ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

KN Rajanna: ಅತೀ ಶೀಘ್ರದಲ್ಲೇ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ; ಸಂಚಲನ ಮೂಡಿಸಿದ ಫೇಸ್‌ಬುಕ್ ಪೋಸ್ಟ್

KN Rajanna: ಎಸ್. ಆರ್. ಶ್ರೀನಿವಾಸ್ ಗುಬ್ಬಿ ಎಂಎಲ್ಎ ಎಫ್.ಸಿ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಶ್ರೀನಿವಾಸ್ ಅಭಿಮಾನಿಗಳು ಶೀಘ್ರದಲ್ಲಿಯೇ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಲಿದ್ದಾರೆ ಎಂಬ ಪೋಸ್ಟ್ ಹರಿಬಿಟ್ಟಿದ್ದು, ಇದಕ್ಕೆ ಸಚಿವ ರಾಜಣ್ಣ ಅವರ ಅಭಿಮಾನಿಗಳು ಈ ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ; ಸಂಚಲನ ಮೂಡಿಸಿದ ಫೇಸ್‌ಬುಕ್ ಪೋಸ್ಟ್

Profile Prabhakara R Feb 26, 2025 6:10 PM

ತುಮಕೂರು: ಹಾಲು ಒಕ್ಕೂಟದ ಅಧ್ಯಕ್ಷ ಚುನಾವಣೆಯ ನಂತರ ಜಿಲ್ಲಾ ಕಾಂಗ್ರೆಸ್ ಮುಖಂಡರ ಆಂತರಿಕ ಕಿತ್ತಾಟ ಬೀದಿಗೆ ಬಂದಿದ್ದು, ಕಾರ್ಯಕರ್ತರಲ್ಲಿ ಗೊಂದಲ ಮೂಡಿದೆ. ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಶ್ರೀನಿವಾಸ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಚಿವರಾದ ಪರಮೇಶ್ವರ್, ಕೆ.ಎನ್. ರಾಜಣ್ಣ (KN Rajanna) ಅವರ ವಿರುದ್ಧ ಪ್ರತಿದಿನ ಪೋಸ್ಟರ್ ಹರಿಬಿಡುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಸಚಿವರ ಅಭಿಮಾನಿಗಳು ಸಹ ಕಾಮೆಂಟ್ ಮಾಡುವ ಮೂಲಕ ಕಿಡಿಕಾರುತ್ತಿದ್ದಾರೆ.‌

ಶೀಘ್ರದಲ್ಲೇ ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ?

ಎಸ್. ಆರ್. ಶ್ರೀನಿವಾಸ್ ಗುಬ್ಬಿ ಎಂಎಲ್ಎ ಎಫ್.ಸಿ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಶ್ರೀನಿವಾಸ್ ಅಭಿಮಾನಿಗಳು ಶೀಘ್ರದಲ್ಲಿಯೇ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಲಿದ್ದಾರೆ ಎಂಬ ಪೋಸ್ಟ್ ಹರಿಬಿಟ್ಟಿದ್ದು, ಇದಕ್ಕೆ ಸಚಿವ ರಾಜಣ್ಣ ಅವರ ಅಭಿಮಾನಿಗಳು ಈ ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಪರಮೇಶ್ವರ್ ವಿರುದ್ಧವೂ ಪೋಸ್ಟ್

ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಅವರ ವಿರುದ್ಧವು ಶಾಸಕ ಶ್ರೀನಿವಾಸ್ ಬೆಂಬಲಿಗರು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಪ್ರತಿಯೊಂದು ಪೋಸ್ಟ್‌ಗೆ ಸಚಿವ ಪರಮೇಶ್ವರ್ ಬೆಂಬಲಿಗರು ಪ್ರತಿಕ್ರಿಯೆ ನೀಡುತ್ತಿದ್ದು, ಶಾಸಕ ಶ್ರೀನಿವಾಸ್ ಬೆಂಬಲಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಲು ಶಾಸಕ ಶ್ರೀನಿವಾಸ್ ಅವರ ಪತ್ನಿ ಭಾರತಿದೇವಿ ಪ್ರಯತ್ನ ನಡೆಸಿದ್ದರು. ಆದರೆ ಸಚಿವರಾದ ಪರಮೇಶ್ವರ್, ರಾಜಣ್ಣ ಅವರು ಪಾವಗಡ ಶಾಸಕ ವೆಂಕಟೇಶ್ ಅವರನ್ನು ನಾಮ ನಿರ್ದೇಶನ ಮಾಡಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ಶ್ರೀನಿವಾಸ್ ಬೆಂಬಲಿಗರು ಜಾಲತಾಣದಲ್ಲಿ ಕಿಡಿಕಾರುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮುಖಂಡರ ಆಂತರಿಕ ಕಿತ್ತಾಟ ಈಗ ಜಾಲತಾಣದ ಮೂಲಕ ಬಹಿರಂಗಗೊಂಡಿದೆ.

ಜಿಲ್ಲೆಯ ಎಲ್ಲಾ ಶಾಸಕರ ಜತೆಗೆ ನನಗೆ ಉತ್ತಮ ಒಡನಾಟವನ್ನು ಇಟ್ಟು ಕೊಂಡಿದ್ದೇನೆ, ನಾನು ಯಾರ ಜತೆಗೂ ವೈಷಮ್ಯ ಬೆಳೆಸಿಕೊಂಡಿಲ್ಲ. ಆದರೂ, ನನ್ನ ಸಣ್ಣ ಬೇಡಿಕೆಯನ್ನು ಈಡೇರಿಸಲಿಲ್ಲ. ನನಗೂ ಟೈಂ ಬರುತ್ತೆ ಎಂದು ಶಾಸಕ ಶ್ರೀನಿವಾಸ್ ಇತ್ತೀಚೆಗೆ ಹೇಳಿದ್ದರು. ಕ್ಷೇತ್ರಕ್ಕೆ ಸರಿಯಾಗಿ ಅನುದಾನ ಬರದಿದ್ದರೂ, ಶ್ರೀನಿವಾಸ್ ಏನೂ ತಕರಾರು ಎತ್ತದೇ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ್ದ ಅವರು, ಅನುದಾನ ನನ್ನ ಕ್ಷೇತ್ರಕ್ಕೆ ಬರುತ್ತಿದೆ. ಕೆಲವು ದಿನಗಳ ಹಿಂದೆಯೂ ಅನುದಾನ ಬಂದಿತ್ತು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Ban On Politicians: ಶಿಕ್ಷೆಗೆ ಗುರಿಯಾಗಿರುವ ರಾಜಕಾರಣಿಗಳ ಮೇಲೆ ಆಜೀವ ನಿಷೇಧ ಸರಿಯಲ್ಲ-ಸುಪ್ರೀಂಗೆ ಕೇಂದ್ರ ಸರ್ಕಾರ ಅಫಿಡವಿಟ್‌ ಸಲ್ಲಿಕೆ

ಕಾಂಗ್ರೆಸ್‌ ನಾಯಕರ ನಡುವಿನ ಭಿನ್ನಾಭಿಪ್ರಾಯ ಬಗ್ಗೆ ಮಾತನಾಡಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ, ಲಿಂಕ್ ಕ್ಯಾನಲ್ ವಿಚಾರದಲ್ಲಿ ಮೊದಲು ಶ್ರೀನಿವಾಸ್ ಅವರನ್ನು ಸೈಡ್ಲೈನ್ ಮಾಡಲಾಯಿತು. ಕುಣಿಗಲ್‌ನಲ್ಲಿ ರಂಗನಾಥ್ ಅವರನ್ನು ಬೆಳೆಸಲು ಇವರನ್ನು ಮೂಲೆಗುಂಪು ಮಾಡಲಾಗುತ್ತಿದೆ. ಮಂತ್ರಿ ಮಾಡುತ್ತೇನೆ ಎನ್ನುವ ಆಮಿಷವನ್ನು ಒಡ್ಡಿ ಅವರನ್ನು ಕಾಂಗ್ರೆಸ್ಸಿಗೆ ಸೇರ್ಪಡೆಗೊಳಿಸಲಾಯಿತು. ಅವರ ಮೇಲೆ ನನಗೆ ಬಹಳ ಗೌರವವಿದೆ, ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಆರೋಪಿಸಿದ್ದರು.