ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ನೇಪಾಳದ ವಿದ್ಯಾರ್ಥಿನಿ ಆತ್ಮಹತ್ಯೆ: ನೇಪಾಳಿಗಳನ್ನು ಕಾಲೇಜಿನಿಂದ ಹೊರಹಾಕುವಂತೆ ಪ್ರತಿಭಟಿಸಿದ ವಿದ್ಯಾರ್ಥಿಗಳು!

ಒಡಿಶಾದ ಭುವನೇಶ್ವರದ ಕಾಲೇಜುವೊಂದರಲ್ಲಿ ನೇಪಾಳಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ(ಫೆ.16) ಆಕೆ ಶವವಾಗಿ ಪತ್ತೆಯಾಗಿದ್ದಾಳೆ. ಈ ವಿಷಯ ಹೊರಬಿದ್ದ ಕೂಡಲೇ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ನೇಪಾಳಿ ವಿದ್ಯಾರ್ಥಿಗಳನ್ನು ಹೊರಹಾಕುವಂತೆ ಘೋಷಣೆ ಕೂಗಿದ್ದಾರೆ.

ನೇಪಾಳದ ವಿದ್ಯಾರ್ಥಿನಿ ಆತ್ಮಹತ್ಯೆ: ನೇಪಾಳಿಗಳನ್ನು ಹೊರಹಾಕಿದ ವಿವಿ

ಪ್ರತಿಭಟನೆ ನಡೆಸಿದ ಭುವನೇಶ್ವರ ಕಾಲೇಜಿನ ವಿದ್ಯಾರ್ಥಿಗಳು

Profile Deekshith Nair Feb 17, 2025 8:45 PM

ಭುವನೇಶ್ವರ: ಒಡಿಶಾದ(Odisha) ಭುವನೇಶ್ವರದ(Bhubaneshwar) ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ರೂಮಿನಲ್ಲಿ ಆತ್ಮಹತ್ಯೆ(Self Harming) ಮಾಡಿಕೊಂಡಿದ್ದು, ಭಾನುವಾರ(ಫೆ.16) ಸಂಜೆ ಶವವಾಗಿ ಪತ್ತೆಯಾಗಿದ್ದಾಳೆ. ಈ ವಿಷಯ ಹೊರಬಿದ್ದ ಬೆನ್ನಲ್ಲೇ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರಕೃತಿ ಲಾಮ್ಸಲ್ ಎಂಬ ಹೆಸರಿನ 3ನೇ ವರ್ಷದ ಬಿ.ಟೆಕ್ ವಿದ್ಯಾರ್ಥಿನಿಯಾಗಿದ್ದಳು. ಪ್ರತಿಭಟನಾಕಾರರು ನ್ಯಾಯಯುತ ತನಿಖೆಗೆ ಒತ್ತಾಯಿಸಿದ್ದಾರೆ. ವಿಶ್ವವಿದ್ಯಾಲಯವು 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳನ್ನು ಹೊರಹಾಕಿದೆ ಎಂದು ಮೂಲಗಳು ತಿಳಿಸಿವೆ.



ಏನಿದು ಪ್ರಕರಣ?

ಭುವನೇಶ್ವರದ ಕಾಲೇಜುವೊಂದರಲ್ಲಿ ನೇಪಾಳ ಮೂಲದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅವಳ ಹಾಸ್ಟೆಲ್‌ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದರಿಂದ ಆಕ್ರೋಶಗೊಂಡಿರುವ ಕಾಲೇಜು ವಿದ್ಯಾರ್ಥಿಗಳು ನೇಪಾಳಿ ವಿದ್ಯಾರ್ಥಿಗಳ ದೌರ್ಜನ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಪಾರದರ್ಶಕತೆಯ ತನಿಖೆಗಾಗಿ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Modi-Trump Meet: ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ; ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ

ಇನ್ನು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ಪರಿಸ್ಥಿತಿಯನ್ನು ಗಮನಿಸಿದ್ದು, ನವದೆಹಲಿಯಲ್ಲಿರುವ ರಾಯಭಾರ ಕಚೇರಿಯು ಒಡಿಶಾದಲ್ಲಿ ತೊಂದರೆಗೊಳಗಾದ ನೇಪಾಳಿ ವಿದ್ಯಾರ್ಥಿಗಳಿಗೆ ಸಲಹೆ ನೀಡಲು ಇಬ್ಬರು ಅಧಿಕಾರಿಗಳನ್ನು ಕಳುಹಿಸಿದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌ನಲ್ಲಿ ಉಳಿಯಲು ಅಥವಾ ಮನೆಗೆ ಮರಳಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬಿ-ಟೆಕ್‌ನ ಮೂರನೇ ವರ್ಷದಲ್ಲಿ ಓದುತ್ತಿರುವ ನೇಪಾಳಿ ವಿದ್ಯಾರ್ಥಿಯೊಬ್ಬ ನಿನ್ನೆ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆ ವಿದ್ಯಾರ್ಥಿನಿ ಕೆಐಐಟಿಯಲ್ಲಿ ಓದುತ್ತಿರುವ ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಳು ಎಂದು ಶಂಕಿಸಲಾಗಿದೆ. ಯಾವುದೋ ಕಾರಣದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.