Micro Finance Torture: ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸದ್ಯದಲ್ಲೇ ಸುಗ್ರೀವಾಜ್ಞೆ: ಸಿಎಂ ಸಿದ್ದರಾಮಯ್ಯ

Micro Finance Torture: ಮೈಕ್ರೋ ಫೈನಾನ್ಸ್‌ಗಳಿಂದ ಜನರಿಗೆ ಕಿರುಕುಳ ಹಾಗೂ ಗೂಂಡಾ ರಾಜ್ಯ ಎಂಬ ಬಿಜೆಪಿ ಆರೋಪಕ್ಕೆ ಮೈಸೂರು ಹೆಲಿಪ್ಯಾಡ್‌ನಲ್ಲಿ ಸಿಎಂ ಸಿದ್ದರಾಮಯ್ಯ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ (Micro Finance Torture) ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಸಿಎಂ ಮನವಿ ಮಾಡಿದ್ದಾರೆ.

CM Siddaramaiah (2)
Profile Prabhakara R Jan 31, 2025 2:12 PM

ಬೆಂಗಳೂರು, ಜನವರಿ 31: ಆರ್‌ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು.

ಮೈಕ್ರೋ ಫೈನಾನ್ಸ್‌ಗಳಿಂದ ಜನರಿಗೆ ಕಿರುಕುಳ ಹಾಗೂ ಗೂಂಡಾ ರಾಜ್ಯ ಎಂಬ ಬಿಜೆಪಿ ಆರೋಪಕ್ಕೆ ಮೈಸೂರು ಹೆಲಿಪ್ಯಾಡ್‌ನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕವಾಗಿ ಶೇ. 28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಗಮನಿಸಲಾಗಿದೆ.

ಮೈಕ್ರೋ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರಸರ್ಕಾರದ ಅಧೀನದಲ್ಲಿ ಬರುವ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಮೈಕ್ರೋ ಫೈನಾನ್ಸ್‌ಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸದ್ಯದಲ್ಲಿಯೇ ಸುಗ್ರೀವಾಜ್ಞೆಯನ್ನು ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ

ಕೇಂದ್ರದ ಬಜೆಟ್ ಅಧಿವೇಶನದಿಂದ ರಾಜ್ಯದ ನಿರೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರದವರು ರಾಜ್ಯಕ್ಕೆ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ ಅನುದಾನವನ್ನು ನೀಡಿಲ್ಲ. 2023-24 ರ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಇಳಿಸಿದ್ದಾರೆ. ಈ 5300 ಕೋಟಿ ರೂ. ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ನಬಾರ್ಡ್ ನ ಅನುದಾನದಲ್ಲಿ ಶೇ.58 ರಷ್ಟು ಕಡಿತ ಮಾಡಿದ್ದು, ಕಳೆದ ವರ್ಷ ನಬಾರ್ಡ್ ನ ಅಡಿ ನೀಡಲಾಗಿದ್ದ 5800 ಕೋಟಿ ರೂ. ,ಈ ವರ್ಷ 2345 ಕೋಟಿ ರೂ. ಇಳಿಸಿದ್ದಾರೆ. ಕರ್ನಾಟಕ 4ಲಕ್ಷ ಕೋಟಿಯಷ್ಟು ಕೇಂದ್ರಕ್ಕೆ ತೆರಿಗೆ ನೀಡಿದರೆ, ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ಮರಳಿ ಬರುತ್ತಿದ್ದುದ್ದು, ತೆರಿಗೆ ಹಂಚಿಕೆಯ ಪಾಲಿನಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದರು.

ಬಾಲಿಶ ಹೇಳಿಕೆ

ಕುಂಭಮೇಳದ ಬಗ್ಗೆ ಟೀಕೆ ಮಾಡುವವರು ಅಯೋಗ್ಯರು ಎಂದು ಪ್ರತಿಪಕ್ಷ ನಾಯಕರಾದ ವಿಜಯೇಂದ್ರರವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪು ನಡೆದಾಗ ಟೀಕೆ ಮಾಡುವ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇರುತ್ತದೆ. ವಿಜಯೇಂದ್ರರವರ ಹೇಳಿಕೆ ಬಾಲಿಶವಾಗಿದೆ ಎಂದರು.

ಮುಡಾ ಪ್ರಕರಣ ರಾಜಕೀಯ ಪ್ರೇರಿತ

ಮುಡಾಪ್ರಕರಣಕ್ಕೆ ಸಂ.ಬಂಧಿಸಿದಂತೆ ಇಡಿ ವರದಿ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ. ಮನಿ ಲಾಂಡರಿಗ್ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿಯವರ ಕ್ರಮ ಕಾನೂನು ಬಾಹಿರ ಮತ್ತು ಮನಿ ಲಾಂಡರಿಂಗ್ ಆಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇ.ಡಿ.ಯ ಸಂಪೂರ್ಣ ವರದಿಯನ್ನು ಮಾಧ್ಯಮದಲ್ಲಿ ಬಿಡುಗಡೆ ಮಾಡುವ ಮೂಲಕ ಸಂಪೂರ್ಣ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯ ಪ್ರೇರಿತವಾಗಿದೆ. ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ ಎಂದರು.

ವರ್ಚಸ್ಸು ಕುಂದಿಸುವ ಪ್ರಯತ್ನ

ಮುಡಾ ಪ್ರಕರಣದ ಮೂಲಕ ಸಿದ್ದರಾಮಯ್ಯನವರ ತೇಜೋವಧೆ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಉತ್ತರಿಸಿ, ಕರ್ನಾಟಕ ಮುಖ್ಯಮಂತ್ರಿಯಾಗಿರುವ ಕಾರಣದಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ಶ್ರೀಮತಿಯವರಿಗೆ ಇಡಿಯವರ ನೋಟಿಸ್ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತರಲಾಗಿದೆ. ನನ್ನ ವರ್ಚಸ್ಸಿಗೆ ಭಂಗ ತರಬೇಕೇಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು ಮಾಡಲಾಗುತ್ತಿದೆ. ಆದರೆ ಅವರ ಪ್ರಯತ್ನಗಳು ಸಫಲವಾಗಲು ಸಾಧ್ಯವಿಲ್ಲ ವೆಂದರು.

ಈ ಸುದ್ದಿಯನ್ನೂ ಓದಿ | VIP Entries: ದೇಗುಲಗಳಲ್ಲಿ VIP ದರ್ಶನ ನಿರ್ಬಂಧಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ವರಿಷ್ಠರ ತೀರ್ಮಾನವೇ ಅಂತಿಮ

ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ. ಪಕ್ಷದ ನಾಯಕರು ಸಭೆ ಮಾಡುವುದರಲ್ಲಿ ಯಾವುದೇ ರಾಜಕೀಯವಿಲ್ಲ. ಸತ್ಯಕ್ಕೆ ವಿರುದ್ಧವಾದ ಊಹೆಗಳು ತಪ್ಪು ಎಂದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?