ರಾಯ್ಪುರ: ಛತ್ತೀಸ್‌ಗಢದ (Chhattisgarh) ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭರ್ಜರಿ ಬೇಟೆಯನ್ನು ನಡೆಸಿವೆ. ಸೋಮವಾರದಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ (Naxalites encounter) ಈವರೆಗೆ ಒಟ್ಟು 14 ಮಂದಿ ನಕ್ಸಲರು ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾರೆ. ನಕ್ಸಲ್ ಗುಂಪಿನ ಪ್ರಮುಖ ಸದಸ್ಯ ಜೈರಾಮ್ ಅಲಿಯಾಸ್ ಚಲಪತಿ ಎನ್‌ಕೌಂಟರ್‌ನಲ್ಲಿ ಹತನಾಗಿದ್ದು, ಇತನ ಸುಳಿವು ಕೊಟ್ಟವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಈ ಹಿಂದೆ ಘೋಷಣೆ ಮಾಡಲಾಗಿತ್ತು. ಈ ಕಾರ್ಯಾಚರಣೆಯನ್ನು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಶ್ಲಾಘಿಸಿದ್ದು, ‘ನಕ್ಸಲಿಸಂಗೆ ಮತ್ತೊಂದು ಪ್ರಬಲ ಹೊಡೆತ ಎಂದು ಹೇಳಿದ್ದಾರೆ.
ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು ಭದ್ರತಾ ಪಡೆಗಳ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದಾರೆ. ನಕ್ಸಲ್ ಮುಕ್ತ ಭಾರತ ನಿರ್ಮಾಣದಲ್ಲಿ ನಮ್ಮ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. CRPF, SoG ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ 14 ನಕ್ಸಲೈಟ್‌ಗಳನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ. ನಕ್ಸಲ್ ಮುಕ್ತ ಭಾರತಕ್ಕಾಗಿ ನಮ್ಮ ಸಂಕಲ್ಪ ಮತ್ತು ನಮ್ಮ ಭದ್ರತಾ ಪಡೆಗಳ ಜಂಟಿ ಪ್ರಯತ್ನದಿಂದ ನಕ್ಸಲಿಸಂ ಇಂದು ಕೊನೆಯುಸಿರೆಳೆದಿದೆ’ ಎಂದು ಬರೆದುಕೊಂಡಿದ್ದಾರೆ.
ಒಡಿಶಾದ ನುವಾಪಾದ ಜಿಲ್ಲೆಯ ಗಡಿಯಿಂದ ಕೇವಲ 5 ಕಿ.ಮೀ ದೂರದಲ್ಲಿರುವ ಛತ್ತೀಸ್‌ಗಢದ ಕುಲಾರಿಘಾಟ್ ಮೀಸಲು ಅರಣ್ಯದಲ್ಲಿ ಮಾವೋವಾದಿಗಳು ಅವಿತಿರುವ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜನವರಿ 19ರ ರಾತ್ರಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಎನ್‌ಕೌಂಟರ್ ಸ್ಥಳದಿಂದ ಸ್ವಯಂ-ಲೋಡಿಂಗ್ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಐಇಡಿಗಳ ದೊಡ್ಡ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ : Naxalites encounter: ಛತ್ತೀಸ್‌ಗಡದಲ್ಲಿ ಭದ್ರತಾ ಸಿಬ್ಬಂದಿಗಳ ಭರ್ಜರಿ ಬೇಟೆ ; 12 ನಕ್ಸಲರ ಎನ್‌ಕೌಂಟರ್
ಜನವರಿ 16 ರಂದು ಬಿಜಾಪುರ ಜಿಲ್ಲೆಯ ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಪುಟ್ಕೆಲ್ ಗ್ರಾಮದ ಬಳಿ ನಕ್ಸಲರು ಹಾಕಿದ್ದ ಐಇಡಿ ಸ್ಫೋಟದಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧಗಿಗೆ ಗಾಯಗೊಂಡಿದ್ದರು.