದರಿಂದಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕೂಡ ಸದೃಢವಾಗಿದೆ ಎಂದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್