GT vs SRH: ಸೂರ್ಯಕುಮಾರ್, ಕೊಹ್ಲಿ ಹಿಂದಿಕ್ಕಿ ಆರೆಂಜ್ ಕ್ಯಾಪ್ ಪಡೆದ ಸಾಯಿ ಸುದರ್ಶನ್
ಹೈದರಾಬಾದ್ ವಿರುದ್ಧ 23 ಎಸೆತಗಳಿಂದ 48 ರನ್ ಬಾರಿಸಿದ ಸಾಯಿ ಸುದರ್ಶನ್ ಒಟ್ಟಾರೆ 504 ರನ್ ಗಳಿಸುವ ಮೂಲಕ ಹಾಲಿ ಆವೃತ್ತಿಯಲ್ಲಿ ಅತ್ಯಧಿಕ ರನ್‌ಗಳಿಸಿದ ಆಟಗಾರ ಎನಿಸಿಕೊಂಡರು. 443 ರನ್ ಗಳಿಸಿರುವ ಆರ್‌ಸಿಬಿಯ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.


ಅಹಮದಾಬಾದ್: ಸನ್‌ರೈಸರ್ಸ್ ಹೈದರಾಬಾದ್(GT vs SRH) ವಿರುದ್ಧದ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟಾನ್ಸ್ ತಂಡದ ಯುವ ಆಟಗಾರ ಸಾಯಿ ಸುದರ್ಶನ್(Sai Sudharsan), ಮುಂಬೈ ಇಂಡಿಯನ್ಸ್ ತಂಡ ಸೂರ್ಯಕುಮಾರ್ ಯಾದವ್(suryakumar yadav) ಅವರನ್ನು ಹಿಂದಿಕ್ಕಿ ಮತ್ತೆ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಗುರುವಾರ ನಡೆದಿದ್ದ ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್(475 ರನ್) ಆರೆಂಜ್ ಕ್ಯಾಪ್ ಪಡೆದಿದ್ದರು.
ಹೈದರಾಬಾದ್ ವಿರುದ್ಧ 23 ಎಸೆತಗಳಿಂದ 48 ರನ್ ಬಾರಿಸಿದ ಸಾಯಿ ಸುದರ್ಶನ್ ಒಟ್ಟಾರೆ 504 ರನ್ ಗಳಿಸುವ ಮೂಲಕ ಹಾಲಿ ಆವೃತ್ತಿಯಲ್ಲಿ ಅತ್ಯಧಿಕ ರನ್‌ಗಳಿಸಿದ ಆಟಗಾರ ಎನಿಸಿಕೊಂಡರು. 443 ರನ್ ಗಳಿಸಿರುವ ಆರ್‌ಸಿಬಿಯ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಶನಿವಾರ ನಡೆಯುವ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 62 ರನ್ ಬಾರಿಸಿದರೆ ಅಗ್ರಸ್ಥಾನಕ್ಕೇರಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಳ್ಳುವ ಅವಕಾಶವಿದೆ.
The orange cap suits him, doesn't it? 🧢 pic.twitter.com/VuqRceyVzU
— Gujarat Titans (@gujarat_titans) May 2, 2025
ಪವರ್ ಪ್ಲೇಯಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಗಿಲ್ ಮತ್ತು ಸುದರ್ಶನ್ ಜೋಡಿ 82 ರನ್ ಬಾರಿಸಿತು. ಇದು ಐಪಿಎಲ್‌ನಲ್ಲಿ ಗುಜರಾತ್ ಗಳಿಸಿದ ಅತ್ಯಧಿಕ ಪವರ್ ಪ್ಲೇ ಮೊತ್ತವಾಗಿದೆ. ಈ ಜೋಡಿ ಮೊದಲ ವಿಕೆಟ್‌ಗೆ 87 ರನ್ ಬಾರಿಸಿತು.
ದಕ್ಷಿಣ ಆಫ್ರಿಕಾದ ಬೌಲಿಂಗ್ ಆಲ್‌ರೌಂಡರ್ ಜೆರಾಲ್ಡ್ ಕೋಡ್ಜಿ ಗುಜರಾತ್ ತಂಡದ ಪರ ಪದಾರ್ಪಣೆ ಮಾಡಿದರು. ಹಿಂದಿನ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಪರ 11 ಪಂದ್ಯ ಆಡಿದ್ದರು.
ಆಡುವ ಬಳಗ
ಗುಜರಾತ್ ಟೈಟಾನ್ಸ್: ಸಾಯಿ ಸುದರ್ಶನ್, ಶುಬ್ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿ.ಕೀ.), ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜೆರಾಲ್ಡ್ ಕೋಟ್ಜಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿ.ಕೀ), ಅನಿಕೇತ್ ವರ್ಮಾ, ಕಮಿಂದು ಮೆಂಡಿಸ್, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಜೀಶನ್ ಅನ್ಸಾರಿ, ಮೊಹಮ್ಮದ್ ಶಮಿ.