ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಗುಡಿಬಂಡೆ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವಿಕಾಸ್, ಕಾರ್ಯದರ್ಶಿಗಳಾಗಿ ಎಲ್ಲೋಡು ಗ್ರಾಪಂ ವ್ಯಾಪ್ತಿಯ ಬುಳ್ಳಸಂದ್ರ ಗ್ರಾಮದ ಉದಯ್ ಕುಮಾರ್, ಬೀಚಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಬಂದಾರ್ಲಹಳ್ಳಿ ಗ್ರಾಮದ ನರಸಿಂಹಮೂರ್ತಿ ಹಾಗೂ ಗುಡಿಬಂಡೆ ತಾಲ್ಲೂಕು ಪ್ರಚಾರ ಸಮಿತಿ ಸದಸ್ಯರಾಗಿ ಬಾಲಾಜಿ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುಡಿಬಂಡೆ ತಾಲೂಕಿನ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Ashok Nayak Ashok Nayak Aug 7, 2025 12:22 PM

ಗುಡಿಬಂಡೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಎನ್.ಆದಿರೆಡ್ಡಿ ಅವರ ಅಧ್ಯಕ್ಷತೆ ಯಲ್ಲಿ ಹಮ್ಮಿಕೊಳ್ಳಲಾಗಿತ್ತು. 

ಈ ವೇಳೆ ಖಾಲಿಯಿದ್ದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗುಡಿಬಂಡೆ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವಿಕಾಸ್, ಕಾರ್ಯದರ್ಶಿಗಳಾಗಿ ಎಲ್ಲೋಡು ಗ್ರಾಪಂ ವ್ಯಾಪ್ತಿಯ ಬುಳ್ಳಸಂದ್ರ ಗ್ರಾಮದ ಉದಯ್ ಕುಮಾರ್, ಬೀಚಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಬಂದಾರ್ಲಹಳ್ಳಿ ಗ್ರಾಮದ ನರಸಿಂಹಮೂರ್ತಿ ಹಾಗೂ ಗುಡಿಬಂಡೆ ತಾಲ್ಲೂಕು ಪ್ರಚಾರ ಸಮಿತಿ ಸದಸ್ಯರಾಗಿ ಬಾಲಾಜಿ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು. 

ಇದನ್ನೂ ಓದಿ: Chikkaballapur News: ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸಭೆ

ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಶುಭಾಶಯ ಗಳನ್ನು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅದಿರೆಡ್ಡಿ, ಕಾರ್ಯಾಧ್ಯಕ್ಷರಾದ ಪ್ರಕಾಶ್ ರೆಡ್ಡಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಾಲೇನಹಳ್ಳಿ ರಮೇಶ್, ಗುಡಿಬಂಡೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಂಬರೀಷ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸೇರಿದಂತೆ ಹಲವರು ಇದ್ದರು.