Murder Case: ಬೆಂಗಳೂರಿನ ಬೀದಿಯಲ್ಲಿ ಮರ್ಡರ್, ತಡರಾತ್ರಿ ದುಷ್ಕರ್ಮಿಗಳಿಂದ ವ್ಯಕ್ತಿಯ ಕೊಚ್ಚಿ ಕೊಲೆ
ಆಟೋದಲ್ಲಿ ಬಂದ ಮೂವರು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಮ್ರಾನ್ ಮೇಲೆ ಮಚ್ಚಿನಿಂದ ಯದ್ವಾತದ್ವಾ ಕೊಚ್ಚಿದ್ದು, ಸ್ಥಳದಲ್ಲೇ ಆತನನ್ನು ಸಾಯಲು ಬಿಟ್ಟು ರಿಕ್ಷಾದಲ್ಲೇ ಪರಾರಿಯಾಗಿದ್ದಾರೆ. ಇಮ್ರಾನ್ ಖಾನ್ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru crime) ತಡರಾತ್ರಿ ಮತ್ತೊಂದು ಬರ್ಬರ ಹತ್ಯೆ ಕೃತ್ಯ (murder case) ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಮೂವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‍ಬಿಆರ್ ಲೇಔಟ್‌ನಲ್ಲಿ, ಆಟೋದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಇಮ್ರಾನ್ ಖಾನ್ (32) ಎಂಬಾತನನ್ನು ಕೊಚ್ಚಿ ಕೊಲೆ ಮಾಡಿ (hacked to death) ಪರಾರಿಯಾಗಿದ್ದಾರೆ. ಹೆಚ್‌ಬಿಆರ್ ಲೇಔಟ್‌ನ 13ನೇ ಕ್ರಾಸ್‌ನಲ್ಲಿ ತಡರಾತ್ರಿ ಘಟನೆ ನಡೆದಿದೆ.
ಆಟೋದಲ್ಲಿ ಬಂದ ಮೂವರು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಮ್ರಾನ್ ಮೇಲೆ ಮಚ್ಚಿನಿಂದ ಯದ್ವಾತದ್ವಾ ಕೊಚ್ಚಿದ್ದು, ಸ್ಥಳದಲ್ಲೇ ಆತನನ್ನು ಸಾಯಲು ಬಿಟ್ಟು ರಿಕ್ಷಾದಲ್ಲೇ ಪರಾರಿಯಾಗಿದ್ದಾರೆ. ಇಮ್ರಾನ್ ಖಾನ್ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೊಲೆಯ ಹಿನ್ನೆಲೆಯಲ್ಲಿ ಹಳೆ ದ್ವೇಷವನ್ನು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಸಿಸಿಟಿವಿ ಫೂಟೇಜ್‌ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಬಾಲಕಿಯ ಅತ್ಯಾಚಾರಗೈದು ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ
ಕಲಬುರಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೋಮವಾರ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ. ಜಿಲ್ಲೆಯ (Kalaburagi News) ಆಳಂದ ತಾಲೂಕಿನ ದೇವಂತಗಿ ಗ್ರಾಮದ ಗುಂಡೇರಾವ ಚೋಪಡೆ (28) ಎಂಬಾತ ಮರಣದಂಡನೆಗೆ ಒಳಗಾದ ಅಪರಾಧಿ. 2023ರ ಜುಲೈ 15ರಂದು ಪುಸ್ತಕ ತರಲು ಆಳಂದ ತಾಲೂಕಿನ ಗ್ರಾಮವೊಂದರಿಂದ ಮತ್ತೊಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಕೃಷಿ ಕೆಲಸ ಮಾಡುತ್ತಿದ್ದ ಅಪರಾಧಿ ಗುಂಡೇರಾವ ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಬಾಯಿ ಒತ್ತಿ ಹಿಡಿದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಉಸಿರುಗಟ್ಟಿಸಿ ಕೊಂದು ಪಕ್ಕದ ಹೊಲದ ಬಾವಿಯಲ್ಲಿ ಶವವನ್ನು ಎತ್ತಿ ಹಾಕಿದ್ದ. ಯಾವುದೇ ನೇರ ಸಾಕ್ಷಿಗಳು ಇಲ್ಲದ್ದರಿಂದ ತನಿಖೆ ನಡೆಸುವುದು ಪೊಲೀಸರಿಗೂ ಸವಾಲಾಗಿತ್ತು. ಈ ಪ್ರಕರಣವು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ತನಿಖಾಧಿಕಾರಿ ಭಾಸು ಚವ್ಹಾಣ ನೇತೃತ್ವದಲ್ಲಿ ನಿಂಬರ್ಗಾ ಠಾಣೆ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ ಪೋಕ್ಸೋ ಕಾಯ್ದೆಯಡಿ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿದ್ದಾರೆ. ಕಾನೂನು ಪ್ರಾಧಿಕಾರದ ವತಿಯಿಂದ 4 ಲಕ್ಷ ರೂ. ಪರಿಹಾರವನ್ನು ಮೃತ ಬಾಲಕಿಯ ತಾಯಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಜಿಲ್ಲೆಯಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆಯಾಗಿದ್ದು ಇದೇ ಮೊದಲ ಪ್ರಕರಣ ಎನ್ನಲಾಗುತ್ತಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ಅವರು ವಾದ ಮಂಡಿಸಿದ್ದರು.
ಇದನ್ನೂ ಓದಿ: Om Prakash Murder Case: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಮಾಡಿದ ಪತ್ನಿಗೆ 14 ದಿನ ನ್ಯಾಯಾಂಗ ಬಂಧನ, ಕೇಸ್ ಸಿಸಿಬಿಗೆ