ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ

ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರ ಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿ ದರು. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳ ಪಟ್ಟು, ಚೇತರಿಸಿಕೊಂಡ ವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ

Surgery- Ramalingareddy
Profile Ashok Nayak Feb 6, 2025 5:11 PM

ಬೆಂಗಳೂರು: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರ ಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿ ದರು. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳ ಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು, ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋ ಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು.

ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು, ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ ಶಸ್ತ್ರಚಿಕಿತ್ಸೆ ಆಯ್ದುಕೊಂಡೆ. ಅಂತೆಯೇ ಶಸ್ತ್ರಚಿಕಿತ್ಸೆ ಬಳಿಕ ನನ್ನ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಚೇತರಿಕೆ ಕಂಡಿದ್ದೇನೆ. ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವವರು ರೋಬೋಟ್‌ ನೆರವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂಬುದು ನನ್ನ ಅನಿಸಿಕೆ. ಇಲ್ಲಿನ ವೈದ್ಯ ತಂಡವು ಸಹ ಸೂಕ್ತ ಮಾಹಿತಿಯೊಂದಿಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಉತ್ತಮ ರೀತಿಯಲ್ಲಿ ನನ್ನ ಕ್ಷೇಮಸಮಾಚಾರ ನೋಡಿಕೊಂಡರು ಎಂದು ಹೇಳಿದರು.

ಇದನ್ನೂ ಓದಿ: Dr Vijay Darda Column: ಅಕ್ರಮ ವಲಸಿಗರು ದೇಶ ಬಿಟ್ಟ ತೊಲಗಲೇಬೇಕು

ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಪ್ರತಿಯೊಬ್ಬರು ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯ ಕ್ರಮದ ಅಡಿ ಭಾಗಿಯಾಗಿರುವುದು ಸಾಕಷ್ಟು ಜನರಿಗೆ ಸ್ಪೂರ್ತಿದಾಯಕವಾಗಿದೆ. ಹಲವರು ಮೊಣ ಕಾಲು ನೋವಿನಿಂದ ಬಳಲುತ್ತಿದ್ದರೂ, ಶಸ್ತ್ರಚಿಕಿತ್ಸೆಯ ಬೀತಿಯಿಂದ ಶಸ್ತ್ರಚಿಕಿತ್ಸೆ ಮಾಡಿಸಿ ಕೊಳ್ಳದೇ ನೋವಿನಲ್ಲೇ ನರಳುತ್ತಿರುತ್ತಾರೆ, ನಮ್ಮಂತಹ ನೂರಾರು ಜನರ ಅನುಭವವು ಬೇರೆಯ ವರಿಗೆ ಸ್ಪೂರ್ತಿಯಾಗಲಿ ಎಂದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾದ ಡಾ.ವಿ.ವಿ. ಚಿನಿವಾಲರ್‌ ಮಾತನಾಡಿ, ನಾನೂ ಸಹ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು, ಚೇತರಿಕೆ ಕಂಡಿದ್ದೇನೆ, ವೈದ್ಯಕೀಯ ಲೋಕದಲ್ಲಿ ರೋಬೋಟ್‌ನ ಆಗಮನ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದರು.

ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಮಾತನಾಡಿ, ಇಂದು ರೋ ಬೋಟ್‌ ನೆರವು ವೈದ್ಯಲೋಕದಲ್ಲಿ ಹೊಸ ಅದ್ಯಾಯ ಸೃಷ್ಟಿಸಿದೆ. ಅದರಲ್ಲೂ ಮೊಣಕಾಲು, ಸೊಂಟ ಇತರೆ ಕೀಲು ಬದಲಾವಣೆಗೆ ರೋಬೋಟ್‌ ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿ ಯಾಗಿದೆ.

ಹೀಗಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮ ಚಾಲನೆ ನೀಡಿದ್ದೇನೆ. ಫೋರ್ಟಿಸ್ ಸ್ಟ್ರೈಡ್ ಎನ್ನುವುದು ಕೀಲು ಆರೋಗ್ಯ ಸವಾಲುಗಳಿಂದ ಪ್ರಭಾವಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾದ ಬೆಂಬಲ ಗುಂಪಾಗಿದೆ. ಇದು ಅನುಭವಗಳನ್ನು ಹಂಚಿಕೊಳ್ಳಲು, ತಜ್ಞರ ಒಳನೋಟಗಳನ್ನು ಪಡೆಯಲು ಮತ್ತು ಸುಧಾರಿತ ಚೇತರಿಕೆಗಾಗಿ ಅಮೂಲ್ಯವಾದ ಮಾರ್ಗದರ್ಶನವನ್ನು ಪಡೆಯುವ ವೇದಿಕೆಯಾಗಿದೆ ಎಂದು ವಿವರಿಸಿದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?