#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Narendra Modi: ಐತಿಹಾಸಿಕ ಕುಂಭಮೇಳದಲ್ಲಿ ಫೆ.5 ರಂದು ಪ್ರಧಾನಿ ಮೋದಿ ಭಾಗಿ; ಪುಣ್ಯ ಸ್ನಾನ!

ಐತಿಹಾಸಿಕ ಕುಂಭಮೇಳದಲ್ಲಿ ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದು,ಅಂದೇ ಅವರು ಪುಣ್ಯ ಸ್ನಾನ ಮಾಡಲಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ವೈಭವದಿಂದ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ಧಾರ್ಮಿಕ ಉತ್ಸವದಲ್ಲಿ ಮೋದಿಯ ಪಾಲ್ಗೊಳ್ಳುವಿಕೆ ಹಲವರಲ್ಲಿ ಸಂಭ್ರಮ ತಂದಿದೆ. ಜನವರಿ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು,ಉಪ ರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಮತ್ತು ಗೃಹ ಸಚಿವ ಅಮಿತ್‌ ಶಾ ಪಾಲ್ಗೊಳ್ಳುವ ಸಾಧ್ಯತೆಯಿದೆ. ಅವರು ಕೂಡ ಪುಣ್ಯ ಸ್ನಾನ ಮಾಡಲಿದ್ದಾರೆ.

ಕುಂಭಮೇಳಕ್ಕೆ ಪ್ರಧಾನಿ ಮೋದಿ ಭೇಟಿ ಯಾವಾಗ? ಇಲ್ಲಿದೆ ಡಿಟೇಲ್ಸ್‌

Narendra Modi

Profile Deekshith Nair Jan 22, 2025 2:00 PM

ಲಖನೌ: ಉತ್ತರಪ್ರದೇಶದ(Uttar Pradesh) ಪ್ರಯಾಗ್‌ರಾಜ್‌ನಲ್ಲಿ(Prayagraj) ನಡೆಯುತ್ತಿರುವ ಐತಿಹಾಸಿಕ ಮತ್ತು ಜಗತ್ತಿನ ಅತಿದೊಡ್ಡ ಧಾರ್ಮಿಕ ಉತ್ಸವವಾದ ಮಹಾ ಕುಂಭಮೇಳದಲ್ಲಿ(Mahakumbh) ಫೆಬ್ರವರಿ 5ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ(Narendra modi) ಅವರು ಪಾಲ್ಗೊಳ್ಳಲ್ಲಿದ್ದು,ಅಂದು ಅವರು ಗಂಗಾ ನದಿಯಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ವೈಭವದ ಕುಂಭಮೇಳದಲ್ಲಿ ಈಗಾಗಲೇ ಅನೇಕ ಗಣ್ಯಾತಿಗಣ್ಯರು, ಸಾಮಾನ್ಯರು, ಸಾಧು ಸಂತರು ಪುಣ್ಯಸ್ನಾನ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಕುಂಭಮೇಳಕ್ಕೆ ಯಾವಾಗ ಹೋಗುತ್ತಾರೆ ಎಂಬ ಸಹಜ ಕುತೂಹಲ ಹಲವರಲ್ಲಿತ್ತು.ಇದೀಗ ಮೋದಿ ಅವರ ಕುಂಭಮೇಳದ ಭೇಟಿಯ ಕುರಿತು ಅಧಿಕೃತ ಮಾಹಿತಿ ದೊರೆತಿದೆ. ಅವರು ಫೆಬ್ರವರಿ 5ರಂದು ಕುಂಭಮೇಳದಲ್ಲಿ ಭಾಗಿಯಾಗಲ್ಲಿದ್ದು ಪುಣ್ಯ ಸ್ನಾನ ಮಾಡಿ ಪೂಜೆ ಸಲ್ಲಿಸಲಿದ್ದಾರೆ.



ಮೂಲಗಳ ಪ್ರಕಾರ ಫೆಬ್ರವರಿ 5 ಕ್ಕೆ ಪ್ರಧಾನಿ ಮೋದಿ ಪ್ರಯಾಗ್ ರಾಜ್ ಕುಂಭಮೇಳಕ್ಕೆ ಆಗಮಿಸಲಿದ್ದಾರೆ. ಅಂದು ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ ಎಂಬ ಮಾಹಿತಿಯಿದೆ. ಜನವರಿ 27 ರಂದು ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಗೃಹ ಸಚಿವ ಅಮಿತ್ ಶಾ ಕೂಡ ಪುಣ್ಯ ಸ್ನಾನ ಮಾಡಲಿದ್ದಾರೆ.

ದೆಹಲಿ ಚುನಾವಣೆಯಂದೇ ಮೋದಿ ಪುಣ್ಯ ಸ್ನಾನ

ಫೆಬ್ರವರಿ 5ರಂದು ಮೋದಿ ಕುಂಭಮೇಳದಲ್ಲಿ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ಅಂದು ದೆಹಲಿ ವಿಧಾನಸಭಾ ಚುನಾವಣೆ ಕೂಡ ಇದೆ. ಬಿಜೆಪಿಯ ಗೆಲುವಿಗೆ ಮೋದಿ ಆ ದಿನದಂದೇ ಪುಣ್ಯ ಸ್ನಾನ ಮಾಡುತ್ತಿರಬಹುದಾ ಎಂಬ ಕುತೂಹಲ ಹಲವರಿಗಿದೆ. ದೆಹಲಿ ಚುನಾವಣೆಯು ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಚುನಾವಣೆಯಾಗಿದ್ದು,ಅಲ್ಲಿ ಗೆಲುವು ಸಾಧಿಸಲು ಸಾಕಷ್ಟು ಕಸರತ್ತು ನಡೆಸುತ್ತಿದೆ. ಆಮ್‌ ಆದ್ಮಿ ಮತ್ತು ಬಿಜೆಪಿ ಪಕ್ಷಕ್ಕೆ ನೇರ ಹಣಾಹಣಿಯಿದೆ. ನರೇಂದ್ರ ಮೋದಿ ಅವರು ತಮ್ಮ ಹಲವು ಭಾಷಣಗಳಲ್ಲಿ ದೆಹಲಿ ಚುನಾವಣೆಯಲ್ಲಿ ವಿಜಯ ಸಾಧಿಸುವ ವಿಶ್ವಾಸ ತೋರಿದ್ದಾರೆ.

ಯೋಗಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಇಂದು(ಜ. 22) ಮಹಾ ಕುಂಭಮೇಳದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ನಿನ್ನೆ ಬಿಡುಗಡೆಯಾದ ಅಧಿಕೃತ ಪ್ರಕಟಣೆಯ ಪ್ರಕಾರ, ಯೋಗಿ ಸಂಪುಟದ ಎಲ್ಲಾ 54 ಸಚಿವರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಈ ಸಭೆಯಲ್ಲಿ ಹಲವಾರು ಮಹತ್ವದ ಪ್ರಸ್ತಾವನೆಗಳು ಮತ್ತು ಯೋಜನೆಗಳಿಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ.

ಈ ಸುದ್ದಿಯನ್ನೂ ಓದಿ:Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

ಸಭೆಯ ನಂತರ, ಮುಖ್ಯಮಂತ್ರಿ ಆದಿತ್ಯನಾಥ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.