ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Ravi Ganiga: ಕರ್ನಾಟಕ ಎಲ್ಲಿದೆ ಎಂದವರಿಗೆ ಬುದ್ಧಿ ಕಲಿಸಬೇಕು: ರಶ್ಮಿಕಾ ವಿರುದ್ಧ ಶಾಸಕ ರವಿ ಗಣಿಗ ಕಿಡಿ

Ravi Ganiga: ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಅಹ್ವಾನ ಮಾಡಿದ್ದೆವು. ಆದರೆ ನಾನು ಹೈದರಾಬಾದ್‌ನಲ್ಲಿ ಇರೋದು, ನನಗೆ ಟೈಂ ಇಲ್ಲ. ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ಧಿ ಕಲಿಸಬೇಕಲ್ವಾ ಎಂದು ಕಾಂಗ್ರೆಸ್‌ ಶಾಸಕ ಶಾಸಕ ರವಿ ಗಣಿಗ ಗುಡುಗಿದ್ದಾರೆ.

ಕರ್ನಾಟಕ ಎಲ್ಲಿದೆ ಎಂದವರಿಗೆ ಬುದ್ಧಿ ಕಲಿಸಬೇಕು: ರವಿ ಗಣಿಗ ಕಿಡಿ

Profile Prabhakara R Mar 3, 2025 6:12 PM

ಬೆಂಗಳೂರು: ಚಲನಚಿತ್ರೋತ್ಸವಕ್ಕೆ ಆಹ್ವಾನ ಕೊಟ್ಟರೂ ಆಕೆ ಬಂದಿಲ್ಲ ಎಂದು ಹೇಳುವ ಮೂಲಕ ರಶ್ಮಿಕಾ ಮಂದಣ್ಣ ವಿರುದ್ಧ ಶಾಸಕ ರವಿ ಗಣಿಗ (Ravi Ganiga) ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿರುವ ಅವರು, ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಅಹ್ವಾನ ಮಾಡಿದ್ದೆವು. ಆದರೆ ನಾನು ಹೈದರಾಬಾದ್‌ನಲ್ಲಿ ಇರೋದು, ನನಗೆ ಟೈಂ ಇಲ್ಲ. ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ಧಿ ಕಲಿಸಬೇಕಲ್ವಾ? ನಾನು ಸಿಎಂ-ಡಿಸಿಎಂಗೆ ಪತ್ರ ಬರೆಯುತ್ತೇನೆ. ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕುಎಂದು ಅಕ್ರೋಶ ಹೊರಹಾಕಿದ್ದಾರೆ.

ಆಂಧ್ರದ ನರಸಿಂಹಲು ಡಿಕೆಶಿ ವಿರುದ್ಧ ಮಾತನಾಡುತ್ತಾನೆ. ಆಂಧ್ರಪ್ರದೇಶದಿಂದ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೀತು, ಆಗ ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್, ಚಲನಚಿತ್ರ ಮಂಡಳಿಯವರು ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.



ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲು ಹೋದಾಗ, ನನ್ನ ಮನೆ ಇರುವುದು ಹೈದರಾಬಾದ್‌ನಲ್ಲಿ, ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ ಅಂದಿದ್ದರು. ಇನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಯಿ ಮುಚ್ಚಿಕೊಂಡು ಇರಬೇಕು. ಕನ್ನಡ ನೆಲ, ಭಾಷೆ ವಿಚಾರಕ್ಕೆ ಕರೆದರೆ ಇವರು ಬರಲ್ಲ ಎಂದು ಕೆಂಡಕಾರಿದರು.

ಈ ಸುದ್ದಿಯನ್ನೂ ಓದಿ | Actor Darshan: ದರ್ಶನ್ ಮೇಲೆ ಹದ್ದಿನ ಕಣ್ಣಿಟ್ಟ ಪತ್ನಿ ವಿಜಯಲಕ್ಷ್ಮಿ; ಹಳೇ ಪಟಾಲಂಗೆ ಗೇಟ್ ಪಾಸ್!

ಕಲಾವಿದರು ಕಾಂಗ್ರೆಸ್ ಜೀತದಾಳುಗಳಲ್ಲ: ಸಿ.ಟಿ.ರವಿ

ಬೆಂಗಳೂರು: ಡಿಕೆಶಿ ನಟ್ಟು ಬೋಲ್ಟ್ ಟೈಟ್ ಮಾಡುತ್ತೇವೆ ಎಂದು ಎಲ್ಲೋ ಒಂದು ಕಡೆ ಲೂಸ್ ಲೂಸಾಗಿ ಮಾತನಾಡಿರಬಹುದು ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೆದರಿಕೆ ಹಾಕುವುದು ಗೌರವ ಸಂಗತಿಯೇ? ಕಲಾವಿದರು ಕಾಂಗ್ರೆಸ್ ಜೀತದಾಳುಗಳಲ್ಲ, ಡಿಕೆಶಿ ನಟ್ಟು ಬೋಲ್ಟ್ ಟೈಟ್ ಮಾಡುತ್ತೇವೆ ಎಂದು ಎಲ್ಲೋ ಒಂದು ಕಡೆ ಲೂಸ್ ಲೂಸಾಗಿ ಮಾತನಾಡಿರಬಹುದು ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | DK Shivakumar: ಖರ್ಗೆ ಮಾತಿಗೆ ಬದ್ಧ: ಡಿ.ಕೆ.ಶಿವಕುಮಾರ್

ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಮೊಯ್ಲಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರ ಪಕ್ಷ ನಿರ್ಣಯ ಮಾಡಿ ಮುಖ್ಯಮಂತ್ರಿ ಎಂದು ಒಪ್ಪಿದರೆ ಸಿಎಂ ಆಗ್ತಾರೆ. ಹೀಗೆ ಹೇಳುವುದರ ಮೂಲಕ ನಾನೇ ಮುಖ್ಯಮಂತ್ರಿ ಎಂದು, ಸಿಎಂ ಅವರನ್ನು ಇಳಿಸುತ್ತೇವೆ ಅಂತ ಯಾಕೆ ಅಪಮಾನ ಮಾಡ್ತೀರಾ? ಇಳಿಸುವುದಾದರೆ ಒಂದೇ ದಿನ ಇಳಿಸಿ. ಅವರನ್ನು ಕೂರಿಸಿ, ಯಾಕೆ ಸಿದ್ದರಾಮಯ್ಯ ಅವರಿಗೆ ಅಪಮಾನ ಮಾಡ್ತೀರಾ? ಬಜೆಟ್ ಮಂಡಿಸುವ ವೇಳೆ ಈ ರೀತಿ ಆದರೆ ಅಪಮಾನ ಎಂದು ವ್ಯಂಗ್ಯವಾಡಿದರು.