#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Champions Trophy:ಬಾಂಗ್ಲಾದೇಶ ವಿರುದ್ದದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI ವಿವರ!

India's Likely Playing for Bangladesh Clash: ಇಂಗ್ಲೆಂಡ್‌ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿಕೊಂಡಿರುವ ಭಾರತ ತಂಡ, ಇದೀಗ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಸಜ್ಜಾಗುತ್ತಿದೆ. ಫೆಬ್ರವರಿ 20ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದ ಮೂಲಕ ಟೀಮ್‌ ಇಂಡಿಯಾ ತನ್ನ ಟೂರ್ನಿಯ ಅಭಿಯಾನವನ್ನು ಆರಂಭಿಸಲಿದೆ.

ಬಾಂಗ್ಲಾ ಕದನಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI ಇಂತಿದೆ!

ಬಾಂಗ್ಲಾದೇಶ ವಿರುದ್ದದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

Profile Ramesh Kote Feb 13, 2025 6:15 PM

ನವದೆಹಲಿ: ಇಂಗ್ಲೆಂಡ್‌ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಂಡಿರುವ ಭಾರತ ತಂಡ, ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರವರಿ 19 ರಂದು ಆರಂಭವಾಗುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಸಜ್ಜಾಗುತ್ತಿದೆ. ಫೆಬ್ರವರಿ 20 ರಂದು ದುಬೈ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ದ ಇಂಗ್ಲೆಂಡ್‌ ತಂಡ ಕಾದಾಟ ನಡೆಸಲಿದೆ. ನಂತರ ಫೆ. 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ರೋಹಿತ್‌ ಶರ್ಮಾ ಪಡೆ ಹೈವೋಲ್ಟೇ ಕದನದಲ್ಲಿ ಕಾದಾಟ ನಡೆಸಲಿದೆ. ಅಂದ ಹಾಗೆ ಬಾಂಗ್ಲಾ ಎದುರಿನ ತನ್ನ ಮೊದಲನೇ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI ಅನ್ನು ಇಲ್ಲಿ ವಿವರಿಸಲಾಗಿದೆ.

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಭಾರತ ತಂಡದಲ್ಲಿ ಕೆಲ ಬದಲಾವಣೆಗಳನ್ನು ತರಲಾಗಿದೆ. ಯಶಸ್ವಿ ಜೈಸ್ವಾಲ್‌ ಬದಲು ವರುಣ್‌ ಚಕ್ರವರ್ತಿಗೆ ಅವಕಾಶ ನೀಡಿದ್ದರೆ, ಗಾಯಾಳು ಜಸ್‌ಪ್ರೀತ್‌ ಬುಮ್ರಾ ಸ್ಥಾನಕ್ಕೆ ಹರ್ಷಿತ್‌ ರಾಣಾಗೆ ಅವಕಾಶ ಕಲ್ಪಿಸಲಾಗಿದೆ. ಶಿವಂ ದುಬೆ, ಮೊಹಮ್ಮದ್‌ ಸಿರಾಜ್‌ ಹಾಗೂ ಯಶಸ್ವಿ ಜೈಸ್ವಾಲ್‌ ಅವರನ್ನು ಪ್ರಯಾಣ ಮಾಡದ ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಟೂರ್ನಿಯ ವೇಳೆ ಯಾರಾದರೂ ಆಟಗಾರ ಗಾಯಕ್ಕೆ ತುತ್ತಾದರೆ, ಅವರ ಸ್ಥಾನಕ್ಕೆ ಈ ಆಟಗಾರರ ಬರಲಿದ್ದಾರೆ. 2023ರ ಏಕದಿನ ವಿಶ್ವಕಪ್‌ ಫೈನಲ್‌ ಬಳಿಕ ಭಾರತ ತಂಡ, 50 ಓವರ್‌ಗಳ ಟೂರ್ನಿಗೆ ಮತ್ತೊಮ್ಮೆ ಬರುತ್ತಿದೆ.

ವರುಣ್‌ ಚಕ್ರವರ್ತಿ ಇನ್‌, ಜಸ್‌ಪ್ರೀತ್‌ ಬುಮ್ರಾ ಔಟ್‌: ಚಾಂಪಿಯನ್ಸ್‌ ಟ್ರೋಫಿಗೆ ಭಾರತದ ಪರಿಷ್ಕೃತ ತಂಡ!

ರೋಹಿತ್‌ ಶರ್ಮಾ-ಶುಭಮನ್‌ ಗಿಲ್‌ ಓಪನರ್ಸ್

ಇಂಗ್ಲೆಂಡ್‌ ಎದುರು ಎರಡನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಶುಭಮನ್‌ ಗಿಲ್‌ ಇನಿಂಗ್ಸ್‌ ಆರಂಭಿಸಲಿದ್ದಾರೆ. ಮೂರನೇ ಒಡಿಐನಲ್ಲಿ ಅರ್ಧಶತಕ ಬಾರಿಸಿದ್ದ ವಿರಾಟ್‌ ಕೊಹ್ಲಿ ಅನುಮಾನವಿಲ್ಲದೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಬೀಸಲಿದ್ದಾರೆ. ಆದರೆ, ಇವರು ಸ್ಥಿರ ಪ್ರದರ್ಶನದ ಕೊರತೆಯನ್ನು ಎದುರಿಸುತ್ತಿದ್ದಾರೆ. ಆದರೆ, ಅಹಮದಾಬಾದ್‌ನಲ್ಲಿ ತಮ್ಮ ಬ್ಯಾಟಿಂಗ್‌ನಲ್ಲಿ ಭರವಸೆ ಮೂಡಿಸಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಗೂ ಮುನ್ನ ಶ್ರೇಯಸ್‌ ಅಯ್ಯರ್‌ ಅವಕಾಶ ಬಗ್ಗೆ ಅನುಮಾನವಿತ್ತು. ಆದರೆ, ಮೊದಲನೇ ಹಾಗೂ ಮೂರನೇ ಏಕದಿನ ಪಂದ್ಯಗಳಲ್ಲಿ ಸ್ಪೋಟಕ ಬ್ಯಾಟ್‌ ಮಾಡಿದ್ದ ಅಯ್ಯರ್‌ ತಮ್ಮ ನಾಲ್ಕನೇ ಕ್ರಮಾಂಕದಲ್ಲಿ ಗಟ್ಟಿ ಮಾಡಿಕೊಂಡಿದ್ದಾರೆ. ಆರಂಭಿಕ ಎರಡು ಪಂದ್ಯಗಳಲ್ಲಿ ವಿಫಲರಾದರೂ ಮೂರನೇ ಪಂದ್ಯದಲ್ಲಿ 29 ಎಸೆತಗಳಲ್ಲಿ 40 ರನ್‌ಗಳಿಸಿದ್ದ ಕೆಎಲ್‌ ರಾಹುಲ್‌ಗೆ ಬಾಂಗ್ಲಾ ಪಂದ್ಯದಲ್ಲಿ ಅವಕಾಶ ಸಿಗಲಿದೆಯಾ? ಅಥವಾ ರಿಷಭ್‌ ಪಂತ್‌ಗೆ ಮಣೆ ಹಾಕಲಾಗುವುದಾ? ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಯಶಸ್ವಿ ಜೈಸ್ವಾಲ್‌ ಅಗತ್ಯವಿಲ್ಲ ಎಂದ ಆಕಾಶ ಚೋಪ್ರಾ!

ಇಬ್ಬರು ಬೌಲಿಂಗ್‌ ಆಲ್‌ರೌಂಡರ್‌ಗಳು

ಅಕ್ಷರ್‌ ಪಟೇಲ್‌ ಹಾಗೂ ರವೀಂದ್ರ ಜಡೇಜಾ ಅವರು ಬೌಲಿಂಗ್‌ ಆಲ್‌ರೌಂಡರ್‌ಗಳಾಗಿ ಭಾರತದ ಪ್ಲೇಯಿಂಗ್‌ XIನಲ್ಲಿ ಕಾಣಿಸಿಕೊಳ್ಳಬಹುದು. ಆ ಮೂಲಕ ವಾಷಿಂಗ್ಟನ್‌ ಸುಂದರ್‌ ಬೆಂಚ್‌ ಕಾಯಬಹುದು. ಅಕ್ಷರ್‌ ಐದನೇ ಕ್ರಮಾಂಕದಲ್ಲಿ ಆಡಬಹುದು. ಹಾರ್ದಿಕ್‌ ಪಾಂಡ್ಯ ಏಕೈಕ ವೇಗದ ಬೌಲಿಂಗ್‌ ಆಲ್‌ರೌಂಡರ್‌ ಆಗಿ ಆಡಲಿದ್ದಾರೆ. ಭಾರತಕ್ಕೆ ಹಾರ್ದಿಕ್‌ ಅತ್ಯಂತ ಪ್ರಮುಖ ಆಟಗಾರ.

ಭಾರತದ ವಿರುದ್ಧ 0-3 ಅಂತರದಲ್ಲಿ ಸೋತರೂ ಪರವಾಗಿಲ್ಲ, ಚಾಂಪಿಯನ್ಸ್‌ ಟ್ರೋಫಿ ಗೆಲ್ಲಬೇಕು: ಬೆನ್‌ ಡಕೆಟ್‌!

ಕುಲ್ದೀಪ್‌ ಯಾದವ್‌ಗೆ ಸ್ಥಾನ

ಏಕೈಕ ಸ್ಪಿನ್ನರ್‌ ಆಗಿ ಬೌಲಿಂಗ್‌ ವಿಭಾಗದಲ್ಲಿ ಕುಲ್ದೀಪ್‌ ಯಾದವ್‌ ಮತ್ತು ವರುಣ್‌ ಚಕ್ರವರ್ತಿ ನಡುವೆ ಪೈಪೋಟಿ ಏರ್ಪಡಬಹುದು. ಆದರೆ, ಅನುಭವದ ಆಧಾರದ ಮೇಲೆ ಕುಲ್ದೀಪ್‌ ಯಾದವ್‌ ಅವಕಾಶ ಸಿಗಲಿದೆ. ಇನ್ನು ಹೊಸ ಚೆಂಡನ್ನು ಮೊಹಮ್ಮದ್‌ ಶಮಿ ಜೊತೆ ಅರ್ಷದೀಪ್‌ ಸಿಂಗ್‌ ಹಂಚಿಕೊಳ್ಳುವುದು ಬಹುತೇಕ ಖಚಿತ.

ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್‌ ಕೀಪರ್‌), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್‌ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ