ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bomb Threat: ಮುಂಬೈ ಶಾಲೆಗೆ ಬಾಂಬ್‌ ಬೆದರಿಕೆಯ ಇಮೇಲ್; ಅಫ್ಜಲ್‌ ಗ್ಯಾಂಗ್‌ನಿಂದ ಬೆದರಿಕೆ!

ರಾಷ್ಟ್ರ ರಾಜಧಾನಿ ದೆಹಲಿಯ ಹತ್ತು ಹಲವು ಶಾಲೆಗಳಿಗೆ ನಿರಂತರವಾಗಿ ಹುಸಿ ಬಾಂಬ್‌ ಬೆದರಿಕೆ ಕರೆಗಳು ಬರುತ್ತಿದ್ದವು. ಇದೀಗ ಮುಂಬೈನ ಜೋಗೆಶ್ವರಿ ಪ್ರದೇಶದ ಶಾಲೆಗೆ ಬಾಂಬ್‌ ಬೆದರಿಕೆ ಬಂದಿದೆ. ಅಫ್ಜಲ್‌ ಗ್ಯಾಂಗ್‌ನಿಂದ ಬಾಂಬ್‌ ಇಡಲಾಗಿದೆ ಎಂದು ಸಂದೇಶ ರವಾನಿಸಲಾಗಿದೆ. ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂಬೈನ ಮತ್ತೊಂದು ಶಾಲೆಗೆ ಬಾಂಬ್‌ ಬೆದರಿಕೆಯ ಇಮೇಲ್‌ ಕಳುಹಿಸಿದ ಅಫ್ಜಲ್‌ ಗ್ಯಾಂಗ್!

Bomb Threat

Profile Deekshith Nair Jan 23, 2025 7:00 PM

ಮುಂಬೈ: ಕೆಲ ತಿಂಗಳುಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ(Delhi) ಹತ್ತು ಹಲವು ಶಾಲೆಗಳಿಗೆ ನಿರಂತರವಾಗಿ ಹುಸಿ ಬಾಂಬ್‌ ಕರೆಗಳು ಬಂದಿದ್ದವು. ಇದೀಗ ಮುಂಬೈನ(Mumbai) ಜೋಗೇಶ್ವರಿ-ಓಶಿವಾರ ಪ್ರದೇಶದ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ(Bomb Threat) ಇಮೇಲ್ ಸಂದೇಶವೊಂದು ಬಂದಿದೆ. ಬಾಂಬ್‌ ಬೆದರಿಕಯನ್ನು ಕಳುಹಿಸಿರುವ ವ್ಯಕ್ತಿ ತನ್ನನ್ನು ಅಫ್ಜಲ್‌ ಗ್ಯಾಂಗ್‌ನವನು ಎಂದು ಹೇಳಿಕೊಂಡಿದ್ದಾನೆ. ಇಮೇಲ್ ಸ್ವೀಕರಿಸಿದ ನಂತರ ಶಾಲೆಯ ಆಡಳಿತ ಮಂಡಳಿ ಪೋಲಿಸರಿಗೆ ದೂರು ನೀಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ತಂಡ ಶಾಲೆಗೆ ಆಗಮಿಸಿ ಸ್ಥಳ ಮಹಜರು ಮಾಡಿದ್ದಾರೆ.



ಜೋಗೇಶ್ವರಿ-ಓಶಿವಾರದ ಶಾಲೆಯ ಸುತ್ತಮುತ್ತು ಪೊಲೀಸರು ಮತ್ತು ಬಾಂಬ್‌ ಪತ್ತೆ ತಂಡ ಪರಿಶೀಲನೆ ನಡೆಸಿದ್ದು,ಯಾವುದೇ ಅನುಮಾನಸ್ಪದ ವಸ್ತುಗಳು ಕಂಡು ಬಂದಿಲ್ಲ ಎನ್ನಲಾಗಿದೆ. ಅಫ್ಜಲ್‌ ಗ್ಯಾಂಗ್‌ ಎಮದು ಹೇಳಿಕೊಂಡಿರುವ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ದೆಹಲಿಯ ಸುಮಾರು 30 ಶಾಲೆಗಳಿಗೆ ಬಾಂಬ್‌ ಬೆದರಿಕೆ

ಇತ್ತೀಚೆಗಷ್ಟೇ ದೆಹಲಿಯ ಸುಮಾರು 30 ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ವಿಷಯ ತಿಳಿದ ಪೊಲೀಸರು ಬಾಂಬ್ ಪತ್ತೆ ತಂಡ, ಶ್ವಾನದಳ ಹಾಗೂ ಅಗ್ನಿಶಾಮಕ ದಳದೊಂದಿಗೆ ದೌಡಾಯಿಸಿ, ಶಾಲಾ ಕಟ್ಟಡಗಳು ಮತ್ತು ಆವರಣಗಳಲ್ಲಿ ತೀವ್ರ ತಪಾಸಣೆ ನಡೆಸಿತ್ತು. ಆದರೆ, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿರಲಿಲ್ಲ. ಇದೊಂದು ಹುಸಿ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದರು.

ಈ ಸುದ್ದಿಯನ್ನೂ ಓದಿ:Bomb Threat: ದೆಹಲಿಯ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ ಕರೆ; ಕಳೆದ ಒಂದು ವಾರದಲ್ಲಿ 7ನೇ ಘಟನೆ

ದೆಹಲಿ ಪೊಲೀಸ್‌ ವಿಶೇಷ ಘಟಕವು ಕ್ರಿಮಿನಲ್ ಬೆದರಿಕೆ ಮತ್ತು ಪಿತೂರಿಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ಬೆದರಿಕೆ ಸಂದೇಶ ಕಳುಹಿಸಿದ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದರು. ‘ಇ-ಮೇಲ್ ವಿದೇಶದಿಂದ ಬಂದಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮ ಜಿಲ್ಲೆ ಸೇರಿದಂತೆ ಸುಮಾರು 30 ಶಾಲೆಗಳಿಗೆ ಇಂತಹ ಇಮೇಲ್‌ಗಳು ಬಂದಿವೆ’ ಡಿಸಿಪಿ (ಆಗ್ನೇಯ) ರವಿ ಸಿಂಗ್‌ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದರು.

ಡಿಸೆಂಬರ್ 9ರಂದು ದೆಹಲಿಯ 44 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಮೇ ತಿಂಗಳಲ್ಲಿ 250ಕ್ಕೂ ಅಧಿಕ ಶಾಲೆಗಳು, ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಿಗೆ ಇ-ಮೇಲ್ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು.