ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹುಣಸಮಾರನಹಳ್ಳಿ ಮಠದ ಸ್ವಾಮೀಜಿ ಅರೆಸ್ಟ್

Nanjeshwara Shivacharya Swamiji: ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡು ಸ್ವಾಮೀಜಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿ ವಂಚನೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬಳು ನೀಡಿದ ದೂರಿನ ಆಧಾರದ ಮೇಲೆ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡು, ಸ್ವಾಮೀಜಿಯನ್ನು ಅರೆಸ್ಟ್‌ ಮಾಡಿದ್ದಾರೆ.

ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಗಂಭೀರತೆಯನ್ನು ಅರಿತ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಅಧಿಕಾರಿಗಳು, ತಕ್ಷಣ ಎಫ್‌ಐಆರ್ ದಾಖಲಿಸಿಕೊಂಡು ಸ್ವಾಮೀಜಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಖಾಕಿ ಪಡೆಯು ಈ ಕುರಿತು ಕಟ್ಟುನಿಟ್ಟಿನ ವಿಚಾರಣೆ ಮತ್ತು ತನಿಖಾ ಪ್ರಕ್ರಿಯೆಯನ್ನು ತೀವ್ರಗೊಳಿಸಿದೆ. ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ, ವಂಚಿಸಿ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಸ್ವಾಮೀಜಿ ವಿರುದ್ಧ ಕೇಳಿಬಂದಿದೆ.

ಹುಣಸಮಾರನಹಳ್ಳಿ ಮಠವು ಬೆಂಗಳೂರಿನ ವಿಮಾನ ನಿಲ್ದಾಣದ ಹತ್ತಿರದ ಪ್ರಮುಖ ಪ್ರದೇಶದಲ್ಲಿ ನೂರಾರು ಕೋಟಿ ರೂ. ಮೌಲ್ಯದ ಜಮೀನನ್ನು ಹೊಂದಿದ್ದು, ಈ ಹಿಂದೆ 2017ರಲ್ಲೂ ಇವರ ವಿರುದ್ಧ ಇಂತಹದ್ದೇ ಆರೋಪಗಳು ಕೇಳಿಬಂದಿದ್ದವು. ಸದ್ಯ ಸ್ವಾಮೀಜಿಯ ಬಂಧನ ಧಾರ್ಮಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದು ನಿಜಕ್ಕೂ ಮೋಸದ ಪ್ರಕರಣವೇ ಅಥವಾ ಆಸ್ತಿ ವಿವಾದ ಹಾಗೂ ಬ್ಲ್ಯಾಕ್‌ಮೇಲ್ ತಂತ್ರವೇ ಎಂಬುದು ಪೊಲೀಸರ ಸಮಗ್ರ ತನಿಖೆಯಿಂದಷ್ಟೇ ಹೊರಬರಬೇಕಿದೆ.

ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ಮೇಲಿನ ವಿವಾದ ಇದು ಮೊದಲಲ್ಲ. ಇದಕ್ಕೂ ಮೊದಲು, 2017ರ ಅಕ್ಟೋಬರ್‌ನಲ್ಲೂ ಸಹ ಸ್ವಾಮೀಜಿಯವರ ವಿರುದ್ಧ ಇದೇ ರೀತಿಯಾಗಿ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹಾಗೂ ದೈಹಿಕ ಸಂಪರ್ಕದ ಆರೋಪಗಳು ಕೇಳಿಬಂದಿದ್ದು, ಆ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಭಕ್ತರು ಮಠದ ಮುಂದೆ ಪ್ರತಿಭಟನೆ ನಡೆಸಿ ಅವರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದರು.

ಪ್ರಸ್ತುತ ಮುನ್ನೆಲೆಗೆ ಬಂದಿರುವ ಅತ್ಯಾಚಾರ ಹಾಗೂ ವಂಚನೆಯ ಪ್ರಕರಣದ ಹಿಂದೆ ವೈಯಕ್ತಿಕ ದೂರುಗಳ ಜೊತೆಗೆ ಮಠದ ಆಸ್ತಿ ಮತ್ತು ಹಣಕಾಸಿನ ವಿವಾದಗಳ ಶಂಕೆಯೂ ಇದ್ದು, ಸತ್ಯಾಸತ್ಯತೆ ತನಿಖೆಯಿಂದಷ್ಟೇ ಹೊರಬರಬೇಕಿದೆ.