ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tiptur News: ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

Tiptur News ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶ್ರೀ ಕೆಂಪಮ್ಮ ದೇವಿ ದೇವಾಲಯದಲ್ಲಿ ಬುಧವಾರ ವಾಮಾಚಾರ ಮಾಡಿ ಬಾಗಿಲಿಗೆ ಬೆಂಕಿ ಹಚ್ಚಲಾಗಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

Profile Prabhakara R Mar 12, 2025 3:16 PM

ತುಮಕೂರು: ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶಕ್ತಿ ದೇವತೆ, 33 ಗ್ರಾಮಗಳ ಒಡತಿ ಶ್ರೀ ಕೆಂಪಮ್ಮ ದೇವಿ ದೇವಾಲಯಕ್ಕೆ ವಾಮಾಚಾರ ಮಾಡಿ ಬಾಗಿಲಿಗೆ ಬೆಂಕಿ ಹಚ್ಚಿರುವ ಘಟನೆ (Tiptur News) ಬುಧವಾರ ನಡೆದಿದೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಶ್ರೀ ಕೆಂಪಮ್ಮ ದೇವಿ ದೇವಾಲಯವಿದೆ.

ಸಂಜೆ ಪೂಜೆ ನಂತರ ರಾತ್ರಿ ವೇಳೆ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿದ್ದಾರೆ. ನಂತರದಲ್ಲಿ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದು ಅದು ಸಂಪೂರ್ಣ ಬಾಗಿಲಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಳಗಿನ ಜಾವ ಪೂಜಾ ಕೈಂಕರ್ಯಗಳನ್ನು ನಡೆಸಲು, ದೇವಾಲಯವನ್ನು ಸ್ವಚ್ಛತೆ ಮಾಡಲು ಬಂದಾಗ ಗ್ರಾಮಸ್ಥರು ನೋಡಿ ಬೆಂಕಿ ನಂದಿಸಿದ್ದಾರೆ. ಬಾಗಿಲು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸ್ಥಳದಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ವಾಮಾಚಾರ ವಸ್ತುಗಳು ಸುಟ್ಟ ಸ್ಥಿತಿಯಲ್ಲಿ ದೊರೆತಿದ್ದು ಸ್ಥಳೀಯ ಗ್ರಾಮಸ್ಥರು , ಭಕ್ತರಲ್ಲಿ ಆತಂಕ ಮೂಡಿಸಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.



ಈ ಸುದ್ದಿಯನ್ನೂ ಓದಿ | Theft case: ಹಾಡಹಗಲೇ ಕಾರಲ್ಲಿದ್ದ 33 ಲಕ್ಷ‌ ಕದ್ದಿದ್ದ ಖದೀಮ ಅರೆಸ್ಟ್

ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಯಾದಗಿರಿ: ಕೌಟುಂಬಿಕ ಕಲಹದಿಂದ ನೊಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ವಡಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ನೀಲಾಬಾಯಿ ಶಂಕರ್ (35) ಪುತ್ರಿಯರಾದ ರಾಜೇಶ್ವರಿ (10) ನಿಶಾ (4) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಶೀಲ ಶಂಕಿಸಿ ಗಂಡನ ನಿರಂತರ ಕಿರುಕುಳ ನೀಡಿದ್ದೆ ಮಹಿಳೆಯ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಸಂಬಂಧಿಕರೊಬ್ಬರು ಆರೋಪಿಸಿದ್ದಾರೆ.

ಮೃತ ದುರ್ದೈವಿ ನೀಲಾಬಾಯಿಗೆ ನಾಲ್ವರು ಪುತ್ರಿಯರು, ಒರ್ವ ಪುತ್ರ ಒಟ್ಟು ಐದು ಜನ ಮಕ್ಕಳಿದ್ದು, ಬೇಬಿ (12) ಹಾಗೂ 11 ತಿಂಗಳು ಗಂಡು ಮಗು ಶೆವಾನನ್ನು ಮನೆಯಲ್ಲಿ ಬಿಟ್ಟು, ಇನ್ನುಳಿದ ಮೂವರು ಹೆಣ್ಣು ಮಕ್ಕಳನ್ನು ಜತೆಯಲ್ಲಿ ಕರೆದುಕೊಂಡು ತಾಂಡಾದ ಬಳಿ ಇರುವ ಬಾವಿ ಬಳಿ ಹೋಗಿದ್ದಾಳೆ. ಮೊದಲು ಇಬ್ಬರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿದ್ದಾಳೆ, ಇನ್ನೊಬ್ಬ ಮಗಳು ಸಂಜು (6) ಬಾವಿಗೆ ತಳ್ಳುವಾಗ ತಪ್ಪಿಸಿಕೊಂಡು ಓಡಿ ಹೋಗಿ ತಾಂಡಾದಲ್ಲಿ ಈ ವಿಷಯ ತಿಳಿಸಿದ್ದಾಳೆ. ಅಲ್ಲಿನ ನಿವಾಸಿಗಳು ಬಾವಿಯ ಹತ್ತಿರ ಬರುವಷ್ಟರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ವಿಷಯ ತಿಳಿದ ಸಂಬಂಧಿಕರು ಮತ್ತು ತಾಂಡಾದ ಜನರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿ ಶಂಕರ್, ಡಿವೈಎಸ್ಪಿ ಅರುಣ್ ಕುಮಾರ್, ತಹಸೀಲ್ದಾರ್ ಶ್ರೀನಿವಾಸ್ ಚಾಪೆಲ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಅನುಮಾಸ್ಪದವಾಗಿ ವ್ಯಕ್ತಿಯ ಶವಪತ್ತೆ

ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಗುಡಿಗೊಂಡನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಮಾರುಗೊಂಡನಹಳ್ಳಿಯ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬಸವರಾಜು(40) ಮೃತದುರ್ದೈವಿ. ಮಂಗಳವಾರ ಬೆಳಗ್ಗೆ 9:30ಕ್ಕೆ ಮನೆಯಿಂದ ಹೊರಗೆ ಹೋದ ವ್ಯಕ್ತಿ, ಸಂಜೆ 5 ಗಂಟೆ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾನೆ. ಬಸವರಾಜುಗೆ ಒಬ್ಬಳು ಹೆಂಡತಿ ಇಬ್ಬರು ಗಂಡು ಮಕ್ಕಳಿದ್ದು, ಕುರಿ ಕಾಯುವ ಕೆಲಸವನ್ನು ಮಾಡುತ್ತಿದ್ದ. ಆತನ ದೇಹದ ಮೇಲೆ ಗಾಯದ ಗುರುತುಗಳು ಹಾಗೂ ಅಲ್ಲಲ್ಲೇ ಚರ್ಮ ಕಿತ್ತು ಹೋಗಿರುವುದು ಕಂಡುಬಂದಿದೆ. ಹೀಗಾಗಿ ಬಸವರಾಜು ಸಾವು ಸಹಜವಲ್ಲ ಎಂದು ಸಂಬಂಧಿಕರು ಹಾಗೂ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಹೊನ್ನವಳ್ಳಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Shocking News: ರಾಜ್ಯದಲ್ಲಿ 1,533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ: ಸಚಿವರಿಂದ ಮಾಹಿತಿ