ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಉಡುಪಿ ಕೃಷ್ಣನ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇತ್ತೀಚೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಶೀರೂರು ಮಠದ ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಅವರನ್ನು ಸನ್ಮಾನಿಸಿ, ಆಶೀರ್ವಾದ ಪಡೆದರು.

ಲಕ್ಷ್ಮೀ ಹೆಬ್ಬಾಳಕರ್ (ಸಂಗ್ರಹ ಚಿತ್ರ)
1/3

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇತ್ತೀಚೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕನಕನ ಕಿಂಡಿಯ ಮೂಲಕ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ರೀ ಕೃಷ್ಣನ ದರ್ಶನ ಪಡೆದರು.

2/3

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರೊಂದಿಗೆ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಪ್ರಸಾದ್ ಕಾಂಚನ್, ರಮೇಶ್ ಕಾಂಚನ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

3/3

ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇತ್ತೀಚೆಗೆ ಸರ್ವಜ್ಞ ಪೀಠವನ್ನೇರಿದ ಶೀರೂರು ಮಠದ ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಅವರನ್ನು ಸಮ್ಮಾನಿಸಿ, ಆಶೀರ್ವಾದ ಪಡೆದರು.

ವಿದ್ಯಾ ಇರ್ವತ್ತೂರು

View all posts by this author