Monday, 6th January 2025

Murder Case: ನಡುಬೀದಿಯಲ್ಲಿ ಜೆಡಿಎಸ್​ ಮುಖಂಡನ ಲಾಂಗ್‌ನಿಂದ ಕೊಚ್ಚಿ ಬರ್ಬರ ಕೊಲೆ

venkatesh murder

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು (JDS leader) ನಡುಬೀದಿಯಲ್ಲೇ ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಕೊಲೆ (Murder Case) ಮಾಡಿರುವ ಘಟನೆ ಚಿಕ್ಕಬಳ್ಳಾಪುರದ (Chikkaballapura news) ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.

ಹತ್ಯೆಗೊಳಗಾದ ವ್ಯಕ್ತಿ ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50). ಎಂದಿನಂತೆ ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್‌ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಮನೆಯತ್ತ ಸ್ಕೂಟಿ ಏರಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ವೆಂಕಟೇಶ್‌ ಅವರಿಗೆ ಅಡ್ಡ ಬಂದು ಲಾಂಗ್‌ನಿಂದ ಬಲವಾಗಿ ಬೀಸಿದ್ದಾರೆ.

ಎಡಗೈ ತೋಳಿನ ಭಾಗ ಕಟ್ ಆಗಿ, ಬೈಕ್ ಸಮೇತ ವೆಂಕಟೇಶ್ ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಮನಸ್ಸೋ ಇಚ್ಛೆ ಮುಖಕ್ಕೆ ಹಾಗೂ ಹೊಟ್ಟೆ, ಎದೆಗೆ ಲಾಂಗ್‌ನಿಂದ ಕೊಚ್ಚಲಾಗಿದೆ. ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.‌ ಕೊಲೆಯ ಬರ್ಬರತೆ ಗಮನಿಸಿದರೆ ದ್ವೇಷದಿಂದ ಈ ಕೃತ್ಯ ನಡೆದಿರಬಹುದಾಗಿದೆ.

ಊರಿನ ರಸ್ತೆಯಲ್ಲಿರುವ ಬಾರ್ ಬಳಿ ಅಕ್ಕ ಪಕ್ಕದ ಕೆಲವು ಗ್ರಾಮದ ಯುವಕರು ಕುಡಿದು ಗಲಾಟೆ ಮಾಡುತ್ತಿದ್ದರು. ವೆಂಕಟೇಶ್‌ ಮೂರು ದಿನಗಳ ಹಿಂದೆ ಈ ಯುವಕರಿಗೆ ಬೈದು ಬುದ್ದಿವಾದ ಹೇಳಿದ್ದರು. ಹಾಗಾಗಿ ಆ ಹುಡುಗರು ಕೊಲೆ ಮಾಡಿರಬಹುದು ಎಂದು ವೆಂಕಟೇಶ್‌ ಅವರ ಪುತ್ರ ಶಂಕೆ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್​ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Road Accident: ಡಿವೈಡರ್‌ಗೆ ಕಾರು ಗುದ್ದಿಸಿದ ಹೈಸ್ಕೂಲ್‌ ವಿದ್ಯಾರ್ಥಿಗಳು, ಇಬ್ಬರು ಸಾವು